ETV Bharat / state

ದಕ್ಷಿಣ ಕನ್ನಡ: ರೆಫ್ರಿಜರೇಟರ್ ಸ್ಫೋಟಗೊಂಡು ಸುಟ್ಟು ಕರಕಲಾದ ಮನೆಯ ಉಪಕರಣ, ದಾಖಲೆ ಪತ್ರಗಳು - refrigerator explosion

ರೆಫ್ರಿಜರೇಟರ್ ಸ್ಫೋಟಗೊಂಡು ವಿದ್ಯುತ್ ಉಪಕರಣ ಸೇರಿದಂತೆ ದಾಖಲೆ ಪತ್ರಗಳು ಬೆಂಕಿಗಾಹುತಿಯಾದ ಘಟನೆ ಕಡಬದಲ್ಲಿ ನಡೆದಿದೆ.

author img

By ETV Bharat Karnataka Team

Published : Jun 9, 2024, 8:08 PM IST

ರೆಫ್ರಿಜರೇಟರ್ ಸ್ಫೋಟ
ರೆಫ್ರಿಜರೇಟರ್ ಸ್ಫೋಟ (ETV Bharat)

ಕಡಬ(ದಕ್ಷಿಣ ಕನ್ನಡ): ರೆಫ್ರಿಜರೇಟರ್ ಸ್ಫೋಟಗೊಂಡು ವಿದ್ಯುತ್ ಉಪಕರಣ ಸೇರಿದಂತೆ ಮನೆಯ ದಾಖಲೆ ಪತ್ರಗಳು ಸುಟ್ಟು ಕರಕಲಾದ ಘಟನೆ ಕಡಬದಲ್ಲಿ ನಡೆದಿದೆ.

ಕಡಬದ ಅಡ್ಡಗದ್ದೆ ಅಂಗನವಾಡಿ ಬಳಿ ಇರುವ ಫಾರೂಕ್ ಎಂಬವರ ಮನೆಯಲ್ಲಿ ಈ ಅವಘಡ ಭಾನುವಾರ 3 ಗಂಟೆ ಸುಮಾರಿಗೆ ನಡೆದಿದೆ. ಮಧ್ಯಾಹ್ನದ ವೇಳೆ ಫಾರುಕ್ ಮತ್ತು ಅವರ ಪತ್ನಿ ಸಹಿತ ಮಕ್ಕಳು ಮನೆಯಲ್ಲಿದ್ದರು. ಬಳಿಕ ಪತ್ನಿ ಮಕ್ಕಳು ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದು ಫಾರೂಕ್ ಅವರು ತಹಶೀಲ್ದಾರ್​ ಕಚೇರಿ ಬಳಿ ಇರುವ ತನ್ನ ಅಂಗಡಿಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಅವಘಡ ಸಂಭವಿಸಿದ್ದು, ದೊಡ್ಡ ದುರಂತವೊಂದು ತಪ್ಪಿದೆ.

ಫಾರೂಕ್ ಅವರು ಸುಮಾರು ಐದು ವರ್ಷಗಳ ಹಿಂದೆ ರೆಫ್ರಿಜರೇಟರ್ ಖರೀದಿಸಿದ್ದರು. ಎಂದಿನಂತೆ ರೆಫ್ರಿಜರೇಟರ್ ಚಾಲು ಮಾಡಿದ್ದರು. ಮನೆಯ ಸುತ್ತ ಹೊಗೆ ಕಾಣಿಸಿಕೊಂಡ ಹಿನ್ನೆಲೆ‌ ಸ್ಥಳೀಯರು ಸಂಶಯಗೊಂಡು ನೋಡಿದಾಗ ಬೆಂಕಿ ಉರಿಯುತ್ತಿರುವುದು ಕಂಡು ಬಂದಿದೆ. ಸ್ಥಳೀಯರು ಬೆಂಕಿ ನಂದಿಸಲು ಸಹರಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ, 30 ಮಂದಿಗೆ ಗಾಯ - BUS OVERTURNED

ETV Bharat Logo

Copyright © 2024 Ushodaya Enterprises Pvt. Ltd., All Rights Reserved.