ETV Bharat / state

ಇಡಿ ಲೋಕಾಯುಕ್ತಕ್ಕೆ ಪತ್ರ ಬರೆದಿರೋದು ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ - CM SIDDARAMAIAH

ತನಿಖೆ ಪೂರ್ಣಗೊಂಡ ಬಳಿಕ ಇಡಿ ಲೋಕಾಯುಕ್ತಕ್ಕೆ ವರದಿಯನ್ನು ನೀಡಬಹುದಿತ್ತು. ಆದರೆ ಈಗ ನೀಡಿದೆ ಎಂದರೆ ಇದರ ಹಿಂದೆ ರಾಜಕೀಯ ದುರುದ್ದೇಶವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

CM Siddaramaiah
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Dec 4, 2024, 3:20 PM IST

Updated : Dec 4, 2024, 3:36 PM IST

ಮಂಡ್ಯ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಸಾವಿರಾರು ನಿವೇಶನಗಳ ಹಂಚಿಕೆಯಲ್ಲಿ ಅಕ್ರಮಗಳಾಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ 14 ನಿವೇಶನಗಳ ಬದಲಿ ನಿವೇಶನಗಳ ಹಂಚಿಕೆ ವಿಚಾರದಲ್ಲಿಯೂ ಅಕ್ರಮವಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಲೋಕಾಯುಕ್ತಕ್ಕೆ ಬರೆದ ಪತ್ರದಲ್ಲಿ ಹೇಳಿರುವುದಾಗಿ ವರದಿಯಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ "ಲೋಕಾಯುಕ್ತಕ್ಕೆ ಇಡಿ ಪತ್ರ ಬರೆದಿರುವುದು ರಾಜಕೀಯ ಪ್ರೇರಿತವಾಗಿದೆ. ಹೈಕೋರ್ಟ್​ನಲ್ಲಿ ನಾಳೆ ನಮ್ಮ‌ ಅರ್ಜಿ ವಿಚಾರಣೆಗೆ ಇದೆ. ಅದರ ಹಿಂದಿನ‌ ದಿನ ಇಡಿಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ" ಎಂದು ಆರೋಪಿಸಿದರು.

ಸಿಎಂ ಸಿದ್ದರಾಮಯ್ಯ (ETV Bharat)

ಕೆ.ಆರ್.ಪೇಟೆ ಹೆಲಿಪ್ಯಾಡ್​ನಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. "ಇಡಿಯವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ಇಡಿಗೆ ತನಿಖೆ ಮಾಡಲು ಅಧಿಕಾರ ಇಲ್ಲ. ರಾಜ್ಯಪಾಲರು ತನಿಖೆ ಮಾಡಿ ಅಂತಾ ಲೋಕಾಯುಕ್ತಕ್ಕೆ ಹೇಳಿರುವುದು, ಇಡಿಗಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು, ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಅಗತ್ಯವೇನಿತ್ತು? ಆದರೂ ಮಾಡಿದ್ದಾರೆ ಎಂದರೆ ಇದರ ಹಿಂದೆ ರಾಜಕೀಯ ದುರುದ್ದೇಶ ಇದೆ" ಎಂದು ಸಿಎಂ ಹೇಳಿದರು.

ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆಯ ಒಂದು ದಿನ ಮೊದಲು ಇಡಿ ತನಿಖೆಯ ವಿಚಾರಗಳನ್ನು ಮಾಧ್ಯಮಗಳಲ್ಲಿ ಪ್ರಚಾರ ಮಾಡಿರುವುದು ಮತ್ತು ಲೋಕಾಯುಕ್ತಕ್ಕೆ ಪತ್ರ ಬರೆದಿರುವುದು ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಲಯವನ್ನು ಪೂರ್ವಾಗ್ರಹ ನಿಲುವಿಗೆ ತರುವ ದುರುದ್ದೇಶದ ರಾಜಕೀಯ ನಡೆಯಾಗಿದೆ. ಡಿಸೆಂಬರ್ 24ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಲೋಕಾಯುಕ್ತ ವರದಿ ಮೇಲೂ ಪ್ರಭಾವ ಬೀರುವ ಉದ್ದೇಶದಿಂದ ಇದನ್ನು ಮಾಡಲಾಗಿದೆ. ಇಡಿಯವರು ಲೋಕಾಯುಕ್ತಕ್ಕೆ ವರದಿ ನೀಡಲು ಅವಕಾಶವಿತ್ತು. ಅದನ್ನು ಬಿಟ್ಟು ಈ ರೀತಿ ಪತ್ರ ಬರೆದಿರುವ ಹಿಂದಿನ ಉದ್ದೇಶ ರಾಜ್ಯದ ಜನರಿಗೆ ಅರ್ಥವಾಗುತ್ತದೆ" ಎಂದರು.

