ETV Bharat / state

ಬೀದಿ ನಾಯಿ ಮೇಲೆ ಕಾರು ಹರಿಸಿದ ಚಾಲಕ: ಹೆಬ್ಬಾಳ ಸಂಚಾರ ಠಾಣೆಯಲ್ಲಿ ಪ್ರಕರಣ - DRIVER RUNS CAR ON STRAY DOG

ಚಾಲಕನೊಬ್ಬ ಬೀದಿ ನಾಯಿ ಮೇಲೆ ಕಾರು ಹರಿಸಿರುವ ಘಟನೆ ಬೆಂಗಳೂರಿನ ಸಹಕಾರನಗರದಲ್ಲಿ ನಡೆದಿದೆ.

ಬೀದಿ ನಾಯಿಯ ಮೇಲೆ ಕಾರು ಹರಿಸಿದ ಚಾಲಕ
ಬೀದಿ ನಾಯಿಯ ಮೇಲೆ ಕಾರು ಹರಿಸಿದ ಚಾಲಕ (ETV Bharat)
author img

By ETV Bharat Karnataka Team

Published : Jan 15, 2025, 11:43 AM IST

ಬೆಂಗಳೂರು: ಬೀದಿ ನಾಯಿ ಮೇಲೆ ಕಾರು ಹರಿಸಿ ವಿಕೃತಿ ಮೆರೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜ.4 ರಂದು ಸಹಕಾರನಗರದ ಎಫ್ ಬ್ಲಾಕ್‌ನ 14ನೇ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದ್ದು, ದೀಪಕ್ ಧನಂಜಯ್ ಶೋಧನ್ ಎಂಬುವವರು ನೀಡಿದ ದೂರಿನ ಅನ್ವಯ ಆರೋಪಿ ಥಾರ್ ಕಾರು ಚಾಲಕನ ವಿರುದ್ಧ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜ.4ರ ರಾತ್ರಿ ವೇಗವಾಗಿ ಬಂದ ಥಾರ್ ಚಾಲಕ, ರಸ್ತೆಯಲ್ಲಿ ತಮ್ಮ ಪಾಡಿಗೆ ತಾವು ಮಲಗಿದ್ದ ನಾಯಿಮರಿಗಳತ್ತ ಕಾರು ನುಗ್ಗಿಸಿದ್ದಾನೆ. ಈ ವೇಳೆ ಕಾರಿನ ಚಕ್ರಕ್ಕೆ ಸಿಕ್ಕ ನಾಯಿಯೊಂದು ಸ್ಥಳದಲ್ಲೇ ಒದ್ದಾಡಿ ಬಳಿಕ ಪಕ್ಕದ ಚರಂಡಿಯಲ್ಲಿ ಪ್ರಾಣಬಿಟ್ಟಿದೆ. ನಾಯಿಗಳಿಗೆ ಊಟ ಹಾಕುತ್ತಿದ್ದ ಅಕ್ಕಪಕ್ಕದವರು ಸಿಸಿಟಿವಿ ದೃಶ್ಯಗಳನ್ನ ಪರಿಶೀಲಿಸಿದಾಗ ಥಾರ್ ಚಾಲಕನ ಕೃತ್ಯ ಬೆಳಕಿಗೆ ಬಂದಿದೆ.

ಘಟನೆಗೆ ಸ್ಥಳೀಯ ನಿವಾಸಿಗಳು, ಪ್ರಾಣಿ ಪ್ರಿಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳೀಯರಾದ ದೀಪಕ್ ಧನಂಜಯ್ ಶೋಧನ್ ನೀಡಿದ ದೂರಿನ ಅನ್ವಯ ಜ.14 ರಂದು ಹೆಬ್ಬಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ: ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿದ್ದ ಘಟನೆ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಕರ್ನಾಟಕ ಪ್ರಾಣಿ ದಯಾ ಮಂಡಳಿ ಸದಸ್ಯ ಅನಿರುದ್ಧ ಎಂಬುವರು ನೀಡಿದ ದೂರಿನ ಮೇರೆಗೆ ಕಾರು ಚಾಲಕ ಮಂಜುನಾಥ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

ಡಿ.31ರ ಸಂಜೆ ರಾಘವನಪಾಳ್ಯ ಬಳಿ ಮಲಗಿದ್ದ ನಾಯಿ ಮೇಲೆ ಉದ್ದೇಶಪೂರ್ವಕವಾಗಿ ಕಾರು ಹತ್ತಿಸಿದ ಪರಿಣಾಮ ಸ್ಥಳದಲ್ಲೇ ನಾಯಿ ಮೃತಪಟ್ಟಿದ್ದು, ಬಳಿಕ ಮೃತದೇಹವನ್ನ ಚೀಲದಲ್ಲಿಟ್ಟು ಸ್ಥಳಾಂತರಿಸಿದ್ದರು. ಈ ಸಂಬಂಧ ಜ.9ರಂದು ಸಾಮಾಜಿಕ ಜಾಲತಾಣ ಇನ್​​ಸ್ಟಾಗ್ರಾಮ್​ನಲ್ಲಿ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಅನಿರುದ್ಧ ತಿಳಿಸಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ತಲಘಟ್ಟಪುರ ಪೊಲೀಸರು ವಿಚಾರಣೆಗೆ ಬರುವಂತೆ ಚಾಲಕನಿಗೆ ನೋಟಿಸ್ ಜಾರಿ ಮಾಡಿದ್ದರು.

ಇದನ್ನೂ ಓದಿ: ಮಂಗಳೂರು: ಕೊಳವೆಬಾವಿಗೆ ಬಿದ್ದ ನಾಯಿಮರಿ ರಕ್ಷಿಸಿದ ಅಗ್ನಿಶಾಮಕ ದಳ-ವಿಡಿಯೋ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.