ETV Bharat / state

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ, ಖಜಾಂಚಿ ಸ್ಥಾನಕ್ಕೆ ಡಿ.27 ರಂದು ಚುನಾವಣೆ: ಸಿ.ಎಸ್. ಷಡಕ್ಷರಿ - GOVT EMPLOYEES ASSOCIATION

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯು ಡಿಸೆಂಬರ್ 27 ರಂದು ನಡೆಯಲಿದೆ ಎಂದು ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಮಾಹಿತಿ ನೀಡಿದ್ದಾರೆ.

ಸಿ.ಎಸ್.ಷಡಕ್ಷರಿ
ಸಿ.ಎಸ್.ಷಡಕ್ಷರಿ (ETV Bharat)
author img

By ETV Bharat Karnataka Team

Published : 14 hours ago

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029ನೇ ಅವಧಿಯ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಖಜಾಂಚಿ ಸ್ಥಾನದ ಚುನಾವಣೆಯು ಡಿಸೆಂಬರ್ 27 ರಂದು ಶುಕ್ರವಾರ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ನಗರದ ಕಬ್ಬನ್ ಪಾರ್ಕ್​​ನಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆವರಣದಲ್ಲಿ ನಡೆಯಲಿದೆ.

ನಗರದ ವಸತಿ ಗೃಹದಲ್ಲಿ ಇಂದು ಮಾಧ್ಯಮಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರು, ರಾಜ್ಯದಲ್ಲಿ 5.25 ಲಕ್ಷ ಸರ್ಕಾರಿ ನೌಕರರನ್ನು ಪ್ರತಿನಿಧಿಸುವ ರಾಜ್ಯದ ಏಕೈಕ ಬೃಹತ್ ಸಂಘಟನೆಯಾಗಿದ್ದು, ಬೇರೆ ರಾಜ್ಯಗಳ ನೌಕರರ ಸಂಘಟನೆಗಳಿಗೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ. ರಾಜ್ಯಾದ್ಯಂತ 30 ಜಿಲ್ಲಾ ಶಾಖೆಗಳು, 3 ಶೈಕ್ಷಣಿಕ ಜಿಲ್ಲೆಗಳು, 186 ತಾಲೂಕು ಶಾಖೆಗಳು ಮತ್ತು 7 ಯೋಜನಾ ಶಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.

ಸಿ.ಎಸ್.ಷಡಕ್ಷರಿ (ETV Bharat)

ಜಿಲ್ಲಾ ಶಾಖೆಗಳಲ್ಲಿ 66 ಜಿಲ್ಲಾ ನಿರ್ದೇಶಕರು, ಜಿಲ್ಲಾಧ್ಯಕ್ಷರು, ಜಿಲ್ಲಾ ಖಜಾಂಚಿ, ರಾಜ್ಯ ಪರಿಷತ್ ಸದಸ್ಯರನ್ನು ಚುನಾವಣೆ ಮುಖಾಂತರ ಆಯ್ಕೆ ಮಾಡಲಾಗುತ್ತದೆ. ಅದೇ ರೀತಿ ತಾಲೂಕು ಶಾಖೆಗಳಲ್ಲಿ 34 ನಿರ್ದೇಶಕರು, ತಾಲೂಕು ಅಧ್ಯಕ್ಷರು, ಖಜಾಂಚಿ ಮತ್ತು ರಾಜ್ಯ ಪರಿಷತ್ ಸದಸ್ಯರನ್ನು ಚುನಾವಣೆ ಮೂಲಕ ಆಯ್ಕೆ ಮಾಡಲಾಗುತ್ತದೆ. ರಾಜ್ಯದಲ್ಲಿ 7 ಯೋಜನಾ ಶಾಖೆಗಳಿದ್ದು, 19 ನಿರ್ದೇಶಕರು, ಅಧ್ಯಕ್ಷರು, ಖಜಾಂಚಿ ಮತ್ತು ರಾಜ್ಯ ಪರಿಷತ್ ಸದಸ್ಯರನ್ನು ಚುನಾವಣೆಯಲ್ಲಿ ಆಯ್ಕೆ ಮಾಡಲಾಗುತ್ತದೆ. ಜಿಲ್ಲೆ, ತಾಲೂಕು ಮತ್ತು ಯೋಜನಾ ಶಾಖೆಗಳ ಅಧ್ಯಕ್ಷರು, ಕಾರ್ಯದರ್ಶಿಯನ್ನು ನಾಮನಿರ್ದೇಶನದ ಮೂಲಕ ನೇಮಕ ಮಾಡಲಾಗುತ್ತದೆ. ಬೆಂಗಳೂರು ನಗರ ಜಿಲ್ಲೆಯ ವಿವಿಧ ಇಲಾಖೆಗಳಿಂದ 102 ರಾಜ್ಯ ಪರಿಷತ್ ಸದಸ್ಯರನ್ನು ಚುನಾವಣೆ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ಹೇಳಿದರು.