ಸಿಎಂ ಸಿದ್ದರಾಮಯ್ಯ (ETV Bharat)

ನಾನು ಹೇಳಿದ್ನಾ? ಮಂತ್ರಿಮಂಡಲ ಪುನಾರಚನೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, "ಮಂತ್ರಿಮಂಡಲ ಪುನಾರಚನೆ ಮಾಡುತ್ತೇವೆ ಅಂತ ನಾನು ಹೇಳಿದ್ನಾ? ನೀವೇ ನಿಮ್ಮ ಪಾಡಿಗೆ ಕಲ್ಪಿಸಿಕೊಂಡು ಸುದ್ದಿ ಮಾಡಿದ್ರಿ. ಈಗ ನನ್ನ ಬಳಿ ಉತ್ತರ ಕೇಳಿದರೆ ಹೇಗೆ? ಈ ಬಗ್ಗೆ ಹೈಕಮಾಂಡ್ ಕೂಡ ಸೂಚನೆ ಕೊಟ್ಟಿಲ್ಲ" ಎಂದು ಸಿಎಂ ಸ್ಪಷ್ಟಪಡಿಸಿದರು.

ನಾಳೆ ಹಾಸನದಲ್ಲಿ ನಡೆಯುತ್ತಿರುವ ಸಮಾವೇಷದ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿ, "ಹಾಸನದಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಸ್ವಾಭಿಮಾನಿ ಒಕ್ಕೂಟದ ಸಹಯೋಗದಲ್ಲಿ ಸಮಾವೇಶ ನಡೆಯುತ್ತಿದೆ. ಸ್ವಾಭಿಮಾನಿ ಒಕ್ಕೂಟದಿಂದ ಹೆಚ್ಚು ಜನರು ಬರುತ್ತಾರೆ. ಹೆಸರು ಯಾವುದು ಬದಲಾವಣೆ ಆಗಿಲ್ಲ. ಕಾಂಗ್ರೆಸ್ ಪಕ್ಷವೂ ಸೇರಿಕೊಂಡು ಸಮಾವೇಶ ನಡೆಯುತ್ತಿದೆ" ಎಂದು ಹೇಳಿದರು.

ಇಡಿಯ ತನಿಖಾ ವರದಿ ಸೋರಿಕೆ ಸುಳ್ಳು: "ಇಡಿ ತನಿಖಾ ವರದಿ ಬಗ್ಗೆ ಲೋಕಾಯುಕ್ತಕ್ಕೆ ಬರೆದಿರುವ ಪತ್ರ ಸುಳ್ಳು. ಯಾವುದೇ ತನಿಖಾ ಸಂಸ್ಥೆಗಳು ತಮ್ಮ ತನಿಖೆಯ ವರದಿಯನ್ನು ಎಲ್ಲಿಯೂ ಬಿಟ್ಟುಕೊಡುವುದಿಲ್ಲ. ಇದೊಂದು ಬಿಜೆಪಿಯವರು ಸೃಷ್ಟಿಸಿರುವ ಸುಳ್ಳು. ಅವರ ವರದಿ ನಿಜವಾಗಿದ್ದಲ್ಲಿ, ಫಾರೆನ್ಸಿಕ್‌ ಆಧಾರ ಸಮೇತ ಸಾಬೀತು ಮಾಡಲಿ, ಆಗ ನಂಬುತ್ತೇವೆ" ಎಂದು ಚಾಮರಾಜ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಹರೀಶ್‌ ಗೌಡ ಅವರು ಮೈಸೂರಿನ ಕಾಂಗ್ರೆಸ್​ ಭವನದಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಹೇಳಿಕೆ ನೀಡಿದರು.

50:50 ನಿವೇಶನ ಹಂಚಿಕೆಯಲ್ಲಿ ಬಹಳಷ್ಟು ಅಕ್ರಮ ಆಗಿದೆ ಎನ್ನುವುದರ ಕುರಿತು ಪ್ರತಿಕ್ರಿಯೆ ನೀಡಿ, "ಸಿಎಂ ಪತ್ನಿ ಪಡೆದಿರುವ ಸೈಟ್ ವಿಚಾರದಲ್ಲಿ ಅಕ್ರಮ ಆಗಿಲ್ಲ‌. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಚಿಕೆ ವಿಷಯದಲ್ಲಿ ಯಾವುದೇ ಪ್ರಭಾವ ಬೀರಿಲ್ಲ" ಎಂದು ಹೇಳಿದರು.

ಇದನ್ನೂ ಓದಿ: ಮುಡಾ: ಇ.ಡಿ ವಿಚಾರಣೆ ಎದುರಿಸಿದ ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್

Last Updated : Dec 4, 2024, 3:36 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.