ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿ ನಿಲ್ಲಿಸಿದ್ದ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಉಡುಪಿ ಕಡಿಯಾಳಿ ಒಕುಡೆ ಟವರ್ಸ್ ಬಳಿ ಗುರವಾರ ರಾತ್ರಿ ವೇಳೆ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ರಸ್ತೆ ಬದಿಯಲ್ಲಿ ದ್ವಿಚಕ್ರ ವಾಹನದಲ್ಲಿ ನಿಂತಿದ್ದ ವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ನೋಂದಣಿಯ ಸ್ವಿಫ್ಟ್ ಕಾರು ಪಲ್ಟಿಯಾಗಿದ್ದು, ಮಣಿಪಾಲದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅತೀ ವೇಗದಲ್ಲಿ ಕಾರು ಚಲಾಯಿಸಿಕೊಂಡು ಬಂದ ಚಾಲಕ ಒಮ್ಮೆಲೆ ಬ್ರೇಕ್ ಹಾಕಿದ ಪರಿಣಾಮ ಕಾರು ಪಲ್ಟಿಯಾಗಿ ರಸ್ತೆ ಬದಿಯ ವಾಹನಗಳಿಗೆ ಡಿಕ್ಕಿ ಹೊಡೆದಿದೆ.
ಕಾರು ಚಲಾಯಿಸುತ್ತಿದ್ದ ಯುವಕ ಹಾಗೂ ಮತ್ತೊಂದು ಕಡೆಯಲ್ಲಿ ಕುಳಿತಿದ್ದ ಯುವತಿಗೆ ಗಂಭೀರವಾದ ಗಾಯಾವಾಗಿ ಕಾರಲ್ಲೇ ಸಿಲುಕಿ ಕೊಂಡಿದ್ದು, ಸ್ಥಳೀಯರ ಸಹಾಯದಿಂದ ಹೊರತೆಗೆಯಲಾಗಿದೆ. ಅತ್ತ ಕೂಡಲೇ ಮಣಿಪಾಲದ ಆಸ್ಪತ್ರೆಗೆ ಸೇರಿಸಲಾಯಿತು. ರಸ್ತೆ ಬದಿಯಲ್ಲಿ ದ್ವಿಚಕ್ರವಾಹನದಲ್ಲಿ ನಿಂತಿದ್ದ ವೃದ್ಧರಿಗೆ ಗಂಭೀರ ಗಾಯವಾಗಿದೆ. ಉಡುಪಿ ನಗರ ಸಂಚಾರ ಪೊಲೀಸ್ ಠಾಣೆಯವರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಿಯರ್ ಬಾಟಲಿಯಿಂದ ಹೋಟೆಲ್ ಕಾರ್ಮಿಕನ ಹತ್ಯೆ: ಮಣಿಪಾಲದ ಮುಖ್ಯರಸ್ತೆಯ ಅನಂತ ಕಲ್ಯಾಣ ನಗರದ ಮಾರ್ಗದಲ್ಲಿ ಹೋಟೆಲ್ ಕಾರ್ಮಿಕನನ್ನು ಬಿಯರ್ ಬಾಟಲಿಯಿಂದ ಹೊಡೆದು, ಕತ್ತಿಗೆ ಚುಚ್ಚಿ ಕೊಲೆ ಮಾಡಿರುವ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ಹತ್ಯೆಯಾದಾತ ಹೊನ್ನಾವರದ ಕಾಸಕೋಡು ನಿವಾಸಿ ಶ್ರೀಧರ ಎಂದು ತಿಳಿದು ಬಂದಿದೆ. ಘಟನೆ ಗುರುವಾರ ರಾತ್ರಿ ಆಗಿದಾ ಅಥವಾ ಇಂದು ಬೆಳಗಿನ ಜಾವ ನಡೆದಿದೆಯಾ ಎಂಬುದು ಇಲಾಖೆಯ ಮೂಲಗಳಿಂದ ತಿಳಿಯಬೇಕಾಗಿದೆ. ಇಂದು ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ ಸ್ಥಳೀಯರ ಗಮನಕ್ಕೆ ಬಂದಿದ್ದು ಕೂಡಲೇ ಮಣಿಪಾಲ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಉಡುಪಿ ಜಿಲ್ಲಾ ಎಸ್ಪಿ ಡಾ. ಅರುಣ್ ಕುಮಾರ್, ಮಣಿಪಾಲ ಇನ್ಸೆಕ್ಟರ್ ದೇವರಾಜ್, ಮಂಜುನಾಥ್ ಸ್ಥಳಾಕ್ಕಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹಾಗೂ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಮಣಿಪಾಲ ಪೊಲೀಸ್ ಇಲಾಖೆಯವರು ಘಟನೆಯ ವಿವರಗಳನ್ನು ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಕರ್ನಾಟಕದ ಶಾಲಾ ಮಕ್ಕಳ ಪ್ರವಾಸದ ಬಸ್ ಕೇರಳದಲ್ಲಿ ಅಪಘಾತ: ಹಲವರಿಗೆ ಗಾಯ