ETV Bharat / state

ವಿಧಾನಸಭೆಯಲ್ಲಿ ಒಟ್ಟು 11 ವಿವಿಧ ವಿಧೇಯಕಗಳ ಮಂಡನೆ - BILLS PRESENTED IN ASSEMBLY

2024ನೇ ಸಾಲಿನ ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ಸೇರಿದಂತೆ ವಿಧಾನಸಭೆಯಲ್ಲಿ ಒಟ್ಟು 11 ವಿವಿಧ ವಿಧೇಯಕಗಳನ್ನು ಮಂಡಿಸಲಾಗಿದೆ.

bills presentation
ವಿಧಾನಸಭೆ ಕಲಾಪ (ETV Bharat)
author img

By ETV Bharat Karnataka Team

Published : Dec 13, 2024, 9:04 AM IST

ಬೆಳಗಾವಿ: 2024ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕ, 2024ನೇ ಸಾಲಿನ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕ ಸೇರಿದಂತೆ ವಿಧಾನಸಭೆಯಲ್ಲಿ ಒಟ್ಟು 11 ವಿವಿಧ ವಿಧೇಯಕಗಳನ್ನು ಸಚಿವರುಗಳು ಮಂಡಿಸಿದರು.

2024ನೇ ಸಾಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಎರಡನೇ ತಿದ್ದುಪಡಿ) ವಿಧೇಯಕ, 2024ನೇ ಸಾಲಿನ ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಗಳ ವಿಧೇಯಕ, 2024ನೇ ಸಾಲಿನ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ಎರಡನೇ ತಿದ್ದುಪಡಿ) ವಿಧೇಯಕ ಹಾಗೂ 2024ನೇ ಸಾಲಿನ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಮಂಡಿಸಲಾಯಿತು.

ಅಲ್ಲದೆ, 2024ನೇ ಸಾಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ, 2024ನೇ ಸಾಲಿನ ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ, 2024ನೇ ಸಾಲಿನ ಕರ್ನಾಟಕ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ವಿಧೇಯಕ, 2024ನೇ ಸಾಲಿನ ಚಾಣಕ್ಯ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ, 2024ನೇ ಸಾಲಿನ ಕರ್ನಾಟಕ ಅಂತರ್ಜಲ ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಮಯ ಹಾಗೂ ನಿಯಂತ್ರಣ (ತಿದ್ದುಪಡಿ) ವಿಧೇಯಕಗಳನ್ನು ಮಂಡಿಸಲಾಗಿದೆ. ಸಚಿವರುಗಳಾದ ಜಿ.ಪರಮೇಶ್ವರ್​, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಸಂತೋಷ ಲಾಡ್, ಡಾ.ಎಂ.ಸಿ.ಸುಧಾಕರ್ ಅವರು ಮಸೂದೆಗಳನ್ನು ಮಂಡಿಸಿದರು.

ಇದನ್ನೂ ಓದಿ: ಹೈಕೋರ್ಟ್​ ನಿರ್ದೇಶನ ಉಲ್ಲಂಘಿಸಿ ಅನುದಾನರಹಿತ ಶಾಲೆಗಳಿಂದ 345.80 ಕೋಟಿ ಹೆಚ್ಚುವರಿ ಶುಲ್ಕ ವಸೂಲಿ: ಸಿಎಜಿ ವರದಿ

ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನ: ಮಂಗಳೂರು - ಮುಂಬೈ ನಡುವೆ ನಿರ್ಮಿಸಿರುವ ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸಲು ರಾಜ್ಯ ಸರ್ಕಾರದ ಸಂಪೂರ್ಣ ಸಹಮತವಿದ್ದು, ಈ ನಿಟ್ಟಿನಲ್ಲಿ ಪತ್ರ ವ್ಯವಹಾರ ನಡೆಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ವಿಧಾನಸಭೆಯ ಗಮನಸೆಳೆಯುವ ಸೂಚನೆಗಳಡಿ ಶಾಸಕರುಗಳಾದ ಕಿರಣ್ ಕುಮಾರ್ ಕೊಡ್ಗಿ ಮತ್ತು ವಿ.ಸುನೀಲ್‌ ಕುಮಾರ್ ಅವರ ಗಮನ ಸೆಳೆಯುವ ಸೂಚನೆಗೆ ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರ ಪರವಾಗಿ ಉತ್ತರ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು, ''ಕೊಂಕಣ ರೈಲ್ವೆ ಈ ಹಿಂದೆಯೇ ಭಾರತೀಯ ರೈಲ್ವೆಯೊಂದಿಗೆ ವಿಲೀನವಾಗಬೇಕಿತ್ತು. ಆದರೆ ನಷ್ಟದಲ್ಲಿ ನಡೆಯುತ್ತಿರುವ ಕಾರಣ, ಈ ಭಾಗದ ಯಾವುದೇ ರೈಲ್ವೆ ನಿಲ್ದಾಣಗಳು ಕೂಡ ಅಭಿವೃದ್ಧಿಯಾಗಲಿಲ್ಲ. ಕರ್ನಾಟಕದ ಪಾಲಿನ 270 ಕೋಟಿ ರೂ.ಗಳ ಷೇರು ಮೊತ್ತವನ್ನು ಯಾವ ರೀತಿ ಹೊಂದಾಣಿಕೆ ಮಾಡಬೇಕು ಎಂಬುದರ ಬಗ್ಗೆ ಈಗಾಗಲೇ ಪತ್ರ ವ್ಯವಹಾರ ನಡೆಸಲಾಗಿದೆ'' ಎಂದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ''ಭಾರತೀಯ ರೈಲ್ವೆಯೊಂದಿಗೆ ವಿಲೀನ ಆದಲ್ಲಿ, ಹೊಸ ರೈಲುಗಳು ಕೂಡ ಬರಲಿದ್ದು, ರೈಲು ನಿಲ್ದಾಣಗಳು ಕೂಡ ಸುಧಾರಣೆ ಕಾಣಲಿವೆ. ವಿಲೀನ ಪ್ರಕ್ರಿಯೆ ಬಗ್ಗೆ ರಾಜ್ಯ ಸರ್ಕಾರ ಕೊಂಕಣ ರೈಲ್ವೆಗೆ ಪತ್ರ ವ್ಯವಹಾರ ಮಾಡಿದ್ದು, ಅವರಿಂದ ಉತ್ತರ ಬರುವ ನಿರೀಕ್ಷೆಯಲ್ಲಿದ್ದೇವೆ'' ಎಂದು ತಿಳಿಸಿದರು.

ಇದನ್ನೂ ಓದಿ: ಮುದ್ರಾಂಕ ಇಲಾಖೆಯಲ್ಲಿ ಸರ್ಕಾರಕ್ಕೆ ಬರಬೇಕಾದ ಕೋಟ್ಯಂತರ ರೂ. ವರಮಾನ ವಂಚನೆ:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.