ETV Bharat / state

₹9,800 ಕೋಟಿ ವೆಚ್ಚದಲ್ಲಿ ಎಲ್ಲಾ ನೂತನ ಮೆಟ್ರೋ ಮಾರ್ಗಗಳಲ್ಲಿ ಡಬಲ್ ಡೆಕ್ಕರ್ ನಿರ್ಮಾಣ: ಡಿಸಿಎಂ - DK SHIVAKUMAR ON METRO PROJECTS

ಭವಿಷ್ಯದ ಬೆಂಗಳೂರು ಉತ್ತಮವಾಗಿರಬೇಕು ಎಂಬುದು ನನ್ನ ಕನಸು. ಈ ಹಿನ್ನೆಲೆಯಲ್ಲಿ ಎಲ್ಲಾ ನೂತನ ಮೆಟ್ರೋ ಮಾರ್ಗಗಳಲ್ಲಿ ಡಬಲ್ ಡೆಕ್ಕರ್ ನಿರ್ಮಾಣ ಮಾಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

DK SHIVAKUMAR ON METRO PROJECTS
ಬ್ರಾಂಡ್ ಬೆಂಗಳೂರು ಹಾಗೂ ನೂತನ ಮೆಟ್ರೋ ಮಾರ್ಗಗಳ ಬಗ್ಗೆ ಮಾಹಿತಿ ನೀಡುತ್ತಿರುವ ಡಿಸಿಎಂ ಡಿ ಕೆ ಶಿವಕುಮಾರ್ (ETV Bharat)
author img

By ETV Bharat Karnataka Team

Published : Feb 6, 2025, 8:22 PM IST

ಬೆಂಗಳೂರು: ನೂತನ ಮೆಟ್ರೋ ಮಾರ್ಗಗಳು ಹೋಗುವ ಕಡೆ ಡಬಲ್ ಡೆಕ್ಕರ್ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು.

ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದ ಇಲಾಖೆಗಳು, ಪ್ರಾಧಿಕಾರದ ಅಧಿಕಾರಿಗಳ ಜೊತೆ ನಗರ ಪ್ರದಕ್ಷಿಣೆ ನಡೆಸಿದ ನಂತರ ಬಿಎಂಆರ್​ಸಿಎಲ್ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, "ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆಗೆ ಕ್ರಮ ವಹಿಸಲಾಗುವುದು. ಈ ಸಂಬಂಧ ನೂತನ ಮೆಟ್ರೋ ಮಾರ್ಗಗಳು ಹೋಗುವ ಕಡೆ ಡಬಲ್ ಡೆಕ್ಕರ್ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ಮೂರನೇ ಹಂತದ ಮೆಟ್ರೋ ಮಾರ್ಗ ಅನುಷ್ಠಾನದ ವೇಳೆ ಡಬಲ್ ಡೆಕ್ಕರ್ ವ್ಯವಸ್ಥೆ ಇರಲೇಬೇಕು ಎನ್ನುವ ಪ್ರಮುಖ ತೀರ್ಮಾನ ತೆಗೆದುಕೊಳ್ಳಲಾಗಿದೆ. ದಿನಕಳೆದಂತೆ ಮುಂದಕ್ಕೆ ರಸ್ತೆಗಳನ್ನು ಅಗಲೀಕರಣ ಮಾಡಲು ಕಷ್ಟವಾಗುತ್ತದೆ. ಜೊತೆಗೆ ಭೂ ಸ್ವಾಧೀನ ಪರಿಹಾರವು ಹೆಚ್ಚಳವಾದ ಕಾರಣಕ್ಕೆ ಈ ಪ್ರಮುಖ ತೀರ್ಮಾನ ಮಾಡಲಾಗಿದೆ. ನನಗೆ ಏರ್ಪೋರ್ಟ್​ ರಸ್ತೆಯ ಮೆಟ್ರೋ ಮಾರ್ಗವನ್ನು ಈ ರೀತಿ ಮಾಡಬೇಕು ಎನ್ನುವ ಆಲೋಚನೆಯಿತ್ತು. ಈಗಾಗಲೇ ಪಿಲ್ಲರ್​​​​ಗಳನ್ನು ಹಾಕಿರುವ ಕಾರಣಕ್ಕೆ ಸಾಧ್ಯವಿಲ್ಲ" ಎಂದು ಹೇಳಿದರು.

