ETV Bharat / state

ಹಾಸನ ವಿಡಿಯೋ ಹಗರಣದಲ್ಲಿ ಡಿ.ಕೆ.ಶಿವಕುಮಾರ್ ಪಾತ್ರವಿಲ್ಲ: ಸಚಿವ ಚೆಲುವರಾಯಸ್ವಾಮಿ - Chaluvarayaswamy

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್​​ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಅಶ್ಲೀಲ ವಿಡಿಯೋ ವೈರಲ್​​ ಆಗಿರುವುದರ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಪಾತ್ರವಿದೆ ಎಂಬ ಬಿಜೆಪಿ, ಜೆಡಿಎಸ್‌ ನಾಯಕರ ಆರೋಪಗಳಿಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದರು.

author img

By ETV Bharat Karnataka Team

Published : May 9, 2024, 7:05 AM IST

Minister Chaluvarayaswamy
ಸಚಿವ ಚೆಲುವರಾಯಸ್ವಾಮಿ (ETV Bharat)
ಸಚಿವ ಚೆಲುವರಾಯಸ್ವಾಮಿ (ETV Bharat)

ಬೆಂಗಳೂರು: "ವಿಡಿಯೋ ಮಾಡಿಕೊಂಡವರ, ಕೃತ್ಯದ ಬಗ್ಗೆ ಮಾತನಾಡುವುದು ಬಿಟ್ಟು, ವಿಡಿಯೋ ಹಂಚಿಕೆ ಬಗ್ಗೆ ಮಾತನಾಡಲಾಗುತ್ತಿದೆ. ಇದರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮಧ್ಯಪ್ರವೇಶವಾಗಿಲ್ಲ" ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಈ ಹಗರಣದಲ್ಲಿ ಯಾವುದೇ ಕಾರಣಕ್ಕೂ ಡಿ.ಕೆ.ಶಿವಕುಮಾರ್ ಮಧ್ಯಪ್ರವೇಶ ಮಾಡಿಲ್ಲ. ನೂರಕ್ಕೆ ನೂರರಷ್ಟು ಈ ವಿಚಾರಕ್ಕೂ ಅವರಿಗೂ ಸಂಬಂಧವಿಲ್ಲ. ಅವರು ಟೀಕಿಸಿರುವ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷರು ತಿರುಗೇಟು ನೀಡಿದ್ದಾರೆ. ಈ ವಿಚಾರಕ್ಕೂ ಮೊದಲೇ ಇಬ್ಬರ ನಡುವೆ ಟೀಕೆ, ಟಿಪ್ಪಣಿಗಳು ನಡೆದಿವೆ'' ಎಂದರು.

"ಈ ಅನಾಚಾರದ ವಿಡಿಯೋವನ್ನು ಯಾರೋ ಮಾಡಿದ್ದಲ್ಲ. ಸ್ವತಃ ಅವರೇ ಮಾಡಿಕೊಂಡಿರುವುದು. ಹಾಸನದಲ್ಲಿ ಎಲ್ಲರಿಗೂ ಹಂಚಿಕೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾದ ನಂತರ ಯಾವುದೂ ಯಾರ ಹಿಡಿತಕ್ಕೂ ಸಿಗುವುದಿಲ್ಲ. ವಿಚಾರ ಗಾಳಿಗೆ ಹೋದ ಮೇಲೆ ಯಾವ ದಿಕ್ಕಿಗೆ ಹೋಗುತ್ತದೆ ಎನ್ನುವುದು ಯಾರಿಗೂ ತಿಳಿದಿಲ್ಲ. ಇಂತಹ ಸೂಕ್ಷ್ಮ ವಿಚಾರವನ್ನು ಜನತಾದಳದವರು ಬೀದಿ ರಂಪ ಮಾಡುತ್ತಿದ್ದಾರೆ. ಅವರು ಯಾವ ವಿಚಾರಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂಬುದು ತಿಳಿಯುತ್ತಿಲ್ಲ. ಯಾವ ಸಾಧನೆ ಮಾಡಿದ್ದಾರೆ ಎಂದು ಪ್ರತಿಭಟನೆಗೆ ರಾಜ್ಯದಾದ್ಯಂತ ಕರೆ ಕೊಟ್ಟಿದ್ದಾರೆಂದು ತಿಳಿದಿಲ್ಲ. ಈ ವಿಚಾರ ಬೇರೆ ದಿಕ್ಕಿಗೆ ಹೋಗಲಿ ಎಂದು ಅವರು ಬಯಸಿದ್ದಾರೆ" ಎಂದು ಸಚಿವರು ಆರೋಪಿಸಿದರು.

