ETV Bharat / state

ರಾಯಚೂರು: ವೈದ್ಯ ಆತ್ಮಹತ್ಯೆಗೆ ಶರಣು, ಪ್ರಕರಣ ದಾಖಲು - DOCTOR DIED

ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Karnataka Team

Published : Jan 17, 2025, 4:34 PM IST

ರಾಯಚೂರು: ವೈದ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಹೊರವಲಯದಲ್ಲಿರುವ ಕ್ವಾರಿ ಬಳಿ ನಡೆದಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗಾಣಧಾಳ ಮೂಲದ ರಮೇಶ್ ಜಾದವ್​ ತುಳಸಿರಾಮ್(32) ಆತ್ಮಹತ್ಯೆ ಮಾಡಿಕೊಂಡ ವೈದ್ಯ ಎಂದು ಗುರುತಿಸಲಾಗಿದೆ‌.

ನಿನ್ನೆ(ಗುರುವಾರ) ರಾತ್ರಿ ಮುದಗಲ್ ಪಟ್ಟಣದ ಹೊರವಲಯದಲ್ಲಿರುವ ಕ್ವಾರಿಯ ಬಳಿ ಕಾರು ನಿಲ್ಲಿಸಿ, ಅಲ್ಲಿಂದ ಒಂದು ಕಿ.ಮೀ ಒಳಗಡೆ ನಡೆದುಕೊಂಡು ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ವಿಷಯ ತಿಳಿದ ಮುದಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಮುದಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಮೇಶ್ ಜಾದವ್​​ ಸಾವಿನ ಬಗ್ಗೆ ಪತ್ನಿ ಅನುಮಾನ ವ್ಯಕ್ತಪಡಿಸಿದ್ದು, ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ರಮೇಶ್ ಜಾದವ್​ ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದರು. ಪತ್ನಿ ಆಳಂದದಲ್ಲಿ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಹಾಸನ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಇದನ್ನೂ ಓದಿ: ಶಿವಮೊಗ್ಗ ಕೇಂದ್ರ ಕಾರಾಗೃಹದ ಸಜಾ ಬಂಧಿ ಆತ್ಮಹತ್ಯೆಗೆ ಯತ್ನ: ಆಸ್ಪತ್ರೆಗೆ ದಾಖಲು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.