ಬ್ರಾಂಡ್ ಬೆಂಗಳೂರು ಹಾಗೂ ನೂತನ ಮೆಟ್ರೋ ಮಾರ್ಗಗಳ ಬಗ್ಗೆ ಮಾಹಿತಿ ನೀಡುತ್ತಿರುವ ಡಿಸಿಎಂ ಡಿ ಕೆ ಶಿವಕುಮಾರ್ (ETV Bharat)

ಹೆಬ್ಬಾಳ, ಗೊರಗುಂಟೆಪಾಳ್ಯ, ಬಿಇಎಲ್ ಕಡೆಯ ರಸ್ತೆ, ಲೊಟ್ಟೆಗೊಲ್ಲಹಳ್ಳಿ, ಸುಮ್ಮನಹಳ್ಳಿ ಭಾಗದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರು, ಬಿಎಂಆರ್​ಸಿಎಲ್, ಬಿಡಿಎ ಕಮಿಷನರ್​ಗಳು ಒಟ್ಟಿಗೆ ನಗರ ಪ್ರದಕ್ಷಿಣೆ ಹಾಕಿ ಸಂಚಾರ ದಟ್ಟನೆ ಹೆಚ್ಚಿರುವ ಕಡೆ ಅನುಕೂಲವಾಗುವಂತೆ ಎಲ್ಲೆಲ್ಲಿ ಮೇಲ್ಸೇತುವೆ, ಅಂಡರ್ ಪಾಸ್ಗಳು, ಸುರಂಗ ರಸ್ತೆಗಳು ಮಾಡುವ ಬಗ್ಗೆ ಯೋಜನೆ ಹಾಕಿಕೊಂಡಿದ್ದೇವೆ ಎಂದು ವಿವರಿಸಿದರು.

ಈ ಹಿಂದೆಯೇ ಅಧಿಕಾರಿಗಳಿಗೆ ಈ ಬಗ್ಗೆ ಸಮೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿತ್ತು. ಅವರು ವರದಿ ತಯಾರು ಮಾಡಿದ್ದರು. ಆದರೆ, ನಾನೇ ಖುದ್ದಾಗಿ ಕಣ್ಣಾರೇ ನೋಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳು, ತಾಂತ್ರಿಕ ಸಿಬ್ಬದಿ ಜೊತೆ ನಗರ ಪ್ರದಕ್ಷಿಣೆ ಮಾಡಿದೆ. ಈ ವೇಳೆ ಎಲ್ಲೆಲ್ಲಿ ಭೂ ಸ್ವಾಧೀನ ಮಾಡಬೇಕು ಎನ್ನುವ ಬಗ್ಗೆಯೂ ಚರ್ಚೆ ಮಾಡಿದ್ದೇನೆ. ಭವಿಷ್ಯದಲ್ಲಿ ಮೆಟ್ರೋ ನಿಲ್ದಾಣಗಳು ಇರುವ ಕಡೆ ಹೆಚ್ಚಿನ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು. ಪ್ರಸ್ತುತ ಅನೇಕ ಕಡೆ ರಸ್ತೆ ಬದಿ, ಖಾಸಗಿ ಜಾಗಗಳಲ್ಲಿ ವಾಹನಗಳನ್ನು ನಿಲ್ಲಿಸಿ ಮೆಟ್ರೋ ಪ್ರಯಾಣ ಮಾಡುತ್ತಿದ್ದಾರೆ. ಇದನ್ನು ತಪ್ಪಿಸಲು ಸೂಚನೆ ನೀಡಲಾಗಿದೆ ಎಂದರು.