ವಜಾ ಮಾಡಲು ಡಿಕೆಶಿ ಕೋಳಿ ಮರಿಯೇ?: "ಡಿ.ಕೆ.ಶಿವಕುಮಾರ್ ಅವರನ್ನು ಸಂಪುಟದಿಂದ ವಜಾ ಮಾಡಲು, ತೆಗೆದುಹಾಕಲು ಕೋಳಿ ಮರಿಯೇ?. ಸಿದ್ದರಾಮಯ್ಯ, ರಾಹುಲ್ ಗಾಂಧಿ ಅವರನ್ನು ಏಕವಚನದಲ್ಲಿ ಸಂಬೋಧಿಸುತ್ತಿದ್ದಾರೆ. ಅವರು ತಾವೇ ಉನ್ನತಮಟ್ಟದ ವ್ಯಕ್ತಿ ಎಂದುಕೊಂಡಿದ್ದಾರೆ. ಇಬ್ಬರ ನಡುವಿನ ದೂರವಾಣಿ ಸಂಭಾಷಣೆಯಲ್ಲೂ ಸಹ ಏನೂ ಇಲ್ಲ. ನಿನ್ನಿಂದ ಬಹಳ ಉಪಯೋಗವಾಗುತ್ತದೆ ಬಾ ಎಂದು ಹೇಳಿಲ್ಲ. ದೇವರಾಜೇಗೌಡ ಹಾಗೂ ಶಿವರಾಮೇಗೌಡ ಇಬ್ಬರೂ ಕೂಡ ಬಿಜೆಪಿ ನಾಯಕರಾಗಿರುವ ಕಾರಣಕ್ಕೆ ಪೋನ್ ನೀಡಿದಾಗ ಮಾತನಾಡಿದ್ದಾರೆ. ಅದು ಬಿಟ್ಟರೆ, ಈ ವಿಚಾರದಲ್ಲಿ ಅವರ ಮಧ್ಯಪ್ರವೇಶವಾಗಿಲ್ಲ" ಎಂದರು.

ನಾವು, ನೀವು ಈ ಸಮಾಜಕ್ಕೆ ಕಟ್ಟಾಳುಗಳಲ್ಲ: "ಸಮಾಜವನ್ನು ಈ ವಿಚಾರದಲ್ಲಿ ಎಳೆದು ತರುವುದು ಒಳ್ಳೆಯದಲ್ಲ. ನಾವು, ನೀವು ಈ ಸಮಾಜಕ್ಕೆ ಕಟ್ಟಾಳುಗಳಲ್ಲ. ಸಂದರ್ಭ ಬಂದಾಗ ಸಮಾಜ ನಮ್ಮನ್ನು, ನಿಮ್ಮನ್ನು ಬೆಂಬಲಿಸುತ್ತದೆ. ಸಮಾಜ ಒಂದಷ್ಟು ಜನರಿಗೆ ಹೆಚ್ಚೂ, ಕಡಿಮೆ ಆಶೀರ್ವಾದ ಮಾಡಿರಬಹುದು. ಆದರೆ ಎಲ್ಲವೂ ನಮ್ಮದೇ ಹಿಡಿತದಲ್ಲಿ ಇದೆ ಎಂದು ಭಾವಿಸುವುದು ತಪ್ಪು. ಸಮುದಾಯದವರು ನಮಗೂ, ನಿಮಗೂ ಆಶೀರ್ವಾದ ಮಾಡಿದ್ದಾರೆ. ನೀವು ಅಂದರೆ ಒಕ್ಕಲಿಗರು, ಒಕ್ಕಲಿಗರು ಎಂದರೆ ನೀವು. ನೀವು ಏನು ಮಾಡಿದರೂ ಒಕ್ಕಲಿಗರು ಬೆಂಬಲಕ್ಕೆ ನಿಲ್ಲುತ್ತಾರೆ ಎಂದುಕೊಂಡಿದ್ದೀರಾ?. ಕೆಂಪೇಗೌಡರು, ಕುವೆಂಪು ಅವರು ಹುಟ್ಟಿದ ಸಮುದಾಯ ಇದು. ಎಲ್ಲಾ ಜನಾಂಗದವರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಶಕ್ತಿ ಈ ಸಮುದಾಯಕ್ಕಿದೆ. ಈ ಸಮಾಜಕ್ಕೆ ತನ್ನದೇ ಆದ ಗೌರವವಿದೆ ಎನ್ನುವುದನ್ನು ಮರೆಯಬಾರದು" ಎಂದು ಹೇಳಿದರು.

