ETV Bharat / state

ಈ ಬಾರಿ ಅದ್ಧೂರಿಯಾಗಿ ಮೈಸೂರು ದಸರಾ ಆಚರಣೆ: ಸಚಿವ ಡಾ.ಹೆಚ್.ಸಿ.ಮಹದೇವಪ್ಪ - Mysuru Dasara

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.​ಸಿ.ಮಹದೇವಪ್ಪ ದಸರಾ ಆಚರಣೆಯ ಕುರಿತು ಮಾತನಾಡಿದ್ದಾರೆ. ಈ ಬಾರಿ ನಾಡಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ತಿಳಿಸಿದರು.

Dr H C Mahadevappa
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ದಸರಾ ಆಚರಣೆ ಕುರಿತ ಕಾರ್ಯಕಾರಿ ಸಮಿತಿ ಸಭೆ (ETV Bharat)
author img

By ETV Bharat Karnataka Team

Published : Aug 16, 2024, 3:52 PM IST

Updated : Aug 16, 2024, 4:13 PM IST

ಸಚಿವ ಡಾ. ಹೆಚ್ ಸಿ ಮಹದೇವಪ್ಪ ಮಾತನಾಡಿದರು (ETV Bharat)

ಮೈಸೂರು: ಈ ಬಾರಿ ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದೆ. ಜನರು ಖುಷಿಯಿಂದಿದ್ದಾರೆ. ಆದ್ದರಿಂದ ವಿಶ್ವವಿಖ್ಯಾತ ನಾಡಹಬ್ಬ ದಸರಾವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಹೆಚ್.ಸಿ.ಮಹದೇವಪ್ಪ ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ದಸರಾ ಆಚರಣೆ ಕುರಿತ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಈ ಕುರಿತ ಹೈ ಪವರ್ ಕಮಿಟಿ ಸಭೆ ನಡೆಯಿತು. ಈ ಸಭೆಯಲ್ಲಿ ದಸರಾ ಆಚರಣೆಗೆ ಅನುದಾನ, ಅನುದಾನ ಬಳಕೆಗೆ 4ಜಿ ವಿನಾಯಿತಿ ನೀಡುವ ಬಗ್ಗೆ ಹಾಗೂ ದಸರಾ ಉದ್ಘಾಟಕರ ಆಯ್ಕೆ ಬಗ್ಗೆ ಚರ್ಚಿಸಲಾಗಿದೆ. ದಸರಾಗೆ ಹೆಚ್ಚಿನ ಪ್ರಾಯೋಜಕತ್ವ ಪಡೆಯಲು ಅಧಿಕಾರಿಗಳು ಮುಂದಾಗಬೇಕು. ಅಕ್ಟೋಬರ್ 3ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9.15ರಿಂದ 9.45 ಗಂಟೆಯೊಳಗೆ ದಸರಾ ಉದ್ಘಾಟನೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

Dasara meeting
ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು (ETV Bharat)

ದಸರಾಗೆ 40 ಕೋಟಿ ರೂ.ವರೆಗೂ ಅನುದಾನ ಬಳಕೆಗೆ ಅವಕಾಶ ಕಲ್ಪಿಸಲು ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ. ಮೈಸೂರು ನಗರದ ಎಲ್ಲಾ ರಸ್ತೆಗಳನ್ನು ಪರಿಶೀಲಿಸಿ ಗುಂಡಿ ಮುಚ್ಚಿ, ಮರು ಡಾಂಬರೀಕರಣ ಮಾಡಲಾಗುವುದು ಎಂದು ಹೇಳಿದರು.

ದಸರಾ ಆಚರಣೆಯಲ್ಲಿ ಅಧಿಕಾರಿಗಳು ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು. ಆಹಾರ ಮೇಳವನ್ನು ಸ್ಕೌಟ್ ಮತ್ತು ಗೈಡ್ಸ್ ಮೈದಾನ ಹಾಗೂ ಲಲಿತ ಮಹಲ್ ಪ್ಯಾಲೇಸ್ ಆವರಣದಲ್ಲಿ ಆಯೋಜಿಸಬೇಕು ಎಂದು ಸೂಚಿಸಿದರು.

ಕರ್ನಾಟಕ ಸರ್ಕಾರದ 5 ಗ್ಯಾರಂಟಿಗಳ ಕುರಿತ ಸ್ತಬ್ಧ ಚಿತ್ರಗಳಿರಬೇಕು. ಸರ್ಕಾರದ ಒಂದು ವರ್ಷದ ಸಾಧನೆಗಳ ಕುರಿತ ಸ್ತಬ್ಧ ಚಿತ್ರ ಇರಬೇಕು. ದೀಪಾಲಂಕಾರ 21 ದಿನಗಳ ಕಾಲ ಇರಬೇಕು. ದೀಪಾಲಂಕಾರ ದಸರಾ ಆಚರಣೆಯ ಮೆರುಗು ಹೆಚ್ಚಿಸುತ್ತದೆ. ದೀಪಾಲಂಕಾರವನ್ನು ದಸರಾ ಮಹೋತ್ಸವದಲ್ಲಿ ಪ್ರಮುಖ ವೃತ್ತಗಳಲ್ಲಿ ಮಾಡುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

