ಮೈಸೂರು: ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆಯೊಂದರಲ್ಲಿ ಇ.ಡಿ ಅಧಿಕಾರಿಗಳು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
50:50 ನಿವೇಶನ ಹಂಚಿಕೆ ಹಗರಣದ ತನಿಖೆ ಸಂಬಂಧ ಮೈಸೂರಿನ ಜೆಎಲ್ಬಿ ರಸ್ತೆಯಲ್ಲಿರುವ ಕಚೇರಿಗೆ ಆಗಮಿಸಿರುವ ಇ.ಡಿ ಅಧಿಕಾರಿಗಳಿಂದ ಮುಡಾ ಅಧ್ಯಕ್ಷ ಹಾಗೂ ಕಾರ್ಯದರ್ಶಿ ಕಚೇರಿಯಲ್ಲಿ ದಾಖಲೆ ಪರಿಶೀಲನೆ ನಡೆಯುತ್ತಿದೆ.
ಈ ಕುರಿತು ಮುಡಾದ ಕಾರ್ಯದರ್ಶಿ ಪ್ರಸನ್ನಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿ, ''ಇ.ಡಿ ಅಧಿಕಾರಿಗಳ ತಂಡ ಮುಡಾಗೆ ಭೇಟಿ ನೀಡಿದೆ. ಅವರು ಕೇಳುವ ಎಲ್ಲ ಮಾಹಿತಿಗಳನ್ನು ನೀಡುತ್ತೇವೆ. ಇಂದು ಮತ್ತು ನಾಳೆ ಇ.ಡಿ ಅಧಿಕಾರಿಗಳ ತಂಡ ಕಡತಗಳ ಪರಿಶೀಲನೆ ನಡೆಸಲಿದೆ. ಇ.ಡಿ ಅಧಿಕಾರಿಗಳು ನಿರ್ದೇಶನ ನೀಡಿದರೆ ಹೆಚ್ಚಿನ ಮಾಹಿತಿ ನೀಡುತ್ತೇವೆ. ಅಲ್ಲಿಯವರೆಗೂ ಸಹಕಾರ ನೀಡಿ'' ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಮನವಿ ಮಾಡಿದರು.
ಇದನ್ನೂ ಓದಿ: ಮುಖ್ಯಮಂತ್ರಿಗಳನ್ನ ವಿಚಾರಣೆಗೆ ಒಳಪಡಿಸಿ; ಸ್ನೇಹಮಯಿ ಕೃಷ್ಣ ಮನವಿ
ಬಿಗಿ ಪೊಲೀಸ್ ಭದ್ರತೆ: ಇ.ಡಿ ಅಧಿಕಾರಿಗಳು ಬಂದಿರುವ ಹಿನ್ನೆಲೆಯಲ್ಲಿ, ಮುಡಾ ಕಚೇರಿಗೆ ಬಿಗಿ ಭದ್ರತೆ ನೀಡಲಾಗಿದೆ. ಇ.ಡಿ ಅಧಿಕಾರಿಗಳ ಜೊತೆ ಸಿಆರ್ಪಿಎಫ್ ಯೋಧರು ಕೂಡ ಆಗಮಿಸಿದ್ದಾರೆ. ಸುಮಾರು 20ಕ್ಕೂ ಹೆಚ್ಚು ಸಿಬ್ಬಂದಿ ಇದ್ದಾರೆ. ಯೋಧರಿಗೆ ಸ್ಥಳೀಯ ಪೊಲೀಸರು ಸಾಥ್ ನೀಡಿದ್ದಾರೆ. ಕಚೇರಿಗೆ ಯಾರೂ ಬಾರದಂತೆ ತಡೆ ಹಿಡಿಯಲಾಗಿದೆ. ಸಾರ್ವಜನಿಕರ ಸೇವೆಗೂ ಅವಕಾಶ ನೀಡಲಾಗಿಲ್ಲ.
ಇದನ್ನೂ ಓದಿ: ಮುಡಾ: 50:50 ಅನುಪಾತದ ನಿವೇಶನ ಹಂಚಿಕೆ ರದ್ದು ಮಾಡಬೇಕು- ಶಾಸಕ ಶ್ರೀವತ್ಸ