ETV Bharat / state

ಬಿಲ್‌ ಬಂದ 30 ದಿನದೊಳಗೆ ಶುಲ್ಕ ಪಾವತಿಸದಿದ್ದರೆ ವಿದ್ಯುತ್‌ ಸಂಪರ್ಕ ಕಡಿತ: ಬೆಸ್ಕಾಂ - Electricity Bill Payment

author img

By ETV Bharat Karnataka Team

Published : Aug 30, 2024, 10:00 PM IST

ಗ್ರಾಹಕರು ನಿಗದಿತ ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಬೆಸ್ಕಾಂ ಹೇಳಿದೆ.

ELECTRICITY BILL PAYMENT
ಬೆಸ್ಕಾಂ (ETV Bharat)

ಬೆಂಗಳೂರು: ಬಿಲ್‌ ಬಂದ 30 ದಿನದೊಳಗೆ ವಿದ್ಯುತ್‌ ಶುಲ್ಕ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ (ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗ) ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಬೆಸ್ಕಾಂ ಹೇಳಿದೆ.

ಸೆಪ್ಟೆಂಬರ್‌ 1ರಿಂದ ಕಟ್ಟುನಿಟ್ಟಾಗಿ ಈ ನಿಯಮವನ್ನು ಪಾಲಿಸಲು ನಿರ್ಧರಿಸಲಾಗಿದೆ. ವಾಣಿಜ್ಯ ಬಳಕೆದಾರರು, ಅಪಾರ್ಟ್‌ಮೆಂಟ್‌ಗಳು ಹಾಗೂ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ ಮೀಟರ್‌ ರೀಡಿಂಗ್‌ಗೆ ಬರುವ ದಿನ ಅಂದರೆ ಪ್ರತಿ ತಿಂಗಳ ಮೊದಲ 15 ದಿನದಲ್ಲೇ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು. ಹಾಗಾಗಿ, ಗ್ರಾಹಕರು ಸಕಾಲದಲ್ಲಿ ಶುಲ್ಕ ಪಾವತಿಸಬೇಕೆಂದು ಪ್ರಕಟಣೆಯಲ್ಲಿ ಕೋರಿದೆ.

ಪ್ರತಿ ತಿಂಗಳ ಮೊದಲ 15 ದಿನದಲ್ಲಿ ಮೀಟರ್‌ ಮಾಪನ ಮಾಡಿದ ಬಳಿಕ, ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿದ್ಯುತ್‌ ಸಂಪರ್ಕ ಸ್ಥಗಿತಗೊಳಿಸಲು ಲೈನ್‌ಮೆನ್‌ಗಳ ಜೊತೆಗೆ ಮಾಪಕ ಓದುಗರು ಮತ್ತೆ ಅದೇ ಸ್ಥಳಕ್ಕೆ ತೆರಳುತ್ತಿದ್ದರು. ಇನ್ನು ಮುಂದೆ ಮಾಪಕ ಓದುಗರೊಂದಿಗೆ ಇರುವ ಲೈನ್‌ಮೆನ್‌ಗಳು ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿದ್ಯುತ್ ಸರಬರಾಜನ್ನು ಬಿಲ್ ನೀಡುವ ಸಮಯದಲ್ಲೇ ಸ್ಥಗಿತಗೊಳಿಸಲಿದ್ದಾರೆ ಎಂದು ಮಾಹಿತಿ ನೀಡಿದೆ.

ವಿದ್ಯುತ್ ಬಿಲ್‌ ಪಾವತಿಗೆ ಅಂತಿಮ ದಿನಾಂಕದವರೆಗೆ (ಅಂದರೆ ಬಿಲ್ ನೀಡಿದ 15 ದಿನಗಳು) ಯಾವುದೇ ಬಡ್ಡಿಯಿಲ್ಲದೆ 15 ದಿನ ಕಾಲಾವಕಾಶ ನೀಡಲಾಗುತ್ತದೆ. ಅಂತಿಮ ದಿನಾಂಕದ ನಂತರವೂ ಬಡ್ಡಿಸಹಿತ ಪಾವತಿಗೆ 15 ದಿನಗಳ ಕಾಲಾವಕಾಶ ನೀಡಲಾಗುತ್ತದೆ. ಗ್ರಾಹಕರು ಬಿಲ್ ಪಾವತಿಸದಿದ್ದಲ್ಲಿ ಮುಂದಿನ‌ ಮೀಟರ್ ರೀಡಿಂಗ್ ದಿನವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ. ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂ.ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ವಿದ್ಯುತ್ ಮೀಟರ್​ಗಳ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ ಎಂದು ಹೇಳಿದೆ.

ಆನ್‌ಲೈನ್ ಮೂಲಕ ವಿದ್ಯುತ್‌ ಬಿಲ್‌ ಪಾವತಿಸಿದ ಸಂದರ್ಭದಲ್ಲಿ ಕೆಲವೊಮ್ಮೆ ಬೆಸ್ಕಾಂ ಸಾಫ್ಟ್‌ವೇರ್‌ನಲ್ಲಿ ವಿವರ ನಮೂದಾಗದೇ ಇದ್ದಾಗ, ಬಾಕಿ ತೋರಿಸುವ ಸಾಧ್ಯತೆ ಇರುತ್ತದೆ. ಇಂಥಹ ಸಂದರ್ಭದಲ್ಲಿ ವಿದ್ಯುತ್‌ ಕಡಿತಕ್ಕೆ ಮುಂದಾದರೆ, ಸಿಬ್ಬಂದಿಗೆ ಬಿಲ್‌ ರಸೀದಿ ತೋರಿಸುವುದರಿಂದ ವಿದ್ಯುತ್‌ ಕಡಿತ ಮಾಡಲಾಗುವುದಿಲ್ಲ. ಹಾಗಾಗಿ, ನಮ್ಮ ಸಿಬ್ಬಂದಿಯೊಂದಿಗೆ ಸಹಕರಿಸಿ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.

ಇದನ್ನೂ ಓದಿ: ವಿದ್ಯುತ್ ಬಿಲ್​ನಲ್ಲಿ ಹೆಚ್ಚುವರಿ ಭದ್ರತಾ ಠೇವಣಿ: ಗ್ರಾಹಕರ ಗೊಂದಲಕ್ಕೆ ಬೆಸ್ಕಾಂ ಸ್ಪಷ್ಟನೆ - BESCOM Clarification

ETV Bharat Logo

Copyright © 2024 Ushodaya Enterprises Pvt. Ltd., All Rights Reserved.