ಏಕವಚನದಲ್ಲಿ ಮಾತನಾಡುವುದನ್ನು ನಿಲ್ಲಿಸಬೇಕು: "ಮೊದಲು ಏಕವಚನದಲ್ಲಿ ಮಾತನಾಡುವುದು, ಗದರಿಸಿ ಮಾತನಾಡುವುದನ್ನು ನಿಲ್ಲಿಸಬೇಕು. ನಿಮಗಿಂತ ಚೆನ್ನಾಗಿ ಏಕವಚನದಲ್ಲಿ ಮಾತನಾಡಲು ನಮಗೆ ಸಾಧ್ಯವಾಗುತ್ತದೆ. ಆದರೆ ನಾವು ಟಿವಿ ಮುಂದೆ ಕುಳಿತಾಗ ಈ ಮಾತುಗಳನ್ನು ಕೇಳಲು ಸಾಧ್ಯವಾಗದ ಕಾರಣ ಬಳಸುವುದಿಲ್ಲ. ನಿಮಗೆ ಏನನ್ನಿಸುತ್ತದೋ ತಿಳಿದಿಲ್ಲ. ಮುಖ್ಯಮಂತ್ರಿ ಮತ್ತು ಡಿಸಿಎಂ ವಿಚಾರದಲ್ಲಿ ಲಘುವಾಗಿ ಮಾತನಾಡುವುದು ಖಂಡನೀಯ" ಎಂದರು.

"ಶ್ರೇಯಸ್ ಪಟೇಲ್ ಕಾರು ಚಾಲಕನ ಜೊತೆ ಫೋಟೋ ತೆಗೆಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಇರುವ ನಮ್ಮ ಜೊತೆ ನೂರಾರು ಜನ ಫೋಟೋ ತೆಗೆಸಿಕೊಳ್ಳುತ್ತಿರುತ್ತಾರೆ. ಅವರ ಪೂರ್ವಾಪರ ತಿಳಿದುಕೊಂಡು ಪೋಟೋ ತೆಗೆಸಿಕೊಳ್ಳಲು ಆಗುತ್ತದೆಯೇ?. ಕರ್ನಾಟಕದಲ್ಲಿ ಇಡೀ ದೇಶ, ವಿದೇಶಗಳೇ ಗಮನ ಹರಿಸುವಂತಹ ಘಟನೆಗಳು ನಡೆಯುತ್ತಿವೆ. ಇಂತಹ ಘಟನೆಗಳು ನಡೆದಾಗ ಅಧಿಕಾರದಲ್ಲಿ ಯಾವುದೇ ಸರ್ಕಾರ ಇದ್ದರೂ ತನಿಖೆ ನಡೆಸಬೇಕಾಗಿರುವುದು ಕರ್ತವ್ಯ. ಆಡಳಿತ ಪಕ್ಷ ನೇಮಿಸಿರುವ ತನಿಖಾ ತಂಡವನ್ನು ವಿರೋಧ ಪಕ್ಷ ಒಪ್ಪಬೇಕು ಎಂದೇನಿಲ್ಲ. ಒಳ್ಳೆಯದನ್ನು ಒಳ್ಳೆಯದು ಎಂದು ಹೇಳುವ ಕಾಲ ದೂರವಾಗಿದೆ. ರಾಮರಾಜ್ಯದ ವಾತಾವರಣ ನಮ್ಮಲ್ಲಿ ಇಲ್ಲ" ಎಂದು ಹೇಳಿದರು.

