ETV Bharat / state

ಸೋಡಿಯಂ ಬಳಸಿ ಸ್ಫೋಟ ಪ್ರಕರಣ: ಡ್ರೋನ್ ಪ್ರತಾಪ್‌ಗೆ 3 ದಿನ ಪೊಲೀಸ್ ಕಸ್ಟಡಿ - POLICE CUSTODY FOR DRONE PRATHAP

ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ಅವರನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಡ್ರೋನ್ ಪ್ರತಾಪ್‌
ಡ್ರೋನ್ ಪ್ರತಾಪ್‌ (ETV Bharat)
author img

By ETV Bharat Karnataka Team

Published : Dec 13, 2024, 9:16 PM IST

ತುಮಕೂರು: ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್​​ಬಾಸ್ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್​ ಅವರನ್ನು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪೊಲೀಸರ ಮನವಿಯ ಮೇರೆಗೆ ಮಧುಗಿರಿ ನ್ಯಾಯಾಧೀಶರು ಕಸ್ಟಡಿಗೆ ನೀಡಿದ್ದಾರೆ.

ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟಿಸಿದಷ್ಟೇ ಅಲ್ಲದೇ ಸ್ಫೋಟಗೊಂಡ ವಿಡಿಯೋವನ್ನು ಡ್ರೋನ್​ ಪ್ರತಾಪ್ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಯೂಟ್ಯೂಬ್‌ನಲ್ಲೂ ವಿಡಿಯೋ ಹಂಚಿಕೊಂಡಿದ್ದು, ವೈರಲ್ ಆಗಿತ್ತು. ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದ ಪೊಲೀಸರು, ಪ್ರತಾಪ್ ಮತ್ತು ಇತರ ಇಬ್ಬರನ್ನು ಗುರುವಾರ ಬಂಧಿಸಿದ್ದರು. ಬಳಿಕ ಇಂದು ಸ್ಥಳಕ್ಕೆ ಕರೆತಂದು ಮಹಜರು ನಡೆಸಿದ್ದರು.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಾಪ್, ಜಮೀನಿನ ಮಾಲೀಕ ಜಿತೇಂದ್ರ ಜೈನ್​ ಮತ್ತು ಇತರರ ವಿರುದ್ಧ ಬಿಎನ್ಎಸ್ ಕಾಯ್ದೆ ಸೆಕ್ಷನ್ 176, ಸಿಆರ್‌ಪಿಸಿ 158 ಎ ಮತ್ತು ಬಿ ಹಾಗೂ ಸ್ಫೋಟಕ ವಸ್ತುಗಳ ನಿಯಂತ್ರಣ ಕಾಯ್ದೆಯಡಿ ಮಧುಗಿರಿಯ ಮಿಡಿಗೇಶಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಸೋಡಿಯಂ ಬಳಸಿ ಸ್ಫೋಟ ಪ್ರಕರಣ: ಡ್ರೋನ್ ಪ್ರತಾಪ್ ಕರೆತಂದು ಸ್ಥಳ ಮಹಜರು ನಡೆಸಿದ ಪೊಲೀಸರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.