ಹಾವೇರಿ: ಸೂಕ್ತ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 75 ಲಕ್ಷ ರೂಪಾಯಿ ಬ್ಯಾಂಕ್ ಹಣವನ್ನು ಹಾವೇರಿ ಚುನಾವಣಾಧಿಕಾರಿಗಳು ಮಂಗಳವಾರ ವಶಪಡಿಸಿಕೊಂಡ ಘಟನೆ ನಡೆದಿದೆ. ಈ ಹಣ ಬ್ಯಾಡಗಿ ನಗರದ ಎರಡು ಬ್ಯಾಂಕ್‌ಗಳಿಗೆ ಸೇರಿದ್ದು ಎನ್ನಲಾಗಿದೆ. ಬ್ಯಾಂಕ್ನಿಂದ ಹಣ ತಗೆದುಕೊಂಡು ಹೋಗಲು ಅನುಮತಿ ಪಡೆದ ವಾಹನದ ಬದಲಿಗೆ ಬೇರೆ ವಾಹನದಲ್ಲಿ ಹಣ ತಗೆದುಕೊಂಡು ಹೋಗಿದ್ದರು. ಜಿಲ್ಲೆಯ ಬ್ಯಾಡಗಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48 ರಲ್ಲಿರುವ ಮೋಟೆಬೆನ್ನೂರು ಚೆಕ್ ಪೋಸ್ಟ್‌ನಲ್ಲಿ ವಾಹನ ತಪಾಸಣೆ ಮಾಡಿದ ಅಧಿಕಾರಿಗಳು ಸೂಕ್ತ ದಾಖಲೆಗಳು ಇಲ್ಲದ ಕಾರಣ ಹಣ ವಶಪಡಿಸಿಕೊಂಡಿದ್ದಾರೆ.
ಹಾವೇರಿ ಲೋಕಸಭೆ ಚುನಾವಣೆ ಘೋಷಣೆಯಾದ ಮೇಲೆ ಸಿಕ್ಕ ದೊಡ್ಡ ಮೊತ್ತದ ಹಣ ಇದಾಗಿತ್ತು. ಸ್ಥಳಕ್ಕೆ ಚುನಾವಣಾಧಿಕಾರಿ ಅಕ್ಷಯ ಶ್ರೀಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಬ್ಯಾಂಕ್ ಅಧಿಕಾರಿಗಳು ಬಂದ ನಂತರ ಹಣವನ್ನು ವಾಪಸ್ ನೀಡಲಾಗಿದೆ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಹಣ ವಶಪಡಿಸಿಕೊಂಡ ಬಗ್ಗೆ ಅಕ್ಷಯ ಶ್ರೀಧರ್ ಮಾಹಿತಿ ನೀಡಿದ್ದಾರೆ. ಈ ಹಿಂದೆ ಪ್ರತ್ಯೇಕ ಪ್ರಕರಣಗಳಲ್ಲಿ 2 ಲಕ್ಷ ರೂಪಾಯಿ 85 ಸಾವಿರ ರೂಪಾಯಿ ವಶಪಡಿಸಿಕೊಳ್ಳಲಾಗಿತ್ತು.
ಇದನ್ನೂ ಓದಿ: ಧಾರವಾಡ, ಬಳ್ಳಾರಿ, ಬಾಗಲಕೋಟೆಯಲ್ಲಿ ನಗದು ಸಹಿತ ಮದ್ಯ ಜಪ್ತಿ - Pre Poll Seizures