ETV Bharat / state

ಗಮನಿಸಿ: ನಾಳೆಯಿಂದ 3 ದಿನ ಇ-ಸ್ವತ್ತು ತಂತ್ರಾಂಶ ಸ್ಥಗಿತ - E Swathu

author img

By ETV Bharat Karnataka Team

Published : Jul 26, 2024, 12:48 PM IST

ಹೊಸ ಅವತರಣಿಕೆ ಬಿಡುಗಡೆ ಹಿನ್ನೆಲೆಯಲ್ಲಿ ಇ-ಸ್ವತ್ತು ತಂತ್ರಾಂಶ ಜುಲೈ 27 ರಿಂದ 29ರವರೆಗೆ ಮೂರು ದಿನ ಕಾರ್ಯನಿರ್ವಹಿಸುವುದಿಲ್ಲ.

ಇ-ಸ್ವತ್ತು ತಂತ್ರಾಂಶ ಸ್ಥಗಿತ
ವಿಧಾನಸೌಧ (ETV Bharat)

ಬೆಂಗಳೂರು: ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಪರಿಚಯಿಸುತ್ತಿರುವುದರಿಂದ ಜುಲೈ 27ರಿಂದ ಜುಲೈ 29ರವರೆಗೆ ಇ-ಸ್ವತ್ತು ತಂತ್ರಾಂಶ ಕಾರ್ಯನಿರ್ವಹಿಸುವುದಿಲ್ಲ. ಹಾಗಾಗಿ, ಸಾರ್ವಜನಿಕರು ಸಹಕಾರ ನೀಡುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.

ಸಾರ್ವಜನಿಕರ ಅನಾನುಕೂಲತೆಯನ್ನು ಕಡಿಮೆ ಮಾಡಲು ತಂತ್ರಾಂಶ ಕಾರ್ಯಾರಂಭಿಸಿದ ನಂತರ ಇ-ಸ್ವತ್ತು ತಂತ್ರಾಂಶದ ಕಾರ್ಯಾವಧಿಯನ್ನು ಆಗಸ್ಟ್ 2ರವರೆಗೆ ಪ್ರತಿನಿತ್ಯ ಸಂಜೆ 8 ಗಂಟೆಯವರೆಗೂ ಸೇವೆ ಸಲ್ಲಿಸಲು ಕಾಲಾವಧಿ ವಿಸ್ತರಿಸಲಾಗುವುದು ಎಂದು ಖರ್ಗೆ ಹೇಳಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಅಭಿವೃದ್ಧಿಪಡಿಸಲಾಗಿದ್ದು, ಈ ತಂತ್ರಾಂಶದ ಹೊಸ ಅವತರಣಿಕೆಯನ್ನು ಸಾರ್ವಜನಿಕರ ಸೇವೆಗೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಇ-ಸ್ವತ್ತು ತಂತ್ರಾಂಶದ ಬಳಕೆದಾರರಿಗೆ ಅನುಕೂಲವಾಗುವಂತೆ ಸಮಗ್ರ ಆವೃತ್ತಿಯೊಂದಿಗೆ ಸಜ್ಜುಗೊಳಿಸಲಾಗಿರುವ ಈ ತಂತ್ರಾಂಶದ ಮೂಲಕ ಸಾರ್ವಜನಿಕರ ಆಸ್ತಿಯನ್ನು ಗ್ರಾಮಠಾಣದ ಒಳಗೆ ಆಥವಾ ಹೊರಗೆ ಬರುವ ಬಗ್ಗೆ ಅಳತೆ ಮಾಡಿಸುವ ಪ್ರಕ್ರಿಯೆಯನ್ನು ಗ್ರಾಮ ಪಂಚಾಯತಿಯ ಹಂತದಲ್ಲಿ ದಿಶಾಂಕ್ ಆ್ಯಪ್ ಮೂಲಕ ನಿರ್ವಹಿಸಲು ಕ್ರಮವಹಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಂಡೂರು ಕಾಡಿನ ಎತ್ತರದ ಗುಹೆಗಳಲ್ಲಿ ಶಿಲಾಯುಗದ ಮಾನವನ ನೆಲೆಯ ಶೋಧ; ಸೂಕ್ಷ್ಮ ಶಿಲಾ ಆಯುಧಗಳು ಪತ್ತೆ - Stone Age Human site in Ballari

ETV Bharat Logo

Copyright © 2024 Ushodaya Enterprises Pvt. Ltd., All Rights Reserved.