ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಪಡೆದುಕೊಂಡಿದ್ದ 14 ನಿವೇಶನಗಳನ್ನು ಹಿಂತಿರುಗಿಸುವ ವಿಚಾರದಲ್ಲಿ ಸಾಕ್ಷ್ಯನಾಶ ಮಾಡಿರುವ ಆರೋಪ ಕೇಳಿಬಂದಿದ್ದು, ತನಿಖೆ ನಡೆಸುವಂತೆ ಒತ್ತಾಯಿಸಿ ಜಾರಿ ನಿರ್ದೇಶನಾಲಯದಲ್ಲಿ (ಇ.ಡಿ.) ದೂರು ದಾಖಲಾಗಿದೆ.
ಪ್ರದೀಪ್ ಕುಮಾರ್ ಎಂಬವರು ನೀಡಿದ ದೂರಿನ ಮೇರೆಗೆ ಅಧಿಕಾರಿಗಳು ದೂರು ಸ್ವೀಕರಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು ತಮಗೆ ಮುಡಾದಿಂದ ಮಂಜೂರಾಗಿದ್ದ 14 ನಿವೇಶನಗಳನ್ನು ವಾಪಸ್ ನೀಡುವುದಾಗಿ ಪತ್ರ ಬರೆದಿದ್ದರು. ಈ ಬೆಳವಣಿಗೆಯ ಬೆನ್ನಲ್ಲೇ ಮೂಡಾ ಅಧಿಕಾರಿಗಳು ಆರೋಪಿತರ ಮನೆಗೆ ಹೋಗಿ ಸಹಿ ಹಾಕಿಸಿಕೊಂಡು ಬಂದಿದ್ದಾರೆ. ಆರೋಪಿತರೊಂದಿಗೆ ಸೇರಿ ಅಧಿಕಾರಿಗಳು ಸಾಕ್ಷ್ಯನಾಶ ಮಾಡಿದ್ದು ಅವರ ವಿರುದ್ಧ ತನಿಖೆ ನಡೆಸಬೇಕೆಂದು ದೂರಿನಲ್ಲಿ ಕೋರಿದ್ದಾರೆ.
ಸಿಎಂ ಸಿದ್ದರಾಮಯ್ಯನವರು ಮೂಡಾ ಅಧಿಕಾರಿಗಳ ಮೇಲೆ ಪ್ರಭಾವ ಬೀರಿದ್ಧಾರೆ. ಆದ್ದರಿಂದ ಸಿದ್ದರಾಮಯ್ಯ ಹಾಗೂ ಪುತ್ರ ಯತೀಂದ್ರ ವಿರುದ್ಧ ತನಿಖೆ ನಡೆಸಬೇಕು ಎಂದು ಅವರು ಕೋರಿದ್ದಾರೆ.
ಆದರೆ, ಸಾಕ್ಷ್ಯನಾಶ ದೂರು ಸಂಬಂಧ ಪ್ರಕರಣ ದಾಖಲಿಸಿ ತನಿಖೆ ನಡೆಸುವುದು ಇ.ಡಿ. ಅಧಿಕಾರಿಗಳ ವ್ಯಾಪ್ತಿಗೆ ಬರುವುದಿಲ್ಲ. ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ಲೋಕಾಯುಕ್ತಕ್ಕೆ ಶಿಫಾರಸು ಮಾಡುವ ಸಾಧ್ಯತೆ ಇದೆ.
ಇದನ್ನೂ ಓದಿ: ಸಿಎಂ ಪತ್ನಿಯ 14 ನಿವೇಶನ ವಾಪಸ್ ಪ್ರಕರಣಕ್ಕೆ ತಿರುವು: ಕೋರ್ಟ್ ಆದೇಶದ ಉಲ್ಲಂಘನೆ ಎಂದ ಹೆಚ್ಡಿಕೆ - H D Kumaraswamy