ETV Bharat / state

ಆನೆ-ಮಾನವ ಸಂಘರ್ಷ ತಡೆಗೆ ಮತ್ತೊಂದು ಹೆಜ್ಜೆ: ಭದ್ರಾ ಅಭಯಾರಣ್ಯದಲ್ಲಿ 'ಆನೆ ಧಾಮ' ನಿರ್ಮಾಣ - ELEPHANT SANCTUARY

ಭದ್ರಾ ಅಭಯಾರಣ್ಯದಲ್ಲಿ ಆನೆ ಧಾಮ ನಿರ್ಮಿಸಲು ಅರಣ್ಯ ಇಲಾಖೆ ಯೋಜನೆ ರೂಪಿಸಿದೆ.

ELEPHANT
ಭದ್ರಾ ಅಭಯಾರಣ್ಯದಲ್ಲಿ 'ಆನೆ ಧಾಮ' ನಿರ್ಮಾಣಕ್ಕೆ ಯೋಜನೆ (ಸಾಂದರ್ಭಿಕ ಚಿತ್ರ (ETV Bharat))
author img

By ETV Bharat Karnataka Team

Published : Feb 25, 2025, 11:02 PM IST

ಬೆಂಗಳೂರು: ರಾಜ್ಯದಲ್ಲಿ ಆನೆ ಮತ್ತು ಮಾನವ ಸಂಘರ್ಷ ತಡೆಯಲು ಅರಣ್ಯ ಇಲಾಖೆ ಮತ್ತೊಂದು ಪ್ರಯತ್ನ ನಡೆಸಿದ್ದು, ಭದ್ರಾ ಅಭಯಾರಣ್ಯದಲ್ಲಿ 'ಆನೆ ಧಾಮ' ನಿರ್ಮಾಣ ಮಾಡಲು ಯೋಜನೆ ರೂಪಿಸಿದೆ.

ಭದ್ರಾ ಅಭಯಾರಣ್ಯದ 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಈ ಆನೆ ಧಾಮ ನಿರ್ಮಿಸಲಾಗುತ್ತದೆ. ಆನೆಗಳಿಗೆ ಇಲ್ಲಿ ಅಗತ್ಯ ಆಹಾರ, ನೀರು ಲಭ್ಯವಿರುವಂತೆ ನೋಡಿಕೊಳ್ಳಲಾಗುತ್ತದೆ.

ಕೊಡಗು, ಹಾಸನ, ಚಿಕ್ಕಮಗಳೂರು ಸುತ್ತಮುತ್ತ ಕಾಡಿನಿಂದ ಹೊರಬಂದು ಗುಂಪಾಗಿ ಸಂಚರಿಸುವ ಕೆಲವು ಆನೆಗಳಿಂದ ಸಮಸ್ಯೆ ತಲೆದೋರಿದೆ. ಕಾಡಿನ ಹೊರಗಡೆಯೇ ಓಡಾಡುತ್ತಾ ತೊಂದರೆ ನೀಡುವ ಸುಮಾರು 150ಕ್ಕೂ ಹೆಚ್ಚು ಪುಂಡಾನೆಗಳನ್ನು ಅರಣ್ಯ ಇಲಾಖೆ ಗುರುತಿಸಿದೆ. ಇಂತಹ ಆನೆಗಳನ್ನು ಖೆಡ್ಡಾಕ್ಕೆ ಕೆಡವಿ ನಂತರ ಅವುಗಳನ್ನು ಆನೆಗಳ ಧಾಮದಲ್ಲಿ ಬಿಡುವ ಯೋಜನೆಯನ್ನ ಅರಣ್ಯ ಇಲಾಖೆ ರೂಪಿಸಿದ್ದು, ಇದು ಕಾರ್ಯಗತಗೊಳ್ಳಲು ಕಾಲಾವಕಾಶ ಬೇಕಾಗುತ್ತದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್​ ಖಂಡ್ರೆ ತಿಳಿಸಿದ್ದಾರೆ.

