ETV Bharat / state

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ‌ ಎಂಡಿ ಪದ್ಮನಾಭ್​, ಸತ್ಯನಾರಾಯಣ ಇಟಕಾರಿ ಇಡಿ ಕಸ್ಟಡಿಗೆ - Valmiki Corporation Scam - VALMIKI CORPORATION SCAM

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಸಂಬಂಧ ಮಾಜಿ ಎಂ.ಡಿ. ಪದ್ಮನಾಭ್​ ಮತ್ತು ಸತ್ಯನಾರಾಯಣ ಇಟಕಾರಿ ಅವರನ್ನು ಇಡಿ ಅಧಿಕಾರಿಗಳು ಏಳು ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ (ETV Bharat)
author img

By ETV Bharat Karnataka Team

Published : Aug 23, 2024, 7:53 PM IST

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಸಂಬಂಧ ಅಕ್ರಮ ಹಣ ವರ್ಗಾವಣೆ ಕಾಯಿದೆಯಡಿ (ಪಿಎಂಎಲ್ಎ) ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶಾನಾಲಯ(ಇಡಿ) ಅಧಿಕಾರಿಗಳು, ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಿಗಮದ ಮಾಜಿ ಎಂ.ಡಿ. ಪದ್ಮನಾಭ್​ ಮತ್ತು ಹೈದರಾಬಾದ್ ಫಸ್ಟ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಇಟಕಾರಿ ಅವರನ್ನು ಏಳು ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಂ.ಜಿ.ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್‌ನಲ್ಲಿ‌ ನಿಗಮದ 94.73 ಕೋಟಿ 18 ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗಿತ್ತು. ಈ ಜಾಡು ಬೆನ್ನತ್ತಿದ್ದಾಗ ಫಸ್ಟ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಇಟಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸತ್ಯನಾರಾಯಣ ವರ್ಮಾ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ಖಾತೆಗಳನ್ನು ತೆರೆದು ಅಕ್ರಮವಾಗಿ ಹಣ ವರ್ಗಾಯಿಸಿಕೊಂಡಿರುವುದು ತನಿಖೆಯಲ್ಲಿ ಬಹಿರಂಗವಾಗಿತ್ತು.

ತನಿಖೆ ಚುರುಕುಗೊಳಿಸಿದಾಗ ಅಕ್ರಮವಾಗಿ‌ ಕೋಟ್ಯಂತರ ರೂಪಾಯಿ ಹಣವನ್ನು ನೂರಾರು ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿರುವುದು ಕಂಡುಬಂದಿತ್ತು. ಈ ಸಂಬಂಧ ಇತ್ತೀಚೆಗೆ ಸತ್ಯನಾರಾಯಣ ವರ್ಮಾನನ್ನು ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಅಲ್ಲದೆ‌, ಅಕ್ರಮದಲ್ಲಿ ಪದ್ಮನಾಭ್​ ಸಹ ಪ್ರಮುಖ ಪಾತ್ರ ವಹಿಸಿದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧ ಮೊದಲ ಚಾರ್ಜ್‌ಶೀಟ್ ಸಲ್ಲಿಕೆ - Prajwal Revanna

ETV Bharat Logo

Copyright © 2024 Ushodaya Enterprises Pvt. Ltd., All Rights Reserved.