ETV Bharat / state

ಶಿರೂರು ಗುಡ್ಡ ಕುಸಿತದಲ್ಲಿ 8 ಮೃತದೇಹ ಪತ್ತೆ: ಹೈಕೋರ್ಟ್​ಗೆ ಕೇಂದ್ರ ಸರ್ಕಾರದ ಮಾಹಿತಿ - Shiruru Hill Collapse - SHIRURU HILL COLLAPSE

ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಈವರೆಗೆ 8 ಜನರ ಮೃತದೇಹಗಳು ಪತ್ತೆಯಾಗಿವೆ ಎಂದು ಹೈಕೋರ್ಟ್​ಗೆ ಕೇಂದ್ರ ಸರ್ಕಾರ ತಿಳಿಸಿದೆ.

ಶಿರೂರು ಗುಡ್ಡ ಕುಸಿತದಲ್ಲಿ 8 ಮೃತದೇಹಗಳು ಪತ್ತೆಯಾಗಿವೆ
ಶಿರೂರು ಗುಡ್ಡ ಕುಸಿತ ಪ್ರಕರಣ (ETV Bharat)
author img

By ETV Bharat Karnataka Team

Published : Jul 25, 2024, 7:15 AM IST

ಬೆಂಗಳೂರು: ಶಿರೂರಿನ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಇತ್ತೀಚಿಗೆ ಸಂಭವಿಸಿದ ಗುಡ್ಡ ಕುಸಿದ ಪ್ರಕರಣದಲ್ಲಿ ಮಣ್ಣಿನಡಿ ಸಿಲುಕಿದವರ ಪೈಕಿ 8 ಜನರ ಮೃತದೇಹಗಳು ದೊರೆತಿದ್ದು, ರಕ್ಷಣಾ ಕಾರ್ಯ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ಗುರುವಾರ ಮಾಹಿತಿ ನೀಡಿದೆ.

ಭೂ ಕುಸಿತದಿಂದ ಮಣ್ಣಿನಡಿ ಸಿಲುಕಿರುವ ಜನರ ರಕ್ಷಣೆ ಹಾಗೂ ಪತ್ತೆ, ಹೆದ್ದಾರಿಯಲ್ಲಿ ಬಿದ್ದಿರುವ ಕಲ್ಲು-ಮಣ್ಣು ತೆರವುಗೊಳಿಸಲು 24 ಗಂಟೆಗಳ ಕಾಲವೂ ನಿರಂತರವಾಗಿ ಸಾಧ್ಯವಿರುವ ಎಲ್ಲಾ ಕ್ರಮ ಜರುಗಿಸಬೇಕು. ಸೇನಾಪಡೆಗಳನ್ನು ನಿಯೋಜಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ನಗರದ ವಕೀಲರಾದ ಸಿ.ಜಿ.ಮಲೈಯಿಲ್ ಮತ್ತು ಕೆ.ಎಸ್.ಸುಭಾಷ್ ಚಂದ್ರ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್‌) ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠಕ್ಕೆ ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟಿರ್ ಜನರಲ್ ಕೆ.ಅರವಿಂದ ಕಾಮತ್ ರಕ್ಷಣಾ ಕಾರ್ಯಾಚರಣೆಯ ಮಾಹಿತಿ ಒದಗಿಸಿದರು. ಮಣ್ಣಿನಡಿ ಸಿಲುಕಿರುವವರ ಪತ್ತೆ ಹಾಗೂ ರಕ್ಷಣೆಗೆ ಕಳೆದ 24 ಗಂಟೆಯಲ್ಲಿ ಕೈಗೊಂಡ ಕ್ರಮಗಳ ವಿವರ ಒಳಗೊಂಡ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಈವರೆಗೆ ಎಂಟು ಶವಗಳು ಪತ್ತೆಯಾಗಿವೆ. ಉಳಿದವರ ಶೋಧ ಕಾರ್ಯ ನಡೆಯುತ್ತಿದೆ ಎಂದು ಅವರು ತಿಳಿಸಿದರು.

ರಾಜ್ಯ ಸರ್ಕಾರದ ಪರ ವಕೀಲರು, ಭೂ ಕುಸಿತ ಪ್ರಕರಣದಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತ ವರದಿ ಸಿದ್ಧವಾಗಿದೆ, ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದರು. ಅರ್ಜಿದಾರರ ಪರ ವಕೀಲರು, ಕೇಂದ್ರ ಸರ್ಕಾರ ಸಲ್ಲಿಸಿರುವ ವರದಿ ಪರಿಶೀಲನೆ ನಡೆಸಿ ವಾದ ಮಂಡಿಸಲು ಕಾಲಾವಕಾಶ ನೀಡುವಂತೆ ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಆ.1ಕ್ಕೆ ಮುಂದೂಡಿತು.

ಭಯಾನಕ ಭೂ ಕುಸಿತ: ಜುಲೈ 16ರಂದು ಶಿರೂರು ಬಳಿ ಗುಡ್ದ ಕುಸಿದ ಘಟನೆ ನಡೆದಿದ್ದು, ಮಣ್ಣಿನಡಿ ಹಲವರು ಸಿಲುಕಿದ್ದರು. ಈಗಾಗಲೇ 8 ಮೃತ ದೇಹಗಳು ಪತ್ತೆಯಾಗಿವೆ. ಇನ್ನೂ ಘಟನೆಯಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿಯ ಅವಶೇಷಗಳು ಗುಡ್ಡ ಕುಸಿತ ಪ್ರದೇಶದ ಗಂಗಾವಳಿ ನದಿ ಅಂಚಿನಲ್ಲಿ ಲಾಂಗ್ ಆರ್ಮ್ ಬೂಮರ್ ಪೋಕ್ಲೈನ್ ತಂತ್ರಜ್ಞಾನದ ಮೂಲಕ ಕಾರ್ಯಾಚರಣೆ ವೇಲೆ ಪತ್ತೆಯಾಗಿವೆ. ಲಾರಿ ಚಾಲಕ ಅರ್ಜುನ್ ಇನ್ನೂ ಪತ್ತೆಯಾಗಿಲ್ಲ. ಕಾರ್ಯಾಚರಣೆ ಮುಂದುವರೆದಿದೆ.

ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ ಕಾರ್ಯಾಚರಣೆಗೆ ಬಂತು ಅತ್ಯಾಧುನಿಕ ಬೂಮ್ ಯಂತ್ರ - Shiruru Hill Collapse

ETV Bharat Logo

Copyright © 2024 Ushodaya Enterprises Pvt. Ltd., All Rights Reserved.