ETV Bharat / state

ಕುರುಬರೆಲ್ಲಾ ಕಾನೂನು ಓದೋಕೆ ಆಗುತ್ತಾ ಅಂತಿದ್ರು, ನಾನು ಹಠ ತೊಟ್ಟು ಲಾಯರ್ ಆದೆ: ಸಿಎಂ ಸಿದ್ದರಾಮಯ್ಯ

ಕುರುಬರೆಲ್ಲಾ ಲಾಯರ್ ಓದೋಕೆ ಆಗಲ್ಲ ಎನ್ನುತ್ತಿದ್ದರು. ಆದರೆ ನಾನು ಹಠ ತೊಟ್ಟು ಕಾನೂನು ಓದಿ ಲಾಯರ್ ಆದೆ. ಮುಖ್ಯಮಂತ್ರಿಯೂ ಆದೆ ಎಂದು ಸಿಎಂ ತಿಳಿಸಿದರು.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Nov 12, 2024, 4:51 PM IST

ಮೈಸೂರು: ವಿದ್ಯೆ ಯಾರೊಬ್ಬರ ಸ್ವತ್ತಲ್ಲ. ವಾಲ್ಮೀಕಿ, ವ್ಯಾಸ, ಕನಕದಾಸ ಎಲ್ಲರೂ ಶೂದ್ರ, ದಲಿತ ಸಮುದಾಯದವರು. ಮೇಲ್ವರ್ಗಕ್ಕೆ ಮಾತ್ರ ಶಿಕ್ಷಣ ಎನ್ನುವುದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಲ್ಲಿನ 443.64 ಕೋಟಿ ವೆಚ್ಚದ ಕಾಮಗಾರಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಫಲಾನುಭವಿಗಳಿಗೆ ಕೃಷಿ ಸಲಕರಣೆಗಳನ್ನು ವಿತರಿಸಿದ ಬಳಿಕ ವಾಲ್ಮೀಕಿ ಜಯಂತಿ ಪ್ರಯುಕ್ತ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಸಿಎಂ ಸಿದ್ದರಾಮಯ್ಯ (ETV Bharat)

ನಾವು ಈಗಾಗಲೇ ಸರ್ಕಾರದ ವತಿಯಿಂದ ವಾಲ್ಮೀಕಿ ಜಯಂತಿ ಆಚರಿಸುತ್ತಿದ್ದು, ರಾಜ್ಯ ಮಟ್ಟದ ವಾಲ್ಮೀಕಿ ಪ್ರಶಸ್ತಿಯನ್ನೂ ನೀಡುತ್ತಿದ್ದೇವೆ. ವಾಲ್ಮೀಕಿಯವರು ಸಂಸ್ಕೃತದಲ್ಲಿ 20 ಸಾವಿರ ಶ್ಲೋಕಗಳನ್ನು ರಚಿಸಿದ್ದಾರೆ. ಶೂದ್ರ ವರ್ಗದ ಜನ ವಿದ್ಯೆ ಕಲಿಯುವುದೇ ನಿಷಿದ್ಧವಾಗಿದ್ದ ಕಾಲದಲ್ಲಿ ವಿದ್ಯೆ ಕಲಿತು, ಸಂಸ್ಕೃತವನ್ನೂ ಕಲಿತು ರಾಮಾಯಣ ರಚಿಸಿದ್ದು, ಬಹಳ ದೊಡ್ಡ ಹೋರಾಟ ಮತ್ತು ಸಾಧನೆ ಎಂದರು.