ಡಬಲ್ ಡೆಕ್ಕರ್​ಗೆ 9,800 ಕೋಟಿ ವೆಚ್ಚ : ಹೊಸದಾಗಿ ನಿರ್ಮಾಣ ಮಾಡುವ ಎಲ್ಲಾ ಮೆಟ್ರೋ ಮಾರ್ಗಗಳಲ್ಲಿ ಡಬಲ್ ಡೆಕ್ಕರ್ ನಿರ್ಮಾಣ ಮಾಡಲಾಗುವುದು. ಸುಮಾರು 40 ಕಿ.ಮೀ ಮಾರ್ಗದಲ್ಲಿ ನಿರ್ಮಾಣ ಮಾಡುವ ಆಲೋಚನೆ ಇದೆ. ನಾವು ಇಂದಿಗೆ ಮಾತ್ರ ಯೋಚನೆ ಮಾಡುತ್ತಿಲ್ಲ. ಮುಂದಿನ 30–40 ವರ್ಷದ ಭವಿಷ್ಯವನ್ನು ಇಟ್ಟುಕೊಂಡು ಆಲೋಚನೆ ಮಾಡುತ್ತಿದ್ದೇವೆ. ಇದರ ಖರ್ಚು ವೆಚ್ಚವನ್ನು ಶೇ.50:50 ಅನುಪಾತದಲ್ಲಿ ಬಿಬಿಎಂಪಿ, ಬಿಎಂಆರ್​ಸಿಎಲ್ ವಹಿಸಿಕೊಳ್ಳುತ್ತವೆ. ಡಬಲ್ ಡೆಕ್ಕರ್ ಮಾಡಲು ಹೆಚ್ಚುವರಿ ₹9,800 ಕೋಟಿ ವೆಚ್ಚವಾಗುತ್ತದೆ. ಈಗ ಪಶ್ಚಿಮ ಭಾಗದಲ್ಲಿ ಮಾತ್ರ ಮಾಡಲಾಗುತ್ತಿದೆ. ಈಗಾಗಲೇ ರಾಗಿಗುಡ್ಡ ಭಾಗದಲ್ಲಿ ಈ ಪ್ರಯೋಗ ನಡೆಸಿ ಯಶಸ್ವಿಯಾಗಿದ್ದೇವೆ. ಇನ್ನೂ ಒಂದಷ್ಟು ಸುಧಾರಣೆಗಳನ್ನು ಮಾಡಿಕೊಳ್ಳಬೇಕಿದೆ. ಎಲ್ಲವನ್ನು ಬಗೆಹರಿಸಿ ಮುಂದುವರೆಯಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು.

ಮೆಟ್ರೋ ಪಿಲ್ಲರ್​ಗಳಲ್ಲಿ ಜಾಹೀರಾತಿಗೆ ಅವಕಾಶ : ಬ್ರಾಂಡ್ ಬೆಂಗಳೂರು ಯೋಜನೆಯಡಿ ನಗರವನ್ನು ಸೌಂದರ್ಯೀಕರಣ ಮಾಡುವ ಸಲುವಾಗಿ ಬಿಬಿಎಂಪಿ, ಬಿಎಂಆರ್​ಸಿಎಲ್ ಒಟ್ಟಿಗೆ ಸೇರಿ ತೀರ್ಮಾನ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಜೊತೆಗೆ ಮೆಟ್ರೋ ಪಿಲ್ಲರ್​ಗಳಲ್ಲಿ ಜಾಹೀರಾತಿಗೆ ಅವಕಾಶ ಮಾಡಿಕೊಡಬೇಕು. ಎರಡೂ ಸಂಸ್ಥೆಗಳು ಶೇ. 50:50 ಅನುಪಾತದಲ್ಲಿ ಕೆಲಸ ಮಾಡಬೇಕು, ಆದಾಯವನ್ನು ಇದೇ ಮಾದರಿಯಲ್ಲಿ ಹಂಚಿಕೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು.

ಮೆಟ್ರೋ ದರ ಹೆಚ್ಚಳ ಬಗ್ಗೆ ಮೂಗು ತೂರಿಸಲ್ಲ : ಮೆಟ್ರೋ ಪ್ರಯಾಣ ದರ ಹೆಚ್ಚಳದ ಬಗ್ಗೆ ಬಿಎಂಆರ್​ಸಿಎಲ್ ತೀರ್ಮಾನ ಮಾಡುತ್ತದೆ. ಇದಕ್ಕಾಗಿ ನ್ಯಾಯಮೂರ್ತಿ ನೇತೃತ್ವದಲ್ಲಿ ಕೇಂದ್ರದ ಸಮಿತಿ ರಚಿಸಲಾಗಿದ್ದು, ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಮೆಟ್ರೋ ಪ್ರಯಾಣ ದರ ಏರಿಕೆ ಬಗ್ಗೆ ಸಮಿತಿ ವರದಿ ಸಲ್ಲಿಕೆ ಮಾಡಿದೆ. ಈಗಾಗಲೇ ನಿಗಮವು ಒಂದು ತೀರ್ಮಾನ ತೆಗೆದುಕೊಂಡಿದೆ. ನಾನು ಆ ವರದಿಯಲ್ಲಿ ಏನಿದೆ ಎಂದು ಮೂಗು ತೂರಿಸಲು ಹೋಗುವುದಿಲ್ಲ ಎಂದರು.

