ETV Bharat / state

ಕರ್ನಾಟಕ ಬಜೆಟ್ 2024: ಶಿಕ್ಷಣ ಇಲಾಖೆಗೆ ಬಂಪರ್ ಅನುದಾನ ನೀಡಿದ ಸಿದ್ದರಾಮಯ್ಯ - ಶಿಕ್ಷಣ ಇಲಾಖೆ ಅನುದಾನ

2024-25ನೇ ಸಾಲಿನ ಕರ್ನಾಟಕ ಬಜೆಟ್​ನಲ್ಲಿ ಶಾಲಾ ಕಟ್ಟಡ ನಿರ್ಮಾಣ, ದುರಸ್ತಿ ಸೇರಿ ವಿವಿಧ ಕಾರ್ಯಕ್ರಮಗಳಿಗಾಗಿ 44,422 ಕೋಟಿ ರೂ ಅನುದಾನ ನೀಡಲಾಗಿದೆ.

ಕರ್ನಾಟಕ ಬಜೆಟ್ 2024
ಕರ್ನಾಟಕ ಬಜೆಟ್ 2024
author img

By ETV Bharat Karnataka Team

Published : Feb 16, 2024, 1:19 PM IST

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಬಜೆಟ್​ನಲ್ಲಿ ಶಿಕ್ಷಣ ಇಲಾಖೆಗೆ 44,422 ಕೋಟಿ ರೂ.ಗಳ ಅನುದಾನ ಪ್ರಕಟಿಸಿದ್ದಾರೆ. ಶಾಲಾ ಕಾಲೇಜುಗಳಲ್ಲಿ ಸೌಲಭ್ಯಗಳ ಕೊರತೆ ಇತ್ತೀಚೆಗೆ ಹೆಚ್ಚು ಸದ್ದು ಮಾಡಿದ್ದನ್ನು ಪರಿಗಣಿಸಿ ಮೂಲ ಸೌಕರ್ಯ, ಕಟ್ಟಡ ದುರಸ್ತಿ, ಕೊಠಡಿ ನಿರ್ಮಾಣ, ಶೌಚಾಲಯ ನಿರ್ಮಾಣದ ಜೊತೆ ರಾಜ್ಯ ಶಿಕ್ಷಣ ನೀತಿ ಜಾರಿ, ಆಂಗ್ಲ ಮಾಧ್ಯಮ ಶಾಲೆ, ಕೆಪಿಎಸ್ ಸ್ಥಾಪನೆಯಂತಹ ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಶಿಕ್ಷಣ ಇಲಾಖೆಗೆ ಏನೆಲ್ಲ ಸಿಕ್ಕಿದೆ ಎನ್ನುವುದರ ಮಾಹಿತಿ ಇಲ್ಲಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತೆ: ಶಾಲಾ/ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳಿಗೆ 850 ಕೋಟಿ ರೂ. ಅನುದಾನ ನೀಡಲಾಗಿದೆ.

  • ಪೂರ್ವ ಪ್ರಾಥಮಿಕ ಹಂತದಿಂದ ಪದವಿ ಪೂರ್ವ ತರಗತಿಗಳವರೆಗಿನ ಶಿಕ್ಷಣವನ್ನು ಒಂದೇ ಸೂರಿನಡಿ ನೀಡುವ ಉದ್ದೇಶದಿಂದ ಆಯ್ದ ಶಾಲೆಗಳನ್ನು ಸಿ.ಎಸ್.ಆರ್. ಅನುದಾನದಡಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಅಭಿವೃದ್ಧಿ ಮಾಡಲು ನಿರ್ಧರಿಸಲಾಗಿದೆ.
  • 3 ರಿಂದ 5 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗಣಿತ ವಿಷಯದಲ್ಲಿ ಆಸಕ್ತಿ ಮೂಡಿಸಿ ಸಾಮರ್ಥ್ಯ ಹೆಚ್ಚಿಸಲು J-PAL ಸಂಸ್ಥೆಯ ಸಹಯೋಗದಲ್ಲಿ ಗಣಿತ - ಗಣಕ ಕಾರ್ಯಕ್ರಮ
  • ಕಲಿಕೆಯಲ್ಲಿ ಹಿಂದುಳಿದ 6 ಮತ್ತು 7 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಸುಧಾರಿಸಲು 10 ಕೋಟಿ ರೂ. ಅನುದಾನದಲ್ಲಿ ಮರು ಸಿಂಚನ ಕಾರ್ಯಕ್ರಮ ಕೈಗೊಳ್ಳುವುದಾಗಿ ಸಿಎಂ ಹೇಳಿದ್ದಾರೆ.
  • ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, ಇಂಟರ್ನೆಟ್ ಸೌಲಭ್ಯಗಳನ್ನು ಎರಡು ವರ್ಷಗಳ ಪ್ಯಾಕೇಜ್ ಅಡಿ ಒದಗಿಸಲು 50 ಕೋಟಿ
  • 2,000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲಿಷ್​​ ) ಶಾಲೆಗಳಾಗಿ ಪರಿವರ್ತನೆ
  • ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸಹಯೋಗದೊಂದಿಗೆ ಸರ್ಕಾರಿ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾರಂಭ
  • ರಾಜ್ಯದಲ್ಲಿರುವ 74 ಆದರ್ಶ ವಿದ್ಯಾಲಯಗಳನ್ನು ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳಲ್ಲಿ ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಣ. ವಿದ್ಯಾರ್ಥಿಗಳ ಸಂಖ್ಯಾಬಲ ಹೆಚ್ಚಿರುವ ಆಯ್ದ 100 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಗಣಕ ವಿಜ್ಞಾನ ಸಂಯೋಜನೆಯನ್ನು ಪ್ರಾರಂಭ.
  • ವಿಜ್ಞಾನ ವಿಷಯಗಳಲ್ಲಿ 400 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ವಿಜ್ಞಾನ ಪ್ರಯೋಗಾಲಯಗಳನ್ನು ಉನ್ನತೀಕರಿಸಲು ತಲಾ 10 ಲಕ್ಷ ರೂ. ನಂತೆ ಅನುದಾನ
  • ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಅಂದಾಜು 20,000 ವಿದ್ಯಾರ್ಥಿಗಳಿಗೆ NEET/JEE/CET ತರಬೇತಿ ಕಾರ್ಯಕ್ರಮಗಳಿಗೆ 10 ಕೋಟಿ ಮೀಸಲಿಡಲಾಗಿದೆ.
  • ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು 25 ಕೋಟಿ ರೂ. ವೆಚ್ಚ
  • ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು/ಉಪನ್ಯಾಸಕರುಗಳನ್ನು ನೇಮಕ ಮಾಡುವ ಪ್ರಕ್ರಿಯೆ ಆರಂಭ ಮಾಡುವುದಾಗಿ ಸಿಎಂ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ.