ಮಹಾಭಾರತ ಬರೆದ ವ್ಯಾಸರು ಬೆಸ್ತರು, ರಾಮಾಯಣ ಬರೆದ ವಾಲ್ಮೀಕಿ ಬೇಡ ಸಮುದಾಯದವರು, ಶಾಕುಂತಲ ಬರೆದ ಕಾಳಿದಾಸರು ಕುರುಬ ಸಮುದಾಯದವರು. ವಿದ್ಯೆ ಯಾರೊಬ್ಬರ ಸ್ವತ್ತು ಅಲ್ಲ. ಅವಕಾಶಗಳು ಸಿಗಬೇಕು ಅಷ್ಟೇ. ನಮ್ಮ ಜೀವನವನ್ನು ರೂಪಿಸಿಕೊಳ್ಳುವ ಶಿಲ್ಪಿ ನಾವೇ. ಆದ್ದರಿಂದ ವಿದ್ಯೆ ಕಲಿಯಲೇಬೇಕು. ಶೂದ್ರ ಜಾತಿಯ ಕನಕದಾಸರು ದಾಸ ಶ್ರೇಷ್ಠರಾದರು. ಆದ್ದರಿಂದ ವಿದ್ಯಾವಂತರಾಗಲು ಜಾತಿ ಅಡ್ಡಿ ಬರುವುದಿಲ್ಲ. ನಮ್ಮೂರವರ ಮಾತು ಕೇಳಿ ನಮ್ಮಪ್ಪ, ಕುರುಬರೆಲ್ಲಾ ಲಾಯರ್ ಓದೋಕೆ ಆಗಲ್ಲ ಎನ್ನುತ್ತಿದ್ದರು. ಆದರೆ, ನಾನು ಹಠ ತೊಟ್ಟು ಕಾನೂನು ಓದಿ ಲಾಯರ್ ಆದೆ. ಮುಖ್ಯಮಂತ್ರಿಯೂ ಆದೆ ಎಂದು ತಿಳಿಸಿದರು.

ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ನಮಿಸಿದ ಸಿಎಂ
ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ನಮಿಸಿದ ಸಿಎಂ (ETV Bharat)

ಇಂದು ನಾವು ಆಚರಿಸುತ್ತಿರುವ ಪ್ರಜಾಪ್ರಭುತ್ವಕ್ಕೆ ವಾಲ್ಮೀಕಿ ಅವರು ಅವತ್ತೇ ಅಡಿಪಾಯ ಹಾಕಿದ್ದರು. ಮಹಾತ್ಮ ಗಾಂಧೀಜಿ ಅವರು ಹೇಳುವ ರಾಮ ರಾಜ್ಯವನ್ನು ವಾಲ್ಮೀಕಿ ಅವರು ರಾಮಾಯಣದಲ್ಲೇ ಚಿತ್ರಿಸಿದ್ದಾರೆ. ಆದರೂ ವಾಲ್ಮೀಕಿ ಅವರು ದರೋಡೆಕೋರ ಆಗಿದ್ದರು ಎಂದೆಲ್ಲಾ ಸುಳ್ಖು ಕತೆ ಸೃಷ್ಟಿಸಿದ್ದಾರೆ. ಇವೆಲ್ಲಾ ನಂಬಲು ಹೋಗಬೇಡಿ. ವಾಲ್ಮೀಕಿ ಮಹಾನ್ ಮೇದಾವಿ, ವಿದ್ಯಾವಂತ ಆಗಿದ್ದರು ಎಂದು ಸ್ಮರಿಸಿದರು.

ಅಭಿವೃದ್ಧಿಗೆ ಹಣ ಇಲ್ಲ ಅಂದ್ರೆ 443 ಕೋಟಿ ಎಲ್ಲಿಂದ ಬಂತು: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ: ಇಂದು ಹೆಚ್.ಡಿ.ಕೋಟೆಯಲ್ಲಿ 443 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟಿಸಿದ್ದೇನೆ. ಶಂಕುಸ್ಥಾಪನೆಯನ್ನೂ ನೆರವೇರಿಸಲಾಗಿದೆ. ರಾಜ್ಯ ಸರ್ಕಾರದ ಬಳಿ ಸಂಬಳ ಕೊಡಲು, ಅಭಿವೃದ್ಧಿಗೆ ಹಣ ಇಲ್ಲ ಎಂದು ಬಿಜೆಪಿಯವರು ಹಸಿ ಸುಳ್ಳು ಹರಡಿಸುತ್ತಾರೆ. ನಮ್ಮಲ್ಲಿ ಹಣ ಇಲ್ಲದಿದ್ದರೆ ಈ 443 ಕೋಟಿ ಎಲ್ಲಿಂದ ಬಂತು? ಯಾವುದಾದರೂ ರಾಜ್ಯ ಸರ್ಕಾರಿ ನೌಕರರಿಗೆ ಸಂಬಳ ನಿಂತಿದೆಯಾ? ಎಂದು ಪ್ರಶ್ನಿಸಿದರು.

