ETV Bharat / state

ಈಶ್ವರಪ್ಪ ಅವರ ಮನೆಗೆ ನಾನೇ ಹೋಗ್ತೀನಿ, ಅವರೇ ನನಗೆ ಗುಂಡು ಹೊಡೆಯಲಿ: ಡಿಕೆ ಸುರೇಶ್

ದೇಶದ್ರೋಹಿ ಹೇಳಿಕೆ ನೀಡಿದವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ ಎಂಬ ಹೇಳಿಕೆ ನೀಡಿರುವ ಮಾಜಿ ಸಚಿವ ಕೆಎಸ್​ ಈಶ್ವರಪ್ಪಗೆ ಸಂಸದ ಡಿಕೆ ಸುರೇಶ್ ಅವರು ಬೆಂಗಳೂರಿನಲ್ಲಿ ಇಂದು ತಿರುಗೇಟು ನೀಡಿದ್ದಾರೆ.

ಸಂಸದ ಡಿಕೆ ಸುರೇಶ್ ಮತ್ತು ಮಾಜಿ ಸಚಿವ ಕೆಎಸ್​ ಈಶ್ವರಪ್ಪ

author img

By ETV Bharat Karnataka Team

Published : Feb 10, 2024, 2:06 PM IST

ಬೆಂಗಳೂರು: ಈಶ್ವರಪ್ಪ ಅವರ ಮನೆಗೆ ನಾನೇ ಹೋಗ್ತೀನಿ. ಅವರೇ ನನಗೆ ಗುಂಡು ಹೊಡೆಯಲಿ ಎಂದು ಸಂಸದ ಡಿಕೆ ಸುರೇಶ್ ಅವರು ಮಾಜಿ ಸಚಿವ ಕೆಎಸ್​ ಈಶ್ವರಪ್ಪಗೆ ತಿರುಗೇಟು ನೀಡಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಶನಿವಾರ ಅವರು ಮಾತನಾಡಿದರು.

ದೇಶದ್ರೋಹಿಗಳಿಗೆ ಗುಂಡಿಕ್ಕುವ ಕಾನೂನು ತರಬೇಕು ಎಂಬ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ಬಹುಶಃ ಇತಿಹಾಸ ನಿಮಗೆಲ್ಲಾ ಗೊತ್ತಿದೆ. ಮಹಾತ್ಮ ಗಾಂಧಿ ಅವರನ್ನು ಕೊಂದ ಪಕ್ಷ ಅವರದ್ದು. ನಾನೊಬ್ಬ ಸಣ್ಣ ವ್ಯಕ್ತಿ. ಕನ್ನಡಿಗರ ಪರ ಮಾತನಾಡಿದ್ದಕ್ಕೆ‌ ಹೀಗೆ ಹೇಳಿರಬಹುದು. ಬಡವರ ಮಕ್ಕಳನ್ನು ಯಾಕೆ ಬಾವಿಗೆ ತಳ್ಳಬೇಕು?. ಬಡವರ ಮಕ್ಕಳನ್ನು ಯಾಕೆ ರೊಚ್ಚಿಗೆ ಎಬ್ಬಿಸ್ತಿರಾ‌‌?. ಪಕ್ಷದಲ್ಲಿ ಅವರನ್ನು ಮೂಲೆ ಗುಂಪು ಮಾಡಿದ್ದಾರೆ. ಅದಕ್ಕೆ ಗಮನ ಸೆಳೆಯಲು ಮಾತನಾಡ್ತಿದ್ದಾರೆ ಎಂದು ಟೀಕಿಸಿದರು‌.

ನಾನೇ ಸಮಯ ಕೊಡ್ತೀನಿ. ಒಂದು ವಾರದಲ್ಲಿ ಯಾವಾಗ ಅಂತಲೂ ಹೇಳುವೆ. ನಾನೇ ಈಶ್ವರಪ್ಪ ಅವರ ಮನೆಗೆ ಹೋಗ್ತೀನಿ. ಅವರೇ ನನಗೆ ಗುಂಡು ಹೊಡೆಯಲಿ.‌ ಹೇಳಿಕೆ ಮೂಲಕ ಬಡವರ ಮಕ್ಕಳನ್ನು ರೊಚ್ಚಿಗೆಬ್ಬಿಸುವುದು ಬೇಡ‌. ಅವರೇ ಆ ಕೆಲಸ ಮಾಡಲಿ ಎಂದು ಟಾಂಗ್ ನೀಡಿದರು.

ಘಟನೆ ಹಿನ್ನೆಲೆ: ಫೆ. 08 ರಂದು ದಾವಣಗೆರೆಲ್ಲಿ ನಡೆದ ಬಿಜೆಪಿ ಜಿಲ್ಲಾಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದ ಈಶ್ವರಪ್ಪ ಅವರು, ''ಸಂಸದ ಡಿಕೆ ಸುರೇಶ್, ಶಾಸಕ ವಿನಯ್ ಕುಲಕರ್ಣಿ ಇಬ್ಬರು ದೇಶದ್ರೋಹಿಗಳು. ಇಬ್ಬರನ್ನು ಪಕ್ಷದಿಂದ ಕಿತ್ತು ಬಿಸಾಕಬೇಕು. ಈ ವೇದಿಕೆಯಿಂದಲೇ ಇವರ ಹಾಗೆ ದೇಶ ವಿಭಜನೆಯ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೆ ತರುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುವೆ. ಈ ರೀತಿಯ ದೇಶ ವಿಭಜನೆ ಎಂಬುದು ಜವಾಹರಲಾಲ್ ನೆಹರು ಕಾಲದಿಂದ ಬಂದಿದೆ'' ಎಂದು ಖಾರವಾಗಿ ವಾಗ್ದಾಳಿ ನಡೆಸಿದ್ದರು. ಈ ಹೇಳಿಕೆ ಬಳಿಕ ಅವರ ವಿರುದ್ಧ ಇದೀಗ ಬೆಂಗಳೂರು ಮತ್ತು ದಾವಣಗೆರೆಯಲ್ಲಿ ದೂರು ಕೂಡ​ ದಾಖಲಾಗಿದೆ.

ದೂರಿಗೂ ಮುನ್ನ ಶಿವಮೊಗ್ಗದಲ್ಲಿ ಮಾತನಾಡಿದ್ದ ಕೆಎಸ್ ಈಶ್ವರಪ್ಪ, "ರಾಷ್ಟ್ರದ್ರೋಹಿಗಳನ್ನು ಗುಂಡಿಕ್ಕಿ‌ ಕೊಲ್ಲಿ ಎಂದಿರುವ ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ. ತಾಕತ್ತಿದ್ದರೆ ನನ್ನ ವಿರುದ್ಧ ಕೇಸು ದಾಖಲಿಸಲಿ" ಎಂದಿದ್ದರು. ''ನಾನು ದಾವಣಗೆರೆಯಲ್ಲಿ ಹೇಳಿದ ಮಾತಿಗೆ ಈಗಲೂ ಬದ್ಧನಾಗಿದ್ದೇನೆ‘‘ಎಂದು ಅವರು ಪುನರುಚ್ಚರಿಸಿದ್ದಾರೆ.

ಇದನ್ನೂ ಓದಿ: ಗುಂಡಿಕ್ಕಿ ಕೊಲ್ಲಬೇಕು ಹೇಳಿಕೆ: ಕೆಎಸ್ ಈಶ್ವರಪ್ಪ ವಿರುದ್ಧ FIR ದಾಖಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.