ಸಂಘದ ರಾಜ್ಯಾಧ್ಯಕ್ಷ ಮತ್ತು ರಾಜ್ಯ ಖಜಾಂಚಿ ಸ್ಥಾನದ ಚುನಾವಣೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ 102 ರಾಜ್ಯ ಪರಿಷತ್ ಸದಸ್ಯರು ಮತ್ತು ಜಿಲ್ಲಾ ಶಾಖೆಗಳ ಜಿಲ್ಲಾಧ್ಯಕ್ಷರು ಈ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವಿದೆ. ಜೊತೆಗೆ ಬೆಂಗಳೂರು ನಗರ ಜಿಲ್ಲೆಯ 102 ರಾಜ್ಯ ಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು, ಜಿಲ್ಲಾ ಖಜಾಂಚಿ, ಜಿಲ್ಲಾ ರಾಜ್ಯ ಪರಿಷತ್ ಸದಸ್ಯರು, ಜಿಲ್ಲಾ ಕಾರ್ಯದರ್ಶಿ ಮತ್ತು ತಾಲೂಕು ಶಾಖೆಯ ಅಧ್ಯಕ್ಷರು, ಖಜಾಂಚಿ, ರಾಜ್ಯ ಪರಿಷತ್ ಸದಸ್ಯರು, ಕಾರ್ಯದರ್ಶಿ ಮತ್ತು ಯೋಜನಾ ಶಾಖೆಗಳ ಅಧ್ಯಕ್ಷರು ಸೇರಿದಂತೆ ಒಟ್ಟು 971 ಮತದಾರರಿದ್ದು, ಈ ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ ಎಂದು ತಿಳಿಸಿದರು.

ನೌಕರರ ಸಂಘದ 2024-2029ರ ಅವಧಿಯ ಚುನಾವಣೆಗೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆಯ ಕೃಷ್ಣಯ್ಯ ಎಂಬುವರು ನ್ಯಾಯಾಲಯದಲ್ಲಿ ಪ್ರಕರಣಗಳನ್ನು ದಾಖಲಿಸಿ ಚುನಾವಣೆಗೆ ತಾತ್ಕಾಲಿಕ ತಡೆಯಾಜ್ಞೆ ತಂದಿದ್ದರು. ಆದರೆ ಚುನಾವಣೆಗೆ ನೀಡಿದ್ದ ತಾತ್ಕಾಲಿಕ ತಡೆಯಾಜ್ಞೆಯನ್ನು ವಜಾಗೊಳಿಸಿ ಚುನಾವಣೆ ಪ್ರಕ್ರಿಯೆ ಮುಂದುವರೆಸಲು ಹೈಕೋರ್ಟ್ ಆದೇಶ ನೀಡಿದೆ. ಹಾಗೂ ಸರ್ಕಾರವು ಸಂಘಕ್ಕೆ ಆಡಳಿತಾಧಿಕಾರಿ ನೇಮಿಸಿದ್ದ ಕ್ರಮವನ್ನು ತಿರಸ್ಕರಿಸಿ ಸಂಘದ ಬೈಲಾ ನಿಯಮವನ್ನು ಎತ್ತಿ ಹಿಡಿದಿದೆ. ಚುನಾವಣೆಗೆ ಸಂಬಂಧಿಸಿದಂತೆ ಕೆಲವರು ದುರುದ್ದೇಶದಿಂದ ನ್ಯಾಯಾಲಯಗಳಲ್ಲಿ ದಾಖಲಿಸಿದ್ದ ಬಹುತೇಕ ಎಲ್ಲಾ ಪ್ರಕರಣಗಳು ವಜಾಗೊಂಡಿವೆ ಎಂದು ಹೇಳಿದರು.