ನೀರಿನ ದರ ಏರಿಕೆ ಬಗ್ಗೆ ಸಂಪುಟದಲ್ಲಿ ಚರ್ಚೆ : ನೀರಿನ ದರ ಏರಿಕೆ ಬಗ್ಗೆ ಪ್ರತಿಕ್ರಿಯಿಸಿ, ಕುಡಿಯುವ ನೀರಿನ ದರ ಏರಿಕೆ ವಿಚಾರವನ್ನು ಸಚಿವ ಸಂಪುಟ ಸಭೆಯ ಮುಂದೆ ಇಡಲಾಗುವುದು. ನೀರಿನ ದರ ಏರಿಕೆಯಾಗಿ 14 ವರ್ಷಗಳಾಗುತ್ತಾ ಬಂದಿದೆ. ಮಂಡಳಿಗೆ ವರ್ಷಕ್ಕೆ ₹1 ಸಾವಿರ ಕೋಟಿ ನಷ್ಟವಾಗುತ್ತಿರುವ ಕಾರಣಕ್ಕೆ ದರ ಏರಿಕೆ ಅನಿವಾರ್ಯವಾಗಿದೆ. ಬಿಡ್ಲ್ಯೂಎಸ್​ಎಸ್​ಬಿ ಅವರು ಈಗಾಗಲೇ ವರದಿ ನೀಡಿದ್ದು, ಇದನ್ನು ಕ್ಯಾಬಿನೆಟ್ ಮುಂದೆ ಇಡಲಾಗುವುದು ಎಂದರು.

ಬೆಂಗಳೂರು ಅಭಿವೃದ್ಧಿ; ಅನುದಾನದ ಬಗ್ಗೆ ಸಿಎಂಗೆ ವರದಿ : ಹೆಬ್ಬಾಳ ಮೇಲ್ಸೆತುವೆ ಬಳಿ ಇರುವ ಬಿಡಿಎ ಜಾಗದಲ್ಲಿ ಅಲ್ಲಿ ಪರ್ಯಾಯ ರಸ್ತೆ ಮಾಡಲಾಗುತ್ತಿದೆ. ಇದು ಏಪ್ರಿಲ್ 30ಕ್ಕೆ ಕಾಮಗಾರಿ ಮುಗಿಸಬೇಕು, ಮೇ ಹೊತ್ತಿಗೆ ಉದ್ಘಾಟನೆಯಾಗಬೇಕು ಎಂದು ಸೂಚಿಸಲಾಗಿದೆ. ಈ ಕಾರಣಕ್ಕೆ ಗುತ್ತಿಗೆದಾರರನ್ನು ಕರೆಸಿ ಸೂಚನೆ ನೀಡಲಾಗಿದೆ. ತುಮಕೂರಿನಿಂದ ಕೆ.ಆರ್. ಪುರಂಗೆ ಹೋಗುವ ರಸ್ತೆ ಬಳಿ ಸಂಚಾರ ದಟ್ಟಣೆಯನ್ನು ತಪ್ಪಿಸಲು ಅಂಡರ್ ಪಾಸ್ ನಿರ್ಮಾಣಕ್ಕೆ ಬಿಡಿಎ, ಮೆಟ್ರೋ, ಬಿಬಿಎಂಪಿ ಸೇರಿ ಅಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ತಿಳಿಸಲಾಗಿದೆ. ಈ ಕಾಮಗಾರಿಯನ್ನು ಬಿಡಿಎ ನಿರ್ವಹಿಸಲಿದೆ. ರಾಜ್ಯ ಬಜೆಟ್ ಇರುವ ಕಾರಣಕ್ಕೆ ಬೆಂಗಳೂರು ಅಭಿವೃದ್ಧಿ ಹಾಗೂ ನೀರಾವರಿ ಇಲಾಖೆಗೆ ಬೇಕಾದ ಅನುದಾನಗಳ ಬಗ್ಗೆ ಅಧಿಕಾರಿಗಳ ಬಳಿ ಚರ್ಚೆ ಮಾಡಿ ಶುಕ್ರವಾರ ಮುಖ್ಯಮಂತ್ರಿಗಳಿಗೆ ನೀಡಲಾಗುವುದು ಎಂದು ಡಿಸಿಎಂ ಹೇಳಿದರು.