"ಎಸ್​ಐಟಿ ವ್ಯವಸ್ಥೆ ಸರಿಯಿಲ್ಲ, ಅವರ ಮೇಲೆ ನಮಗೆ ನಂಬಿಕೆ ಇಲ್ಲ ಎಂದು ಜನತಾದಳದ ಮಿತ್ರರು ಹೇಳುತ್ತಿದ್ದಾರೆ. ಇನ್ನೂ ತನಿಖೆಯ ಪ್ರಾರಂಭದಲ್ಲೇ ತನಿಖೆ ಸರಿ ಇಲ್ಲ ಎನ್ನುವುದು ಎಷ್ಟು ಸರಿ?. ಇಡೀ ಕರ್ನಾಟಕ, ಕನ್ನಡಿಗರು ತಲೆ ತಗ್ಗಿಸುವ ವಿಚಾರ. ನೂರಾರು ಸಂಸಾರಗಳು ತಲೆ ತಗ್ಗಿಸಬೇಕಾಗಿದೆ. ತನಿಖೆ ಒಂದು ಹಂತಕ್ಕೆ ಹೋಗುವ ತನಕ ಬೀದಿಗೆ ಬಂದು ಮಾತನಾಡುವ ವಿಚಾರ ಇದಲ್ಲ" ಎಂದರು.

ಇದನ್ನೂ ಓದಿ: ಜೆಡಿಎಸ್​​ನಿಂದ ಉಚ್ಚಾಟನೆ ಪ್ರಶ್ನಿಸಿ ಹೈಕೋರ್ಟ್​​​ಗೆ ಸಿ.ಎಂ. ಇಬ್ರಾಹಿಂ ಅರ್ಜಿ - C M Ibrahim

ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, "ಇದು ಹೊಳೆನರಸೀಪುರಕ್ಕೆ ಸಂಬಂಧಿಸಿದ ವಿಚಾರ. ಕಾರ್ತಿಕ್, ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಅವರ ನಡುವೆ ನಡೆದ ಜಗಳದಿಂದ ಆಚೆ ಬಂದ ವಿಚಾರ. ಇಂತಹ ಸಂದರ್ಭದಲ್ಲಿ ರೇವಣ್ಣ, ಕುಮಾರಸ್ವಾಮಿ ಅವರು ಪ್ರಜ್ವಲ್​ಗೆ ಬಂಧನಕ್ಕೆ ಒಳಗಾಗು ಎಂದು ಕಿವಿಮಾತು ಹೇಳಬೇಕಾಗಿತ್ತು. ದೇವರಾಜೇಗೌಡರು ಅನೇಕ ದಿನಗಳಿಂದ ವಿಡಿಯೋ ವಿಚಾರದಲ್ಲಿ ಆರೋಪ ಮಾಡುತ್ತಲೇ ಬಂದಿದ್ದರು. ಎಸ್ಐಟಿಯನ್ನು ಅವರು ಸಹ ಸ್ವಾಗತಿಸಿದ್ದರು. ಆದರೆ ಇದ್ದಕ್ಕಿದ್ದಂತೆ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಯಾಕೆ ಎಳೆದುತಂದರೋ ಗೊತ್ತಿಲ್ಲ" ಎಂದು ಹೇಳಿದರು.

ಇದನ್ನೂ ಓದಿ: ಪ್ರಪಂಚದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣ ಮುಚ್ಚಿಹಾಕುವ ಹುನ್ನಾರ: ಸಚಿವ ಕೃಷ್ಣ ಬೈರೇಗೌಡ - Prajwal pen drive case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.