ETV Bharat / state

ರಾಷ್ಟ್ರಧ್ವಜಕ್ಕೆ ಅವಮಾನ ಮಾಡಬೇಡಿ: ಸ್ಪೀಕರ್ ಯು.ಟಿ. ಖಾದರ್ - ಸ್ಪೀಕರ್ ಯು ಟಿ ಖಾದರ್

ರಾಷ್ಟ್ರಧ್ವಜಕ್ಕೆ ಅವಮಾನ ಮಾಡಬೇಡಿ, ಮಾಡಿದ್ರೆ ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದು ಸದನದಲ್ಲಿ ಸ್ಪೀಕರ್ ಯು.ಟಿ. ಖಾದರ್ ಎಚ್ಚರಿಕೆ ನೀಡಿದರು.

National Flag  Speaker UT Khader  ರಾಷ್ಟ್ರಧ್ವಜ  ಸ್ಪೀಕರ್ ಯುಟಿ ಖಾದರ್  ಪ್ರತಿಪಕ್ಷದ ನಾಯಕ ಆರ್ ಅಶೋಕ್
ರಾಷ್ಟ್ರಧ್ವಜಕ್ಕೆ ಅವಮಾನ ಮಾಡಬೇಡಿ: ಸ್ಪೀಕರ್ ಯು.ಟಿ.ಖಾದರ್
author img

By ETV Bharat Karnataka Team

Published : Feb 28, 2024, 12:20 PM IST

ಬೆಂಗಳೂರು : ರಾಷ್ಟ್ರಧ್ವಜಕ್ಕೆ ಅವಮಾನ ಮಾಡಬೇಡಿ. ಒಂದು ವೇಳೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸ್ಪೀಕರ್ ಯು.ಟಿ. ಖಾದರ್ ಸದನದಲ್ಲಿ ಎಚ್ಚರಿಕೆ ನೀಡಿದರು. ಇಂದು ಬೆಳಗ್ಗೆ ಸದನ ಆರಂಭಗೊಂಡಾಗ, ಸೋಮವಾರ ಸಕಾಲಕ್ಕೆ ಆಗಮಿಸಿದ್ದ ಶಾಸಕರ ಹೆಸರುಗಳನ್ನು ಪ್ರಕಟಿಸಿದ ನಂತರ ಸಭಾಧ್ಯಕ್ಷರು ಅಧಿಕಾರಿಗಳಿಂದ ನನಗೆ ಮಾಹಿತಿ ಬಂದಿದೆ. ರಾಷ್ಟ್ರಧ್ವಜವನ್ನು ಸದನದೊಳಗೆ ತಂದಿದ್ದಾರೆ ಎಂಬ ಮಾಹಿತಿ ಇದೆ. ನನ್ನ ಜವಾಬ್ದಾರಿ, ಕರ್ತವ್ಯವನ್ನು ನಿಭಾಯಿಸಬೇಕು. ಯಾರೂ ಕೂಡ ಅವಮಾನ ಮಾಡಬಾರದು. ಸದನದ ಹೊರಗೆ ನಡೆದಿರುವ ಘಟನೆ ಬಗ್ಗೆ ಚರ್ಚೆ ಮಾಡಲು ಅಡ್ಡಿಯಿಲ್ಲ. ಅದರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ಆಗ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಬಿಜೆಪಿಯ ಎಲ್ಲಾ ಶಾಸಕರು ಆಕ್ರೋಶ ವ್ಯಕ್ತಪಡಿಸಿ, ಅಗೌರವ ನಾವು ಮಾಡಿಲ್ಲ. ಒಂದು ವೇಳೆ ನಾವು ಮಾಡಿದ್ದರೆ ಕಾನೂನು ಕ್ರಮ ಜರುಗಿಸಿ. ಭಾರತದ ಧ್ವಜವನ್ನು ಹಿಡಿದು ಬರುವುದು ತಪ್ಪೇ?, ಯಾರು ನಿಮಗೆ ಬಾವುಟವನ್ನು ತಂದಿದ್ದಾರೆ ಎಂದು ಹೇಳಿದರು ಅಂತಾ ಪ್ರಶ್ನಿಸಿದರಲ್ಲದೆ, ಭಾರತದ ಧ್ವಜವನ್ನು ಹಿಡಿಯಲು ನಮಗೆ ಹೆಮ್ಮೆ ಎನಿಸುತ್ತದೆ ಎಂದರು.

ಈ ಸಂದರ್ಭದಲ್ಲಿ ಆಡಳಿತ ಪಕ್ಷದ ಹಲವು ಸದಸ್ಯರು ಎದ್ದು ನಿಂತು ಪ್ರತಿಯಾಗಿ ಮಾತನಾಡಲು ಮುಂದಾದಾಗ, ಗದ್ದಲ ಉಂಟಾಯಿತು. ಆಗ ಸಭಾಧ್ಯಕ್ಷರು ಸದನದ ಹೊರಗೆ ನಡೆದಿರುವ ವಿಚಾರ ಬಗ್ಗೆ ಸರ್ಕಾರ ತನಿಖೆ ಮಾಡಲಿ, ತಕ್ಷಣ ತಪ್ಪಿತಸ್ಥರಿದ್ದರೆ ಕ್ರಮ ಕೈಗೊಳ್ಳಲಿ. ಅಂತಹ ವಿಚಾರವನ್ನು ಯಾರೂ ಸಹಿಸುವುದಿಲ್ಲ ಎಂದು ಹೇಳಿದರು.

ಓದಿ: ಪಾಕ್‌ ಪರ ಘೋಷಣೆ ಆರೋಪ: ಸಮಗ್ರ ತನಿಖೆಯ ಅಗತ್ಯವಿದೆ ಎಂದ ಪರಮೇಶ್ವರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.