ದೇಶದಲ್ಲಿಯೇ ಅತಿ ಹೆಚ್ಚು 6395 ಆನೆಗಳು ರಾಜ್ಯದಲ್ಲಿವೆ. ಸರ್ಕಾರವು ಪುಂಡಾನೆಗಳ ಹಾವಳಿ ತಡೆಗೆ ಮಾರ್ಗೋಪಾಯ ಕಂಡುಹಿಡಿಯಲು ನೆರೆ ರಾಜ್ಯಗಳ ಸಚಿವರೊಂದಿಗೆ ಸಭೆ ನಡೆಸಿದೆ. ಅಂತಾರಾಷ್ಟ್ರೀಯ ಸಮಾವೇಶ ನಡೆಸಿದೆ. ತಜ್ಞರ ಸಮಿತಿ ರಚಿಸಿ ಅಧ್ಯಯನ ನಡೆಸುತ್ತಿದೆ. ಆನೆ ಕಾರ್ಯಪಡೆಯನ್ನೂ ರಚಿಸಿದೆ. ಅಷ್ಟೇ ಅಲ್ಲದೆ ಸಾರ್ವಜನಿಕರಿಗೆ ಸಕಾಲದಲ್ಲಿ ಆನೆಗಳ ಓಡಾಟದ ಬಗ್ಗೆ ಮಾಹಿತಿ ನೀಡುವ ಕಾರ್ಯ ಮಾಡುತ್ತಿದೆ ಎಂದು ಹೇಳಿದ್ದಾರೆ.

ಜನಸಂಖ್ಯೆ ಹೆಚ್ಚಳವಾದಂತೆ ಜನ ವಸತಿ ಪ್ರದೇಶವು ಅರಣ್ಯದಂಚಿನವರೆಗೆ ವಿಸ್ತರಣೆ ಆಗಿದೆ. ಕಾಡಿನ ಅಂಚಿನಲ್ಲೇ ಕೃಷಿ ಚಟುವಟಿಕೆಗಳು ನಡೆಯತೊಡಗಿವೆ. ಕಾಡಿನಂಚಿನ ಕೆರೆಗಳನ್ನು ತುಂಬಿಸುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ. ಹೀಗಾಗಿ ಆನೆಗಳು ಬಾಳೆ, ಹಲಸು, ಭತ್ತ ಇತ್ಯಾದಿ ಬೆಳೆಗಳನ್ನು ತಿನ್ನಲು, ನೀರು ಕುಡಿಯಲು ಊರಿಗೆ ಬರುತ್ತಿವೆ ಎಂದು ತಜ್ಞರು ಹೇಳುತ್ತಾರೆ. ಅದಾಗ್ಯೂ, ಆನೆಗಳು ನಾಡಿಗೆ ಬರಲು ಕಾರಣವೇನು? ಎಂಬ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ಮಾನವ-ಆನೆ ಸಂಘರ್ಷ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಕಾಡಾನೆಗಳು ನಾಡಿಗೆ, ರೈತರ ಜಮೀನಿಗೆ ನುಗ್ಗಿ ಬೆಳೆ ಹಾಳು ಮಾಡುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರದ ಅರಣ್ಯ ಇಲಾಖೆಯಿಂದ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ವನ್ಯಜೀವಿ-ಮಾನವ ಸಂಘರ್ಷ ನಿಯಂತ್ರಿಸಲು ಟೆಂಟಕಲ್ ಫೆನ್ಸಿಂಗ್, ಸೌರ ಬೇಲಿ, ಆನೆ ಕಂದಕ ನಿರ್ಮಿಸಲಾಗಿದೆ. ರೈಲ್ವೆ ಬ್ಯಾರಿಕೇಡ್ ಸಹ ಹಾಕಲಾಗುತ್ತಿದೆ. 2024-25ನೇ ಸಾಲಿನಲ್ಲಿ ಒಟ್ಟು 203 ಕಿ.ಮೀ ರೈಲ್ವೆ ಬ್ಯಾರಿಕೇಡ್ ನಿರ್ಮಿಸುವ ಯೋಜನೆ ಹಮ್ಮಿಕೊಳ್ಳಲಾಗಿದ್ದು, ಈಗಾಗಲೇ 78,917 ಕಿ.ಮೀ ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಪೂರ್ಣಗೊಂಡಿದೆ. 41,87 ಕಿ. ಮೀ ಕಾಮಗಾರಿ ಪ್ರಗತಿಯಲ್ಲಿದೆ. ಇನ್ನೂ 103 ಕಿ. ಮೀ ಗುರಿ ನಿಗದಿ ಮಾಡಲಾಗಿದ್ದು, ಮಾರ್ಚ್ 31ರೊಳಗೆ ಈ ಕಾಮಗಾರಿ ಪ್ರಕ್ರಿಯೆ ಆರಂಭವಾಗಲಿದೆ.

