ETV Bharat / state

28 ಲೋಕಸಭಾ ಕ್ಷೇತ್ರ ಗೆಲ್ಲಲು ಶಕ್ತಿಮೀರಿ ಪ್ರಯತ್ನ ಮಾಡಲಾಗುತ್ತಿದೆ: ಬಿ.ಎಸ್.ಯಡಿಯೂರಪ್ಪ - Lok Sabha Election 2024 - LOK SABHA ELECTION 2024

ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಪರ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಚಾರ ಕೈಗೊಂಡರು.

b-s-yediyurappa
ಬಿ.ಎಸ್.ಯಡಿಯೂರಪ್ಪ
author img

By ETV Bharat Karnataka Team

Published : May 1, 2024, 3:30 PM IST

Updated : May 1, 2024, 4:01 PM IST

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಮಾತನಾಡಿದರು.

ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡು ಲೋಕಸಭಾ ಚುನಾವಣೆ ಎದುರಿಸುತ್ತಿರುವುದರಿಂದ ಹಾಗೂ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಲೋಕಸಭಾ ಚುನಾವಣೆಯಲ್ಲಿ 28 ಕ್ಕೆ 28 ಸ್ಥಾನಗಳನ್ನು ನಾವು ಗೆಲ್ಲುವ ಪ್ರಯತ್ನವನ್ನು ಶಕ್ತಿಮೀರಿ ಮಾಡುತ್ತಿದ್ದೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಲೋಕಸಭೆ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಎರಡೂವರೆ ಲಕ್ಷ ಮತಗಳ ಅಂತರದಲ್ಲಿ ಗೆಲ್ಲುವುದು ನಿಶ್ಚಿತ. ಬಿಜೆಪಿ ಪರ ವಾತಾವರಣ ಇದೆ. ನರೇಂದ್ರ ಮೋದಿ ಹಾಗೂ ದೇವೇಗೌಡರ ಬಗ್ಗೆ ಜನರಲ್ಲಿ ಅಭಿಮಾನ ಇದೆ. ಇದು ಬಿಜೆಪಿ ಗೆಲುವಿಗೆ ಅನುಕೂಲವಾಗಲಿದೆ. ನಾಳೆಯಿಂದ ಮತ್ತೆ ನಾನು ಪ್ರವಾಸ ನಡೆಸುತ್ತೇನೆ. ನಮ್ಮ ನಾಯಕರು ಬರುತ್ತಿದ್ದಾರೆ. ಇದರಿಂದ 28 ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವ ನಮ್ಮ ಸಂಕಲ್ಪ ಯಶಸ್ವಿಯಾಗುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂಓದಿ:ಸಿದ್ದರಾಮಯ್ಯ ಸರ್ಕಾರ ಅಧಿಕಾರ ಬಿಟ್ಟು ಇಳಿದರೆ, 24 ಗಂಟೆಯಲ್ಲಿ ನಾವು ಪ್ರಜ್ವಲ್ ವಶಕ್ಕೆ ಪಡೆಯುತ್ತೇವೆ: ಆರ್​ ಅಶೋಕ್ ಚಾಲೆಂಜ್​ - HASSAN PEN DRIVE CASE

Last Updated : May 1, 2024, 4:01 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.