ETV Bharat / state

'ನನ್ನ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ': ಡಿಕೆಶಿ - DK Shivakumar - DK SHIVAKUMAR

'ನನ್ನ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ' ಎನ್ನುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್​ ಅವರು ಊಹಾಪೋಹಕ್ಕೆ ತೆರೆ ಎಳೆದಿದ್ದಾರೆ.

DK SHIVAKUMAR
ಡಿಸಿಎಂ ಡಿಕೆ ಶಿವಕುಮಾರ್​ (IANS)
author img

By ETV Bharat Karnataka Team

Published : Jun 28, 2024, 6:44 AM IST

ಬೆಂಗಳೂರು: "ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಚನ್ನಪಟ್ಟಣ ಉಪ ಸಮರದಲ್ಲಿ ಡಿಕೆಶಿ ಮಗಳು ಐಶ್ವರ್ಯ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಕೇಳಿ ಬರುತ್ತಿದೆ. ಈ ಸಂಬಂಧದ ಊಹಾಪೋಹಗಳಿಗೆ ಡಿ.ಕೆ. ಶಿವಕುಮಾರ್ ತೆರೆ ಎಳೆದಿದ್ದಾರೆ. ಎಕ್ಸ್​ಪೋಸ್ಟ್​​ ಮೂಲಕ ಈ ಸಾಧ್ಯತೆಯನ್ನು ನಿರಾಕರಿಸಿರುವ ಡಿಕೆಶಿ 'ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ' ಎಂದು ತಿಳಿಸಿದ್ದಾರೆ.'ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು' ಎಂದು ವಿನಂತಿಸಿದ್ದಾರೆ.

ಚನ್ನಪಟ್ಟಣ ಉಪಸಮರ ಸ್ಪರ್ಧೆ ಸಂಬಂಧ ಕೈ ಪಾಳಯದಲ್ಲಿ ಹಲವರ ಹೆಸರುಗಳು ಕೇಳಿ ಬರುತ್ತಿವೆ. ಈ ಪೈಕಿ ಇದೀಗ ಡಿಕೆಶಿ ಪುತ್ರಿ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಲಾರಭಿಸಿದೆ. ಈ ವದಂತಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿ ಚನ್ನಪಟ್ಟಣ ನೋಡೋದಕ್ಕೆ ಮೊದಲೇ ನಾನು ನೋಡಿದ್ದೇನೆ: ಡಿ.ಕೆ. ಶಿವಕುಮಾರ್ - DK Shivakumar

ETV Bharat Logo

Copyright © 2025 Ushodaya Enterprises Pvt. Ltd., All Rights Reserved.