ETV Bharat / state

'ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್' ; ಶೃಂಗೇರಿಯಲ್ಲಿ ಘೋಷಣೆ ಕೂಗಿದ ಕಾರ್ಯಕರ್ತರು - DK SHIVAKUMAR

ಡಿ.ಕೆ. ಶಿವಕುಮಾರ್ ಮುಂದಿನ ಸಿಎಂ ಎಂದು ಶೃಂಗೇರಿಯಲ್ಲಿ ಕಾರ್ಯಕರ್ತರು ಘೋಷಣೆ ಕೂಗಿದರು.

ಡಿಸಿಎಂ ಡಿ.ಕೆ.ಶಿವಕುಮಾರ್
ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)
author img

By ETV Bharat Karnataka Team

Published : Jan 11, 2025, 9:11 PM IST

ಚಿಕ್ಕಮಗಳೂರು: ಮುಂದಿನ ಸಿಎಂ ಡಿ.ಕೆ. ಶಿವಕುಮಾರ್.. ಎಂದು ಕಾರ್ಯಕರ್ತರು ಕೂಗಿದ ಘಟನೆ ಶೃಂಗೇರಿಯಲ್ಲಿ ಇಂದು ನಡೆಯಿತು. ಶೃಂಗೇರಿ ಶಾರದಾ ಮಠದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಆಗಮಿಸಿದ್ದ ವೇಳೆ ಕಾರ್ಯಕರ್ತರು ಈ ಘೋಷಣೆ ಕೂಗಿದರು.

ಹೆಲಿಕಾಪ್ಟರ್​ನಲ್ಲಿ ಶೃಂಗೇರಿಗೆ ಆಗಮಿಸಿದ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಸ್ಥಳೀಯ ಶಾಸಕ ಟಿ. ಡಿ. ರಾಜೇಗೌಡ ಹಾಗೂ ಕಾಂಗ್ರೆಸ್ ಮುಖಂಡರು ಸ್ವಾಗತಿಸಿದರು. ಈ ವೇಳೆ ಮುಂದಿನ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಎಂದು ಕಾರ್ಯಕರ್ತರಿಂದ ಘೋಷಣೆ ಕೂಗು ಕೇಳಿಬಂತು.

ಶೃಂಗೇರಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ (ETV Bharat)

ಕಾರ್ಯಕರ್ತರು, ಡಿ. ಕೆ. ಶಿವಕುಮಾರ್ ಪರ ಘೋಷಣೆ ಕೂಗಿದರು. ಜೊತೆಗೆ ಡಿಸಿಎಂ ಅವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು.

ಇದೇ ವೇಳೆ ಮಾತನಾಡಿದ ಡಿ.ಕೆ. ಶಿವಕುಮಾರ್, ನನಗೆ ಯಾರ ಬೆಂಬಲವೂ ಬೇಡ. ನನಗಾಗಿ ಯಾರೂ ಕೂಗೋದು ಬೇಡ. ಯಾವ ನಾಯಕರು, ಶಾಸಕರು, ಬೆಂಬಲಿಗರು ಕೂಗೋದು ಬೇಡ ಎಂದರು.

ಶೃಂಗೇರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್
ಶೃಂಗೇರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)

