ETV Bharat / state

ಆನೆ-ಮಾನವ ಸಂಘರ್ಷ ನಿಯಂತ್ರಣ: ಸಮ್ಮೇಳನದಲ್ಲಿ ಭಾಗವಹಿಸಿದ್ದ ರಾಜ್ಯಗಳು ಕೈಗೊಂಡ ನಿರ್ಣಯಗಳೇನು? - Elephant Human Conflict Control

author img

By ETV Bharat Karnataka Team

Published : Aug 12, 2024, 8:12 PM IST

ಆನೆ-ಮಾನವ ಸಂಘರ್ಷ ನಿಯಂತ್ರಣ ಕುರಿತು ಬೆಂಗಳೂರಿನಲ್ಲಿ ಇಂದು ನಡೆದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿದ್ದ ರಾಜ್ಯಗಳು ಕೈಗೊಂಡಿದ್ದ ನಿರ್ಣಯಗಳೇನು?

INTERNATIONAL CONFERENCE  VARIOUS STATES PARTICIPATED  BENGALURU
ಸಂಗ್ರಹ ಚಿತ್ರ (ETV Bharat)

ಬೆಂಗಳೂರು: ನಗರದ ಜಿಕೆವಿಕೆ ಆವರಣದಲ್ಲಿ ಇಂದು ಆಯೋಜಿಸಿದ್ದ ಮಾನವ ಮತ್ತು ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿವಿಧ ರಾಜ್ಯಗಳಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಆನೆಗಳಿಗೆ ಗರ್ಭನಿರೋಧಕ ಯೋಜನೆ ಅಳವಡಿಕೆ ಮಾಡುವುದು, ಲಾಂಟನಾವನ್ನು ಮೂಲೋತ್ಪಾಟನೆ ಮಾಡುವುದು, ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮುಂದುವರೆಸುವುದು ಮತ್ತು ಇದಕ್ಕೆ ಕೇಂದ್ರ ಸರಕಾರದ ನೆರವು ಕೋರುವ ಬಗ್ಗೆ ಚರ್ಚಿಸಿ, ಕೆಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು. ಸಭೆಯಲ್ಲಿ ತಮಿಳುನಾಡಿನ ಅರಣ್ಯ ಸಚಿವ ಮೆತಿವೆಂಥನ್, ತೆಲಂಗಾಣ ಅರಣ್ಯ ಸಚಿವೆ ಕೊಂಡ ಸುರೇಖಾ, ಜಾರ್ಖಂಡ್ ಅರಣ್ಯ ಸಚಿವ ಬೈದ್ಯನಾಥ್ ರಾಮ್ ಮತ್ತು ವಿವಿಧ ರಾಜ್ಯಗಳ ಅಧಿಕಾರಿಗಳಿದ್ದರು.

ಬಾಕಿಯಿರುವ 1 ಸಾವಿರ ಕೋಟಿ ಕ್ಯಾಂಪಾ ನಿಧಿ ಬಿಡುಗಡೆ ಕೇಂದ್ರಕ್ಕೆ ಮನವಿ ನೀಡುವುದು. ಆನೆ ಸೇರಿದಂತೆ ವನ್ಯಜೀವಿಗಳಿಂದ ಮಾನವ ಮೃತ ಕುಟುಂಬಕ್ಕೆ ಎಲ್ಲಾ ರಾಜ್ಯಗಳಲ್ಲಿ‌ ಏಕರೂಪ ಪರಿಹಾರ ನೀಡುವುದು. ಆನೆಗಳ‌‌ ಕುಟುಂಬ ಸಂಖ್ಯೆ ನಿಯಂತ್ರಣಕ್ಕೆ ಅನುಮತಿ ನೀಡಬೇಕೆಂದು ಕೇಂದ್ರಕ್ಕೆ ಕರ್ನಾಟಕ, ತಮಿಳುನಾಡು, ಕೇರಳ, ಜಾರ್ಖಂಡ್ ರಾಜ್ಯಗಳ ನಿಯೋಗ ಕೊಂಡೊಯ್ಯುವ ನಿರ್ಣಯಕ್ಕೆ ಬರಲಾಯಿತು.