ಆನೆದಾಳಿಗೆ ಇಬ್ಬರ ಬಲಿ- ಸಚಿವ ಈಶ್ವರ್​ ಖಂಡ್ರೆ ಶೋಕ: ರಾಜ್ಯದಲ್ಲಿ ಕಾಡಾನೆ ದಾಳಿಗೆ ನಿನ್ನೆ ಮತ್ತು ಇಂದು ಇಬ್ಬರು ಬಲಿಯಾಗಿರುವ ಬಗ್ಗೆ ಅರಣ್ಯ ಸಚಿವ ಈಶ್ವರ್​​ ಖಂಡ್ರೆ ತೀವ್ರ ಆಘಾತ ಮತ್ತು ಶೋಕವನ್ನು ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರು ಅರಣ್ಯ ಇಲಾಖೆಯ ಮುನ್ನೆಚ್ಚರಿಕೆಗೆ ಸ್ಪಂದಿಸಬೇಕು ಎಂದು ಈ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.

ನಿನ್ನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಒಬ್ಬ ಯುವಕ ಮತ್ತು ಇಂದು ಕೋಲಾರ ಜಿಲ್ಲೆ ಕಾನಸಮುದ್ರದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ತಮಗೆ ತೀವ್ರ ನೋವು ತಂದಿದೆ. ಮೃತರ ಕುಟುಂಬದೊಂದಿಗೆ ಸರ್ಕಾರ ಇದೆ. ಅವರ ನೋವಿನಲ್ಲಿ ನಾವೂ ಭಾಗಿಯಾಗಿದ್ದೇವೆ ಎಂದು ತಿಳಿಸಿದ್ದಾರೆ.

ಮೃತರ ಹತ್ತಿರದ ಸಂಬಂಧಿಕರಿಗೆ ಕೂಡಲೇ ಪರಿಹಾರದ ಮೊತ್ತ ನೀಡಲು ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಎಲ್ಲ ದುರ್ಘಟನೆಗಳು ಬೆಳಗಿನ ಹೊತ್ತು ಮತ್ತು ಸಂಜೆಯ ವೇಳೆ ಸಂಭವಿಸುತ್ತಿವೆ. ಕಾಡಿನಂಚಿನ ಜನರು ಅರಣ್ಯ ಇಲಾಖೆಯು ಆನೆಗಳ ಚಲನವಲನದ ಬಗ್ಗೆ ನೀಡುವ ಸಂದೇಶಕ್ಕೆ ಸ್ಪಂದಿಸಿ, ಜಾಗರೂಕರಾಗಿರಬೇಕು ಎಂದು ಅರಣ್ಯ ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾಡಾನೆ ದಾಳಿಗೆ ಯುವಕ ಬಲಿ: ಮಗನನ್ನು ಕಳೆದುಕೊಂಡ ತಾಯಿಯ ಆಕ್ರಂದನ ; ಕುಟುಂಬಕ್ಕೆ ಪರಿಹಾರದ ಚೆಕ್ ವಿತರಣೆ - WILD ELEPHANT ATTACK

ETV Bharat Logo

Copyright © 2025 Ushodaya Enterprises Pvt. Ltd., All Rights Reserved.