ಸಿ.ಟಿ. ರವಿ ದೊಡ್ಡ ಡ್ರಾಮಾ ಮಾಸ್ಟರ್ ಆಗಿದ್ದಾರೆ. ಅವರನ್ನು ರಾಷ್ಟ್ರೀಯ ನಾಯಕರು, ಬಿಜೆಪಿ ರಾಷ್ಟ್ರೀಯ ಪದಾಧಿಕಾರಿ ಎಂದು ಭಾವಿಸಿದ್ದೆ. ಅವರ ಮಾತು, ವಿಚಾರ ನೋಡಿದ ನಂತರ ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಈ ಪ್ರಕರಣದಲ್ಲಿ ಅವರು ಬೇರೆ ಯಾರ ಮಾತು ಕೇಳಬೇಕಿಲ್ಲ. ಅವರ ಆತ್ಮಸಾಕ್ಷಿ ಮಾತನ್ನು ಕೇಳಲಿ. ಆ ರೀತಿ ಮಾತನಾಡಬಾರದಿತ್ತು ಎಂದು ಅವರ ಪಕ್ಷದ ನೂರು ನಾಯಕರು ನನ್ನ ಬಳಿ ಹೇಳಿದ್ದಾರೆ. ಅಚಾತುರ್ಯವಾಗಿ ಆ ರೀತಿ ಮಾತಾಡಿದ್ದು, ಕ್ಷಮೆ ಕೇಳುತ್ತೇನೆ ಎಂದಿದ್ದರೆ ಪ್ರಕರಣ ಮುಗಿಯುತ್ತಿತ್ತು. ಅದನ್ನು ಬಿಟ್ಟು ಸುಳ್ಳಿಗೆ ಸುಳ್ಳು ಸೇರಿಸಿಕೊಂಡು ಹೋದರೆ ಪ್ರಯೋಜನವಿಲ್ಲ. ಅವರ ಆರೋಪ ಸುಳ್ಳು. ಅವರದ್ದೇ ಅನೇಕ ತನಿಖಾ ತಂಡಗಳಿವೆಯಲ್ಲ ತನಿಖೆ ಮಾಡಿಸಲಿ ಎಂದು ಸಿ.ಟಿ.ರವಿ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದರು.

ನಕ್ಸಲರ ಶಸ್ತ್ರಾಸ್ತ್ರ ವಿಚಾರವಾಗಿ ಸಿ.ಟಿ. ರವಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, "ಮುಖ್ಯಮಂತ್ರಿಗಳ ಬಳಿ ಬಂದು ಶರಣಾಗುವಾಗ ಯಾರಾದರೂ ಬಂದೂಕು ಹಿಡಿದುಕೊಂಡು ಬರುತ್ತಾರಾ? ರವಿಗೆ ಇಷ್ಟು ಸಾಮಾನ್ಯ ಪ್ರಜ್ಞೆ ಇಲ್ಲವೇ?" ಎಂದು ಪ್ರಶ್ನಿಸಿದರು.

ಶೃಂಗೇರಿಯಲ್ಲಿ ವಿಶೇಷ ಪೂಜೆ : ನೇರವಾಗಿ ಶೃಂಗೇರಿ ಶಾರದಾ ಮಠಕ್ಕೆ ಆಗಮಿಸಿದ ಶಿವಕುಮಾರ್ ಅವರು ಆಡಳಿತ ಮಂಡಳಿ ಆಯೋಜನೆ ಮಾಡಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನಂತರ ಶೃಂಗೇರಿ ಶಾರದಾಂಬೆ ಸೇರಿದಂತೆ ಮಠದ ಆವರಣದಲ್ಲಿರುವ ದೇವರುಗಳಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು.

ನಂತರ ನರಸಿಂಹ ವನದ ಪಕ್ಕದಲ್ಲಿರುವ ಗುರು ನಿವಾಸಕ್ಕೆ ತೆರಳಿ, ಶ್ರೀಗಳ ಆಶೀರ್ವಾದ ಪಡೆದುಕೊಂಡರು. ಈ ವೇಳೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅವರಿಗೆ ಸಾಥ್ ನೀಡಿದರು.

ಇದನ್ನೂ ಓದಿ: ಸಿ ಟಿ ರವಿ ಕೇಸ್​ ರೂಲಿಂಗ್ ಬಳಿಕವೂ ಸಿಐಡಿ ತನಿಖೆಗೆ ವಹಿಸಿರುವುದಕ್ಕೆ ಆಕ್ಷೇಪ; ಗೃಹ ಸಚಿವರಿಗೆ ಹೊರಟ್ಟಿ ಪತ್ರ

ಇದನ್ನೂ ಓದಿ: 'ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ಕೆಲಸ, ಬೇರೆಯವರ ಮಾತು ಗೌಣ': ಡಿಕೆಶಿ ಖಡಕ್​ ನುಡಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.