ಬಳ್ಳಾರಿ: ನಗರದ ಬಿಮ್ಸ್ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ನ ಎಮರ್ಜೆನ್ಸಿ ವಾರ್ಡ್ನಲ್ಲಿ ವಿದ್ಯುತ್ ಇಲ್ಲದೆ ಮೊಬೈಲ್ ಟಾರ್ಚ್ನಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅತ್ಯಾಧುನಿಕ ಸೌಲಭ್ಯವಿರುವ ಟ್ರಾಮಾ ಕೇರ್ ಸೆಂಟರ್ನ ವಿದ್ಯುತ್ ಸಮಸ್ಯೆ ಬಗ್ಗೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ ಆರೋಗ್ಯ ಸಚಿವಾಲಯ ಘಟನೆ ಬಗ್ಗೆ ವರದಿ ಸಲ್ಲಿಸುವಂತೆ ಟ್ರಾಮಾ ಕೇರ್ ಸೆಂಟರ್ ಸೂಪರಿಂಡೆಂಟ್ಗೆ ಸೂಚನೆ ನೀಡಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಬಿಮ್ಸ್ ನಿರ್ದೇಶಕ ಗಂಗಾಧರ ಗೌಡ, "ಟ್ರಾಮಾ ಕೇರ್ ಸೆಂಟರ್‌ನಲ್ಲಿ ಅತ್ಯಾಧುನಿಕ ಸೇವೆ ಲಭ್ಯವಿದೆ. ಶಿಫ್ಟ್ ಆಧಾರದಲ್ಲಿ ವೈದ್ಯರನ್ನೂ ನಿಯೋಜಿಸಲಾಗಿದೆ. ವಿದ್ಯುತ್ ಹೋದಾಗ ಸ್ವಯಂಪ್ರೇರಿತವಾಗಿ ಜನರೇಟರ್ ಆನ್ ಮಾಡುವ ಸಾಧನವೊಂದು ಕೈಕೊಟ್ಟಿದೆ. ಅದನ್ನು ಸರಿಪಡಿಸಲು ತಾಂತ್ರಿಕ ವಿಭಾಗಕ್ಕೆ ಸೂಚಿಸಲಾಗಿದೆ. ಅಂದು ಕರ್ತವ್ಯದಲ್ಲಿದ್ದೂ ಸೇವೆ ನೀಡದ ಸಿಬ್ಬಂದಿಯ ಪಟ್ಟಿಯನ್ನು ವೈದ್ಯಾಧಿಕಾರಿಗಳಿಂದ ಕೇಳಿದ್ದೇನೆ. ಘಟನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ತಪ್ಪಿದ್ದರೆ ಸಿಬ್ಬಂದಿಯನ್ನು ಅಮಾನತು ಮಾಡಲಾಗುವುದು" ಎಂದು ತಿಳಿಸಿದರು.
ಇದನ್ನೂ ಓದಿ: ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಗಾಯಗೊಂಡಿದ್ದ ಬಾಲಕನ ತಲೆಗೆ ಹೊಲಿಗೆ ಹಾಕಿದ ಸರ್ಕಾರಿ ಆಸ್ಪತ್ರೆ ವೈದ್ಯರು
ಇದನ್ನೂ ಓದಿ: ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಸಹಿತ ಚೈನ್ ಹೊರ ತೆಗೆದ ಸರಕಾರಿ ವೆನ್ಲಾಕ್ ಆಸ್ಪತ್ರೆ