ಉನ್ನತ ಶಿಕ್ಷಣ:

  • ಕಳೆದ ಆಯವ್ಯಯದಲ್ಲಿ ಘೋಷಿಸಿರುವಂತೆ, ರಾಜ್ಯದ ಅಸ್ಮಿತೆ ಮತ್ತು ಸಂಸ್ಕೃತಿಗೆ ಅನುಗುಣವಾಗಿ, ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡನ್ನು ಸಿದ್ಧಪಡಿಸಲು ರಾಜ್ಯ ಶಿಕ್ಷಣ ನೀತಿ ಆಯೋಗವನ್ನು ರಚಿಸಲಾಗಿದೆ. ಆಯೋಗವು ಶೀಘ್ರದಲ್ಲಿಯೇ ವರದಿಯನ್ನು ಸಲ್ಲಿಸಲಿದ್ದು, ಅದರಂತೆ ಪರಿಶೀಲಿಸಿ ರಾಜ್ಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.
  • ರಾಜ್ಯದ 30 ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು ಮತ್ತು ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್​ಗಳ ಉನ್ನತೀಕರಣಕ್ಕಾಗಿ ಒಟ್ಟು 30 ಕೋಟಿ ರೂ. ಅನುದಾನ ನೀಡಲಾಗಿದೆ.
  • 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳ ಕಾಮಗಾರಿಗಳಿಗೆ 250 ಕೋಟಿ ರೂ. ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳ ಕಾಮಗಾರಿಗಳಿಗೆ 120 ಕೋಟಿ ರೂ. ಅನುದಾನ
  • ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನು ಅಗತ್ಯತೆಗೆ ಅನುಗುಣವಾಗಿ ಭರ್ತಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಕ್ರಮ
  • ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ವತಿಯಿಂದ ಕೊಪ್ಪಳ, ಬೀದರ್, ಯಾದಗಿರಿ, ರಾಯಚೂರು ಮತ್ತು ಕಲಬುರಗಿಯಲ್ಲಿ ವಿಶ್ವವಿದ್ಯಾಲಯಗಳ ಘಟಕ ಕಾಲೇಜನ್ನು ಅವಶ್ಯವಿರುವ ಜಿಲ್ಲಾ/ ತಾಲ್ಲೂಕು ಕೇಂದ್ರಗಳಲ್ಲಿ ಸ್ಥಾಪನೆ
  • ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವನ್ನು (UVCE) 500 ಕೋಟಿ ರೂ. ವೆಚ್ಚದಲ್ಲಿ ಐಐಟಿ ಮಾದರಿಯಲ್ಲಿ ಅಭಿವೃದ್ಧಿ. ಇದಕ್ಕಾಗಿ ಸರ್ಕಾರದಿಂದ 100 ಕೋಟಿ ರೂ. ಅನುದಾನ. ಜೊತೆಗೆ ಸಿ.ಎಸ್.ಆರ್.‌ ನಿಧಿ ಮತ್ತು ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಗಳು ನೀಡುವ ದೇಣಿಗೆ ಮೂಲಕ ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಸಂಪನ್ಮೂಲಗಳನ್ನು ಸಂಗ್ರಹಿಸಲಾಗುವುದು
  • ಹಳೆಯ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಅಭಿವೃದ್ಧಿಗೊಳಿಸಲು ಬೇರು - ಚಿಗುರು ಎಂಬ ವಿನೂತನ ಕಾರ್ಯಕ್ರಮ
  • ಉನ್ನತ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ತಮ್ಮ ಆವಿಷ್ಕಾರಗಳಿಗೆ ಪೇಟೆಂಟ್ ಪಡೆದುಕೊಳ್ಳಲು ಅಗತ್ಯವಾದ ತಾಂತ್ರಿಕ ಮತ್ತು ಆರ್ಥಿಕ ನೆರವು ನೀಡಲು 10 ಕೋಟಿ ರೂ.ಗಳ Corpus Fund ಸ್ಥಾಪನೆ
  • ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಟ್ಟಡವನ್ನು 54 ಕೋಟಿ ರೂ. ವೆಚ್ಚದಲ್ಲಿ ಹಾಗೂ ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜು ಹಾಸ್ಟೆಲ್ ಕಟ್ಟಡ ನಿರ್ಮಾಣವನ್ನು 116 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು ಎಂದು ಹಣಕಾಸು ಸಚಿವರು ಬಜೆಟ್​ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯರಿಂದ ಆದಾಯ ಕೊರತೆಯ ಬಜೆಟ್ ಮಂಡನೆ: 1,05,246 ಕೋಟಿ ರೂ. ಸಾಲದ ಮೊರೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.