ಕಾಡುಗಳಲ್ಲಿ ಇರುವ ಲಂಟಾನಾ ಮತ್ತು ಕಳೆ ನಿರ್ಮೂಲನೆಗೆ ಆಧುನಿಕ ಯಂತ್ರೋಪಕರಣ ಬಳಕೆ, ಕಾಡಂಚಿನ ಗ್ರಾಮಗಳಲ್ಲಿ ಅರಿವು ಮೂಡಿಸುವ ಜೊತೆಗೆ ಗ್ರಾ.ಪಂ ಸದಸ್ಯರು, ಪಿಡಿಒಗಳು, ಇಒಗಳು, ತಹಶೀಲ್ದಾರ್, ಪೊಲೀಸ್ ಇಲಾಖೆ, ಡಿಸಿ, ಎಸ್ಪಿ ಎಲ್ಲರನ್ನೂ ಒಳಗೊಂಡಂತೆ ವಾಟ್ಸ್‌ಆ್ಯಪ್ ಗ್ರೂಪ್ ಮಾಡಿ, ವನ್ಯಜೀವಿಗಳು ಗ್ರಾಮಗಳತ್ತ ನುಗ್ಗಿವೆ ಎಂದಾಗ ಅಲರ್ಟ್ ಮಾಡುವುದು. ಇದಕ್ಕೆ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್‌ಒಪಿ) ಸಿದ್ದಪಡಿಸುವುದು. ಆನೆ ತಡೆಗೆ ಬೇಕಾಗುವ ಅಗತ್ಯ ತಂತ್ರಜ್ಞಾನ ಅಳವಡಿಸಲು ಕೇಂದ್ರ ಸರ್ಕಾರ ಸಹಕಾರ ನೀಡಬೇಕೆಂದು ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಯಿತು.

ಕೇರಳದ ಅರಣ್ಯ ಸಚಿವ ಎ.ಕೆ.ಸಸೀಂದ್ರನ್ ಮಾತನಾಡಿ, ಉಪಕ್ರಮದ ನೇತೃತ್ವವನ್ನು ತಾವು ವಹಿಸುವುದಾಗಿ ಸ್ವಯಂಪ್ರೇರಿತವಾಗಿ ಪ್ರಕಟಿಸಿದರು. ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳ ಅರಣ್ಯ ಸಚಿವರನ್ನೂ ಕರೆದುಕೊಂಡು ದೆಹಲಿಗೆ ನಿಯೋಗ ತೆರಳುವ ಮೂಲಕ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ದಿನಾಂಕ ನಿಗದಿ ಮಾಡುವಂತೆ ಈಶ್ವರ ಖಂಡ್ರೆ ತಿಳಿಸಿದರು ಇದಕ್ಕೆ ಸಭೆ ಸಮ್ಮತಿಸಿತು.

ಲಾಂಟನಾ ಮತ್ತು ಸನ್ನಾ ಸಮಸ್ಯೆ ಪರಿಹಾರಕ್ಕೆ ಬೇರೆ ರಾಜ್ಯಗಳಲ್ಲಿ ಕೈಗೊಂಡಿರುವ ಕ್ರಮಗಳ ಕುರಿತ ಚರ್ಚೆಯ ವೇಳೆ ನಿರಂತರವಾಗಿ ಲಾಂಟನಾವನ್ನು ಮೂಲೋತ್ಪಾಟನೆ ಮಾಡುವುದೇ ಪರಿಹಾರ ಎಂಬ ಅಭಿಪ್ರಾಯ ವ್ಯಕ್ತವಾಯಿತು. ಕೆಲವು ಆದಿವಾಸಿಗಳು ಲಾಂಟನಾದಿಂದ ಅಲಂಕಾರಿಕ ವಸ್ತು ಮತ್ತು ವನ್ಯಮೃಗಗಳ ಪ್ರತಿಕೃತಿ ನಿರ್ಮಾಣ ಮಾಡುತ್ತಿದ್ದು, ಅವರೇ ಸ್ವತಃ ಮುಂದೆ ಬಂದು ಲಾಂಟನಾ ಕಳೆ ತೆಗೆಯುವುದಾದರೆ ಅವರಿಗೆ ಅವಕಾಶ ಕೊಡುವ ಬಗ್ಗೆಯೂ ಚರ್ಚಿಸಲಾಯಿತು.

ಆನೆ-ಮಾನವ ಸಂಘರ್ಷದಲ್ಲಿ ಮೃತಪಟ್ಟವರಿಗೆ ಮತ್ತು ಬೆಳೆ ನಷ್ಟಕ್ಕೊಳಗಾದವರಿಗೆ ನೀಡಲಾಗುತ್ತಿರುವ ಪರಿಹಾರ, ಆನೆಗಳು ನಾಡಿಗೆ ಬಾರದಂತೆ ತಡೆಯಲು ಯಾವ ಯಾವ ರಾಜ್ಯದಲ್ಲಿ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆ ಈಶ್ವರ ಖಂಡ್ರೆ ಅವರು ಇತರ ರಾಜ್ಯಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಮಾಹಿತಿ ಪಡೆದರು.

ಇದನ್ನೂ ಓದಿ: ಮಾನವ-ಆನೆ ಸಂಘರ್ಷ ತಡೆಗೆ ಸರ್ಕಾರ ಬದ್ಧ, 8 ಆನೆ ಕಾರ್ಯಪಡೆ ರಚನೆ: ಸಿಎಂ ಸಿದ್ದರಾಮಯ್ಯ - CM Siddaramaiah

ETV Bharat Logo

Copyright © 2024 Ushodaya Enterprises Pvt. Ltd., All Rights Reserved.