ETV Bharat / state

ಕೆಐಡಿಬಿಯಲ್ಲಿ ಬಹುಕೋಟಿ ವಂಚನೆ ಆರೋಪ: ಬೆಂಗಳೂರು, ಧಾರವಾಡ ಕಚೇರಿಗಳ ಮೇಲೆ ಇಡಿ ದಾಳಿ - ED Raids KIDB Offices - ED RAIDS KIDB OFFICES

ಕೆಐಡಿಬಿಯಲ್ಲಿ ಬಹುಕೋಟಿ ವಂಚನೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಬೆಂಗಳೂರು ಹಾಗೂ ಧಾರವಾಡದಲ್ಲಿರುವ ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

kidb-offices
ಕೆಐಡಿಬಿ ಕಚೇರಿ (ETV Bharat)
author img

By ETV Bharat Karnataka Team

Published : Aug 9, 2024, 5:58 PM IST

ಬೆಂಗಳೂರು, ಧಾರವಾಡದ ಕೆಐಡಿಬಿ ಕಚೇರಿಗಳ ಮೇಲೆ ಇಡಿ ದಾಳಿ (ETV Bharat)

ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ (ಕೆಐಡಿಬಿ) ಬಹುಕೋಟಿ ಅವ್ಯವಹಾರ ವಂಚನೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಬೆಂಗಳೂರು ಹಾಗೂ ಧಾರವಾಡದಲ್ಲಿರುವ ಕಚೇರಿಗಳ ಮೇಲೆ ಇಂದು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಭೂ ಸ್ವಾಧೀನ ಹೆಸರಲ್ಲಿ ನೂರಾರು ಕೋಟಿ ಹಣವನ್ನು ಅಧಿಕಾರಿಗಳು ಲೂಟಿ‌ ಮಾಡಿರುವ ಆರೋಪ ಕೇಳಿಬಂದಿತ್ತು. ಒಂದೇ ಭೂಮಿಗೆ ಎರಡೆರಡು ಬಾರಿ ಪರಿಹಾರದ ಹೆಸರಲ್ಲಿ ವಂಚನೆ, ರೈತರ ಹೆಸರಲ್ಲಿ ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದು ‌ಹಣ ಲೂಟಿ ಮಾಡಿರುವುದು, ಜೊತೆಗೆ ಐಡಿಬಿಐ ಬ್ಯಾಂಕ್ ಒಂದೇ ಶಾಖೆಯಲ್ಲಿ 24 ಖಾತೆಗಳನ್ನು ತೆರೆಯಲಾಗಿತ್ತು.

ಅಷ್ಟೇ ಅಲ್ಲದೇ, ಹುಬ್ಬಳ್ಳಿ ವಿಮಾನ ನಿಲ್ದಾಣದ ಭೂ ಸ್ವಾಧೀನ ಹೆಸರಲ್ಲಿ ಅಕ್ರಮ ಹಾಗೂ ಧಾರವಾಡ ಕೆಲಗೇರಿ ಹಾಗು ಮುಮ್ಮಿಗಟ್ಟಿ ಗ್ರಾಮಗಳಲ್ಲಿ ಭೂ ಸ್ವಾಧೀನ ಹೆಸರಲ್ಲಿ ಲೂಟಿ ಮಾಡಿರುವ ಆರೋಪ ಕೆಐಡಿಬಿ ಮೇಲಿದ್ದು, ಈ ಸಂಬಂಧ ನಗರದ ಖನಿಜ ಭವನದಲ್ಲಿರುವ ಕಚೇರಿ ಹಾಗೂ ಧಾರವಾಡದಲ್ಲಿ ಕಚೇರಿ ಮೇಲೆ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ: 407 ಎಕರೆ ಜಮೀನು ವಶಕ್ಕೆ ಮುಂದಾದ ಕೆಐಡಿಬಿ.. ಭೂಸ್ವಾಧೀನ ಕೈಬಿಡುವಂತೆ ರೈತರ ಒತ್ತಾಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.