ತುಮಕೂರು: ಸ್ಪೋಟಕ ವಸ್ತುವನ್ನು ನೀರಿಗೆಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ರಿಯಾಲಿಟಿ ಶೋ ರನ್ನರ್ ಅಪ್ ಆಗಿದ್ದ ಡ್ರೋನ್ ಪ್ರತಾಪ್ ಅವರನ್ನು ಇಂದು ಮಧುಗಿರಿಯ ಮಿಡಿಗೇಶಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಸ್ಪೋಟಕ ವಸ್ತುವನ್ನು ನೀರಿಗೆಸೆದು ವಿಡಿಯೋವನ್ನು ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಿರುವ ಆರೋಪ ಡ್ರೋಣ್ ಪ್ರತಾಪ್ ಮೇಲಿದೆ. ಈ ಕುರಿತು ಮಿಡಿಗೇಶಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಯುಟ್ಯೂಬ್ನಲ್ಲಿ ಅಪ್ಲೋಡ್ ಆದ ವಿಡಿಯೋ ಆಧರಿಸಿ, ಬಿಎನ್ಎಸ್ ಕಾಯಿದೆಯ ಸೆಕ್ಷನ್ 288 ಮತ್ತು ಸ್ಪೋಟಕ ವಸ್ತುಗಳ ಕಾಯಿದೆ ಸೆಕ್ಷನ್-3ರ ಅಡಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಇದನ್ನೂ ಓದಿ: ರೈತರಿಗೆ ವಂಚನೆ ಆರೋಪ; ಬಿಗ್ ಬಾಸ್ ರನ್ನರ್ ಅಪ್ ಡ್ರೋನ್ ಪ್ರತಾಪ್ ವಿರುದ್ಧ ದೂರು - ಡ್ರೋನ್