ಚಾಮರಾಜನಗರ: ಸೋಮವಾರ ರಾತ್ರಿ ನಿರಂತರವಾಗಿ ಸುರಿದ ಮಳೆಗೆ ಮನೆಗೋಡೆ ಕುಸಿದು ವೃದ್ಧೆ ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸಿಂಗಾನಲ್ಲೂರು ಗ್ರಾಮದಲ್ಲಿ ನಡೆದಿದೆ. ರಂಗಮ್ಮ(85) ಮೃತರು.
ರಂಗಮ್ಮ, ಪುತ್ರಿ ಲಕ್ಷ್ಮಮ್ಮ, ಹಾಗೂ ಪುತ್ರ ರಂಗಯ್ಯ ಮನೆಯಲ್ಲಿ ಮಲಗಿದ್ದರು. ತಡರಾತ್ರಿಯ ಧಾರಾಕಾರ ಮಳೆಗೆ ಮನೆಯ ಒಂದು ಪಾರ್ಶ್ವ ಕುಸಿದಿದಿದೆ. ರಂಗಮ್ಮ ಅವಶೇಷಗಳಡಿ ಸಿಲುಕಿ ಮೃತಪಟ್ಟರು. ಗೋಡೆ ಬೀಳುವ ಶಬ್ದಕ್ಕೆ ಎಚ್ಚರಗೊಂಡ ಮಗ ಮತ್ತು ಮಗಳು ಪ್ರಾಣ ಉಳಿಸಿಕೊಂಡಿದ್ದಾರೆ.
ಸ್ಥಳಕ್ಕೆ ಕೊಳ್ಳೇಗಾಲ ತಹಶೀಲ್ದಾರ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಜಿ ಶಾಸಕ ಆರ್.ನರೇಂದ್ರ ಸ್ಥಳಕ್ಕೆ ಭೇಟಿ ನೀಡಿ, ಕುಟುಂಬಕ್ಕೆ ನೆರವು ನೀಡಬೇಕೆಂದು ಅಧಿಕಾರಿಗಳಿಗೆ ಮನವಿ ಮಾಡಿದರು.
ಇದನ್ನೂ ಓದಿ: ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ - Karnataka Rain forecast