ETV Bharat / state

'ಚಿತ್ರದುರ್ಗ ನಗರಸಭೆ, ಕುಶಾಲನಗರ, ಬನ್ನೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಗೆ ದಿನಾಂಕ ನಿಗದಿ' - Election Date - ELECTION DATE

ಚಿತ್ರದುರ್ಗ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಆ.26ರಂದು ಚುನಾವಣೆ ನಡೆಸಲಾಗುತ್ತದೆ. ಹಾಗೆಯೇ, ಕೊಡಗು ಜಿಲ್ಲೆಯ ಕುಶಾಲನಗರ ಮತ್ತು ಮೈಸೂರ ಜಿಲ್ಲೆಯ ಬನ್ನೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಕ್ರಮವಾಗಿ ಆ.19 ಮತ್ತು ಸೆ.6ರಂದು ಚುನಾವಣೆ ನಡೆಸಲಾಗುತ್ತದೆ ಎಂದು ಸರ್ಕಾರಿ ಪರ ವಕೀಲರು ಮಾಹಿತಿ ನೀಡಿದರು.

ಹೈಕೋರ್ಟ್
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Aug 10, 2024, 4:51 PM IST

ಬೆಂಗಳೂರು: ಚಿತ್ರದುರ್ಗ ನಗರಸಭೆ, ಕುಶಾಲನಗರ ಮತ್ತು ಬನ್ನೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಗೆ ದಿನಾಂಕ ನಿಗದಿಪಡಿಸಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ತಿಳಿಸಿದೆ.

ಚಿತ್ರದುರ್ಗ ನಗರಸಭೆ, ಬನ್ನೂರು ಮತ್ತು ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಿ ಚುನಾವಣೆ ನಡೆಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಯ್ಯದ್‌ ನಸ್ರುಲ್ಲಾ ಸೇರಿದಂತೆ ಇತರೆ ಚುನಾಯಿತ ಪ್ರತಿನಿಧಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್‌ ಎಸ್‌. ಕಿಣಗಿ ಅವರ ಪೀಠಕ್ಕೆ ಸರ್ಕಾರಿ ವಕೀಲರು ಮಾಹಿತಿ ನೀಡಿದರು.

ಸರ್ಕಾರದ ಪರ ವಕೀಲರು ಹಾಜರಾಗಿ, ಚಿತ್ರದುರ್ಗ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಆ.26ರಂದು ಚುನಾವಣೆ ನಡೆಸಲಾಗುತ್ತದೆ. ಹಾಗೆಯೇ, ಕೊಡಗು ಜಿಲ್ಲೆಯ ಕುಶಾಲನಗರ ಮತ್ತು ಮೈಸೂರು ಜಿಲ್ಲೆಯ ಬನ್ನೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಕ್ರಮವಾಗಿ ಆ.19 ಮತ್ತು ಸೆ.6ರಂದು ಚುನಾವಣೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿ ಪ್ರಮಾಣಪತ್ರ ಸಲ್ಲಿಸಿದರು. ಅದನ್ನು ದಾಖಲಿಸಿಕೊಂಡ ನ್ಯಾಯಪೀಠ, ಅರ್ಜಿದಾರರ ಮನವಿ ಈಡೇರಿರುವುದರಿಂದ ಹೆಚ್ಚಿನ ವಿಚಾರಣೆ ಅಗತ್ಯ ಇಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ಇತ್ಯರ್ಥಪಡಿಸಿತು.

ಅರ್ಜಿಯು 2024ರ ಆ.7ರಂದು ವಿಚಾರಣೆಗೆ ಬಂದಿದ್ದಾಗ ಸರ್ಕಾರದ ಪರ ಎಎಜಿ ಪ್ರತಿಮಾ ಹೊನ್ನಾಪುರ ಹಾಜರಾಗಿ, ಚಿತ್ರದುರ್ಗ, ಕುಶಾಲನಗರ ಮತ್ತು ಬನ್ನೂರು ಪಟ್ಟಣ ಪಂಚಾಯಿತಿ ಸೇರಿದಂತೆ ರಾಜ್ಯದ 117 ಪಟ್ಟಣ ಪಂಚಾಯಿತಿ, 123 ಪುರಸಭೆ ಮತ್ತು 61 ನಗರಸಭೆಗಳ ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಿ ಸರ್ಕಾರ ಹೊರಡಿಸಿದ್ದ ಗೆಜೆಟ್‌ ಅಧಿಸೂಚನೆಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದ್ದರು.

ಅರ್ಜಿದಾರರ ಪರ ಹಾಜರಿದ್ದ ವಕೀಲ ಎ.ಮೊಹಮ್ಮದ್‌ ತಾಹೀರ್‌, ಸರ್ಕಾರ ಮೀಸಲು ನಿಗದಿಪಡಿಸಿದೆಯಾದರೂ ಯಾವಾಗ ಚುನಾವಣೆ ನಡೆಸಲಾಗುತ್ತದೆ ಎಂಬ ಬಗ್ಗೆ ಮಾಹಿತಿ ನೀಡಿಲ್ಲ ಎಂದು ಆಕ್ಷೇಪಿಸಿದ್ದರು. ಅದನ್ನು ಪರಿಗಣಿಸಿದ್ದ ನ್ಯಾಯಪೀಠ, ಯಾವಾಗ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲಾಗುತ್ತದೆ ಎಂಬ ಬಗ್ಗೆ ಆ.9ಕ್ಕೆ ಮಾಹಿತಿ ನೀಡಬೇಕು ಎಂದು ಸರ್ಕಾರಕ್ಕೆ ಸೂಚಿಸಿತ್ತು.

ಇದನ್ನೂ ಓದಿ: ಸಿದ್ದರಾಮಯ್ಯ ಶಾಸಕತ್ವ ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ - HC Adjourned Hearing

ETV Bharat Logo

Copyright © 2025 Ushodaya Enterprises Pvt. Ltd., All Rights Reserved.