ರಾಜ್ಯದ ಕೋಟಿ ಕೋಟಿ ಫಲಾನುಭವಿಗಳು ನಮ್ಮ ಐದೂ ಗ್ಯಾರಂಟಿ ಯೋಜನೆಗಳ ಫಲವನ್ನು ಪ್ರತೀ ತಿಂಗಳೂ ಪಡೆಯುತ್ತಿದ್ದಾರೆ. ಆದರೂ ಬಿಜೆಪಿಯವರು ಗ್ಯಾರಂಟಿ ಯೋಜನೆಗಳಿಗೂ ಹಣ ಇಲ್ಲ ಎಂದು ಸುಳ್ಳು ಹರಡುತ್ತಿದ್ದಾರೆ. ಸುಳ್ಳೇ ಬಿಜೆಪಿಯ ಮನೆ ದೇವರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಜನಸಂಖ್ಯೆಗೆ ಅನುಗುಣವಾಗಿ ಅಭಿವೃದ್ಧಿ ಅನುದಾನ ಮೀಸಲಿಟ್ಟಿದ್ದು ನಮ್ಮ ಸರ್ಕಾರ. ಇದನ್ನು ಭಾರತದಲ್ಲಿ ಬೇರೆ ಯಾವ ಸರ್ಕಾರವೂ ಕೊಟ್ಟಿರಲಿಲ್ಲ ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಮೀಸಲಿಟ್ಟಿದ್ದ ಹಣದಲ್ಲಿ ಒಂದು ಪೈಸೆ ಕೂಡ ಕಡಿಮೆ ಆಗದಂತೆ ಕೊಡಲಾಗುವುದು. ಪರಿಶಿಷ್ಠ ವರ್ಗದ ಮಂತ್ರಿಯಾಗಿದ್ದ ನಾಗೇಂದ್ರ ಅವರ ಮೇಲೂ ಸುಳ್ಳು ಕೇಸು ಹಾಕಿದ್ದರು. ಈಗ ನಾಗೇಂದ್ರ ಅವರು ಜೈಲಿನಿಂದ ಹೊರಗೆ ಬಂದಿದ್ದಾರೆ. ಉಪ ಚುನಾವಣೆ ಮುಗಿದ ಬಳಿಕ ಈ ಬಗ್ಗೆ ಒಳ್ಳೆ ತೀರ್ಮಾನ ಮಾಡ್ತೀವಿ. ನಮ್ಮ ಗ್ಯಾರಂಟಿಗಳಿಂದ ಅನುಕೂಲ ಪಡೆದವರು ನಮಗೆ ಮತ ಕೊಡಲಿ, ಬಿಡಲಿ ಆದರೆ ನಾವು ಬಡವರ ಕಲ್ಯಾಣಕ್ಕೆ ಕೆಲಸ ಮಾಡುವುದನ್ನು ಮಾತ್ರ ನಿಲ್ಲಿಸುವುದಿಲ್ಲ. ಬಡವರ ಪರ ಕೆಲಸ ಮಾಡುವುದು ನಮ್ಮ ಬದ್ಧತೆ ಎಂದು ಭರವಸೆ ನೀಡಿದರು.

ವಾಲ್ಮೀಕಿ ಸಂಘದ ಬೇಡಿಕೆಯಂತೆ ಹೆಚ್.ಡಿ.ಕೋಟೆಯಲ್ಲಿ ವಾಲ್ಮೀಕಿ ಭವನ ನಿರ್ಮಾಣಕ್ಕೆ 2 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಘೋಷಿಸಿದರು.

ಇದನ್ನೂ ಓದಿ: ಅಂಬೇಡ್ಕರ್ ಕುರಿತ ಹೇಳಿಕೆ ಹಿಂಪಡೆದು ಕ್ಷಮೆಯಾಚಿಸಿದ ಅಜ್ಜಂಪೀರ್ ಖಾದ್ರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.