ಬಜೆಟ್​ನಲ್ಲಿ ಗ್ರೇಟರ್ ಬೆಂಗಳೂರು ಘೋಷಣೆ ಮಾಡಲಾಗುವುದೇ ಎಂಬ ಪ್ರಶ್ನೆಗೆ, ಈ ವಿಚಾರದ ಬಗ್ಗೆ ಕ್ಯಾಬಿನೆಟ್​ನಲ್ಲಿ ಬಿಡದಿ ಬಳಿ ಟೌನ್ ಶಿಪ್ ನಿರ್ಮಾಣ ಮಾಡಲು ಒಪ್ಪಿಗೆ ನೀಡಲಾಗಿದೆ ಎಂದು ಕಾನೂನು ಸಚಿವರು ತಿಳಿಸಿದ್ದಾರೆ. ಈಗಾಗಲೇ ಸಾರ್ವಜನಿಕರ ಸಲಹೆ, ಸೂಚನೆಗಳನ್ನು ಪಡೆಯಲು ಆಹ್ವಾನ ನೀಡಲಾಗಿದೆ. ರಿಜ್ವಾನ್ ಅವರ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಶಾಸಕರ ಅಭಿಪ್ರಾಯ ಪಡೆಯಲಾಗಿದೆ. ಬೆಂಗಳೂರಿನ ಎಲ್ಲಾ ಶಾಸಕರ ಸಲಹೆ ಪಡೆಯಿರಿ ಎಂದು ನಾನೇ ಹೇಳಿದ್ದೇನೆ. ಮಾಧ್ಯಮಗಳ ಸಲಹೆಯನ್ನೂ ಸಹ ಪಡೆಯಲಾಗುವುದು ಎಂದು ತಿಳಿಸಿದರು.

ಎರಡನೇ ವಿಮಾನ ನಿಲ್ದಾಣದ ಬಗ್ಗೆ ಪ್ರತಿಕ್ರಿಯಿಸುತ್ತಾ, ಇದರ ಬಗ್ಗೆ ಚರ್ಚೆ ನಡೆಯುತ್ತಿದೆ. ನನಗೆ ಮತ್ತು ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಕೆಯಾಗುತ್ತದೆ. ನಂತರ ವಿಮಾನ ನಿಲ್ದಾಣ ಪ್ರಾಧಿಕಾರದ ಅಭಿಪ್ರಾಯ ಕೇಳಲಾಗುವುದು. ಅವರ ತೀರ್ಮಾನ ನಂತರ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ವ್ಯವಸ್ಥಿತ ನಗರ ಮಾಡುವ ಗುರಿ : ಬೆಂಗಳೂರನ್ನು ಇಡೀ ವಿಶ್ವ ನೋಡುತ್ತಿದೆ. ಆದರೆ, ಇದು ವ್ಯವಸ್ಥಿತವಾದ ನಗರವಾಗಲಿಲ್ಲ. ಆದ ಕಾರಣ ಇದನ್ನು ಇನ್ನೂ ವ್ಯವಸ್ಥಿತ ನಗರವನ್ನಾಗಿ ಮಾಡುವುದೇ ನನ್ನ ಗುರಿ. ಎಲ್ಲೆಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಬಹುದು ಎಂಬುದು ಅದು ನನ್ನ ಗುರಿ. ಭವಿಷ್ಯದ ಬೆಂಗಳೂರು ಉತ್ತಮವಾಗಿರಬೇಕು ಎಂಬುದು ನನ್ನ ಕನಸು ಎಂದರು.

ಟನಲ್ ರಸ್ತೆಯ ಬಗ್ಗೆ ಹೆಚ್ಚಿನ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸುತ್ತಾ, ಯಾವುದೇ ಟೀಕೆಗಳು ಇಲ್ಲದೇ ನೀವು ಬೆಳೆಯಲು ಸಾಧ್ಯವಿಲ್ಲ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂದರು.

ಬೆಂಗಳೂರಿನಲ್ಲಿ ಅನಧಿಕೃತ 17 ಲಕ್ಷ ಆಸ್ತಿಗಳು ಇರುವ ಬಗ್ಗೆ ಪ್ರತಿಕ್ರಿಯಿಸುತ್ತಾ, 25 ಲಕ್ಷ ಖಾತೆಗಳನ್ನು ತಯಾರು ಮಾಡಲಾಗಿದೆ. ಇನ್ನೂ 7 ಲಕ್ಷ ಖಾತೆಗಳನ್ನು ನೀಡುವುದು ಬಾಕಿಯಿದೆ. ಇದಕ್ಕೂ ಒಂದು ವ್ಯವಸ್ಥೆ ಮಾಡಲಾಗಿದ್ದು, ಈಗ ಅದನ್ನು ಬಹಿರಂಗಗೊಳಿಸುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಬೆಂಗಳೂರಲ್ಲಿ ಏರೋ ಇಂಡಿಯಾ ಶೋ: ಈ ರಸ್ತೆಗಳಲ್ಲಿ ಸಂಚಾರ ನಿಷೇಧ - ಬದಲಿ ಮಾರ್ಗ, ಪಾರ್ಕಿಂಗ್ ಸ್ಥಳದ ವಿವರ ಹೀಗಿದೆ - AERO INDIA SHOW

ETV Bharat Logo

Copyright © 2025 Ushodaya Enterprises Pvt. Ltd., All Rights Reserved.