Dasara meeting
ದಸರಾ ಆಚರಣೆ ಕುರಿತ ಕಾರ್ಯಕಾರಿ ಸಮಿತಿ ಸಭೆ (ETV Bharat)

ಯುವ ಸಂಭ್ರಮ ಹಾಗೂ ಯುವ ದಸರಾ ಕಾರ್ಯಕ್ರಮಗಳಿಗೆ ಕಳೆದ ಎರಡು ವರ್ಷಗಳಲ್ಲಿನ ಕಾರ್ಯಕ್ರಮಗಳು ಹಾಗೂ ಕಲಾವಿದರೂ ಪುನರಾವರ್ತನೆಯಾಗದಂತೆ ವಿಭಿನ್ನ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದೂ ಸಚಿವರು ಹೇಳಿದರು.

ಚಿಣ್ಣರ ದಸರಾ, ಮಹಿಳಾ ದಸರಾ ಹಾಗೂ ರೈತ ದಸರಾ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಸಬೇಕು. ಸ್ವತಂತ್ರ ದೇಶಾಭಿಮಾನದ ಸಂದೇಶಗಳನ್ನು ಸಾರುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುವ ಕಾರ್ಯಕ್ರಮಗಳನ್ನು ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಮಾತನಾಡಿ, 19 ಉಪ ಸಮಿತಿಗಳನ್ನು ರಚಿಸಲಾಗಿದೆ. ಗಜ ಪಯಣವನ್ನು ಆಗಸ್ಟ್ 21ರಂದು ನಿಗದಿ ಮಾಡಲಾಗಿದೆ. ಕರ್ನಾಟಕ ಸಂಭ್ರಮ 50 ಅನ್ನು ಆಚರಣೆ ಮಾಡಲಾಗುತ್ತಿದೆ. ಇದರ ಲಾಂಛನವನ್ನು ದಸರಾ ಆಚರಣೆಯಲ್ಲಿ ಅಳವಡಿಸಲಾಗುವುದು ಎಂದರು.

ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಮಾತನಾಡಿ, ವಾರ್ತಾ ಇಲಾಖೆಯ 20 ಬೋರ್ಡ್​ಗಳನ್ನು ಡಿಜಿಟಲೀಕರಣ ಮಾಡಿ ಅಲ್ಲಿ ದಸರಾ ಪ್ರಚಾರವನ್ನು ಮಾಡಬೇಕು. ಆಹಾರ ಮೇಳ ಕನಿಷ್ಠ 1 ತಿಂಗಳು ಇರಬೇಕು. ಮೇಳದಲ್ಲಿ ಸ್ವಚ್ಛತೆ ಕಾಪಾಡಿಕೊಂಡು ಗುಣಮಟ್ಟದ ಆಹಾರ ನೀಡಬೇಕು. ಕಡಿಮೆ ದರದಲ್ಲಿ ಆಹಾರ ನೀಡಬೇಕು ಎಂದು ಹೇಳಿದರು.

ಅರಣ್ಯ ವಸತಿ ಹಾಗೂ ವಿಹಾರ ಧಾಮಗಳ ನಿಗಮದ ಅಧ್ಯಕ್ಷ ಹಾಗೂ ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ಅರ್ಜುನ ಆನೆ ವೀರ ಮರಣ ಹೊಂದಿದೆ. ಅದರ ಹೆಸರಿನಲ್ಲಿ ಮಾವುತರಿಗೆ ಪ್ರಶಸ್ತಿ ನೀಡಬೇಕು ಎಂದು ಮನವಿ ಮಾಡಿದರು.

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಹರೀಶ್ ಗೌಡ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡಿ ಸಿದ್ದೇಗೌಡ, ಮೈಸೂರು ಸೇಲ್ಸ್ ಇಂಟರ್ ನ್ಯಾಶನಲ್ ಲಿಮಿಟೆಡ್​ನ ಅಧ್ಯಕ್ಷ ಹಾಗೂ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಪುಟ್ಟರಂಗ ಶೆಟ್ಟಿ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಸಭೆಯಲ್ಲಿ ಇದ್ದರು.

ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀವತ್ಸ, ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ರವಿಶಂಕರ್, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಎಂ.ಗಣೇಶ್ ಪ್ರಸಾದ್, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ, ವಿಧಾನ ಪರಿಷತ್ ಸದಸ್ಯ ವಿಶ್ವನಾಥ್, ಡಿ.ತಿಮ್ಮಯ್ಯ, ಕೆ.ವಿವೇಕಾನಂದ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಸೇರಿದಂತೆ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಅ.3ರಿಂದ 12ವರೆಗೆ ಅದ್ಧೂರಿ ಮೈಸೂರು ದಸರಾ: 'ನಾಡಹಬ್ಬ ಜನಪರವಾದ ಉತ್ಸವ ಆಗಬೇಕು' - ಸಿಎಂ - Mysuru Dasara 2024

Last Updated : Aug 16, 2024, 4:13 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.