ETV Bharat / state

ಗಡಿಯಲ್ಲಿ ಚುನಾವಣಾ ಅಧಿಕಾರಿಗಳಿಂದ ತಪಾಸಣೆ: ಆಂಧ್ರ ಸಿಎಂ ಜಗನ್​ ಮೋಹನ್​ ರೆಡ್ಡಿ ಚಿತ್ರವುಳ್ಳ 96 ಕೈಗಡಿಯಾರ ವಶಕ್ಕೆ - WATCHES SEIZED AT BAGEPALLY - WATCHES SEIZED AT BAGEPALLY

ಲೋಕಸಭಾ ಚುನಾವಣೆ ಹಿನ್ನೆಲೆ ಚುನಾವಣಾ ಅಧಿಕಾರಿಗಳು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ಕೈಗಡಿಯಾರಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕೈಗಡಿಯಾರಗಳು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಚಿತ್ರವುಳ್ಳದ್ದಾಗಿವೆ.

Election officials seized Andhra CM Jagan Mohan picture 96 watches during inspection in border
ಆಂಧ್ರ ಸಿಎಂ ಜಗನ್​ ಮೋಹನ್​ ರೆಡ್ಡಿ ಚಿತ್ರವುಳ್ಳ 96 ಕೈಗಡಿಯಾರ ವಶಕ್ಕೆ
author img

By ETV Bharat Karnataka Team

Published : Mar 21, 2024, 3:38 PM IST

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ ನಗರದಲ್ಲಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಜಿಲ್ಲೆಯ ಬಾಗೇಪಲ್ಲಿ ಚೆಕ್ ಪೋಸ್ಟ್​​ನಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಚಿತ್ರವುಳ್ಳ 96 ಕೈಗಡಿಯಾರ (ವಾಚ್) ಗಳನ್ನು ಚುನಾವಣಾ ಅಧಿಕಾರಿಗಳು ಸೀಜ್ ಮಾಡಿರುವ ಘಟನೆ ನಡೆದಿದೆ.

ಸುಮಾರು 1 ಲಕ್ಷ ರೂಪಾಯಿ ಮೌಲ್ಯದ ಕೈಗಡಿಯಾರಗಳು ಇವಾಗಿರಬಹುದೆಂದು ಅಂದಾಜು ಮಾಡಲಾಗಿದೆ. ಆಂಧ್ರ ಗಡಿಯ ಚೆಕ್ ಪೋಸ್ಟ್​​ನಲ್ಲಿ ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ತಪಾಸಣೆ ಮಾಡುತ್ತಿದ್ದಾಗ ಇವುಗಳು ಪತ್ತೆಯಾಗಿದ್ದು, ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ವಾಚ್​​ಗಳನ್ನು ಅನಂತಪುರದಿಂದ ಬೆಂಗಳೂರಿಗೆ ಕಾರಿನಲ್ಲಿ ಸಾಗಿಸುತ್ತಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ. ಈ ಸಂಬಂಧ ಅನಂತಪುರದ ವೈಎಸ್​ಆರ್​ ಕಾಂಗ್ರೆಸ್ ಪಕ್ಷದ ಮುಖಂಡ ಬಂಡಿ ನಾಗೇಂದ್ರ ವಿರುದ್ಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಪಿ 31 ಹೆಚ್​ಇ 1111 ಸಂಖ್ಯೆಯ ಫಾರ್ಚುನರ್ ಕಾರನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಚುನಾವಣಾ ನೀತಿ ಸಂಹಿತೆ ಜಾರಿ, ಫೀಲ್ಡಿಗಿಳಿದು ವಾಹನ ತಪಾಸಣೆ ಮಾಡಿದ ದಾವಣಗೆರೆ ಜಿಲ್ಲಾಧಿಕಾರಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.