2019-2024ನೇ ಅವಧಿಯ ಸಾಧನೆಗಳು: ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಗಾಗಿ ರಾಜ್ಯ 7ನೇ ವೇತನ ಆಯೋಗವನ್ನು ಅವಧಿಯೊಳಗೆ ರಚಿಸಲು ಯಶಸ್ವಿಯಾಗಿದೆ. ರಾಜ್ಯ 7ನೇ ವೇತನ ಆಯೋಗದ ವರದಿಯ ತಿಫಾರಸ್ಸಿನಂತೆ ಶೇ.27.50 ರಷ್ಟು ವೇತನ ಭತ್ಯೆಗಳ ಪರಿಷ್ಕರಣೆಯ ಆರ್ಥಿಕ ಲಾಭವನ್ನು ಪಡೆಯಲಾಗಿದೆ.

2023ರಲ್ಲಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಡುವ ಮೂಲಕ ಶೇ.17 ರಷ್ಟು ಮಧ್ಯಂತರ ಪರಿಹಾರ ಭತ್ಯೆಯನ್ನು ಪಡೆದುಕೊಳ್ಳಲಾಗಿದೆ. ರಾಜ್ಯ ಸರ್ಕಾರದಿಂದ ಅಂದಾಜು 18 ಕೋಟಿ ರೂ. ಅನುದಾನ ಪಡೆದು ರಾಜ್ಯ ಸರ್ಕಾರಿ ನೌಕರರ ಸಂಘದ ಕಚೇರಿ, ಸಭಾಂಗಣ ಮತ್ತು ವಸತಿ ಗೃಹಗಳನ್ನು ನವೀಕರಣ ಮಾಡಲಾಗಿದೆ. ಅದೇ ರೀತಿ ಸರ್ಕಾರಿ ನೌಕರರ ಆರೋಗ್ಯದ ಬಗ್ಗೆ ಗಮನಹರಿಸಲಾಗಿದ್ದು, ಹಲವು ಸವಲತ್ತುಗಳನ್ನು ನೀಡಲಾಗಿದೆ ಎಂದು ಅವರು ತಿಳಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹಾಲಿ ಅಧ್ಯಕ್ಷರಾದ ಸಿ.ಎಸ್. ಷಡಕ್ಷರಿ ಈ ಬಾರಿಯೂ ರಾಜ್ಯಾಧ್ಯಕ್ಷರ ಹುದ್ದೆಗೆ ಸ್ಪರ್ಧಿಸಿದ್ದಾರೆ. ರಾಜ್ಯ ಖಜಾಂಚಿ ಸ್ಥಾನಕ್ಕೆ ಹಾಲಿ ರಾಜ್ಯ ಉಪಾಧ್ಯಕ್ಷರು ಹಾಗೂ ಕೊಪ್ಪಳ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮನ್ನವರು ಸ್ಪರ್ಧಿಸಿದ್ದಾರೆ.

ಇದನ್ನೂ ಓದಿ: ಹೊಸ ವರ್ಷಕ್ಕೆ ರಾಜ್ಯ ಸರ್ಕಾರದಿಂದ ಗಿಫ್ಟ್: ಗುತ್ತಿಗೆ ಆಧಾರದ ಸಿಬ್ಬಂದಿಯ ಸಂಚಿತ ವೇತನ ಪರಿಷ್ಕರಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.