ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ (ಕೆಐಎಡಿಬಿ) ನಡೆದಿದ್ದ ಅವ್ಯವಹಾರ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು 1.5 ಕೋಟಿ ನಗದು ಹಾಗೂ ಬ್ಯಾಂಕ್ ಖಾತೆಯಲ್ಲಿದ್ದ 55 ಲಕ್ಷ ರೂ. ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಇದೇ ಆಗಸ್ಟ್ 9 ಹಾಗೂ 10ರಂದು ಕೆಐಎಡಿಬಿಯಲ್ಲಿ ಅವ್ಯವಹಾರದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಆರೋಪದ ಮಾಹಿತಿ ಮೇರೆಗೆ ಬೆಂಗಳೂರು ಹಾಗೂ ಧಾರವಾಡ ಕೆಐಎಡಿಬಿ ಕಚೇರಿಗಳು ಸೇರಿ ಒಟ್ಟು 12 ಕಡೆಗಳಲ್ಲಿ ದಾಳಿ ನಡೆಸಲಾಗಿತ್ತು.
'Dharwad Zonal office for projects such as Hubli Airport, IIT Dharwad etc. During the search operations various incriminating documents, digital evidences, Cash of Rs. 1.50 Crore and bank deposits amounting to Rs. 55 Lakhhas been seized/ freezed.
— ED (@dir_ed) August 13, 2024
ಹುಬ್ಬಳ್ಳಿ ವಿಮಾನ ನಿಲ್ದಾಣ ಹಾಗೂ ಧಾರವಾಡದ ಐಐಟಿ ಸೇರಿ ಮತ್ತಿತರ ಯೋಜನೆಗಳ ಭೂಸ್ವಾಧೀನದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿರುವ ಆರೋಪ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.
ಇದನ್ನೂ ಓದಿ: ಕೆಐಡಿಬಿಯಲ್ಲಿ ಬಹುಕೋಟಿ ವಂಚನೆ ಪ್ರಕರಣ: ಇಂದು ಮುಂದುವರಿದ ತನಿಖೆ, ಓರ್ವ ವಶ - ED Raids Continue