ETV Bharat / state

ತಮಿಳುನಾಡಿಗೆ 20 ಟಿಎಂಸಿ ಕಾವೇರಿ ನೀರು ಬಿಡುವ ಒತ್ತಡದಲ್ಲಿ ಕರ್ನಾಟಕ: ಇಂದು ತುರ್ತು ಸಭೆ - Cauvery Emergency Meeting - CAUVERY EMERGENCY MEETING

ಜುಲೈ 12ರಿಂದ ಜುಲೈ 31ರ ವರೆಗೆ ತಮಿಳುನಾಡಿಗೆ ಪ್ರತಿದಿನ 1 ಟಿಎಂಸಿ ಕಾವೇರಿ ನೀರು ಬಿಡುವಂತೆ ಸಿಡಬ್ಲ್ಯೂಆರ್​ಸಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಈ ಬಗ್ಗೆ ಸರಕಾರ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಸಮಾಲೋಚಿಸಲು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಇಂದು ಮಧ್ಯಾಹ್ನ ಜಲ ಸಂಪನ್ಮೂಲ ಇಲಾಖೆಯ ತುರ್ತು ಸಭೆ ಕರೆಯಲಾಗಿದೆ.

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಇಂದು ಮಧ್ಯಾಹ್ನ ಜಲ ಸಂಪನ್ಮೂಲ ಇಲಾಖೆಯ ತುರ್ತು ಸಭೆ
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಇಂದು ಮಧ್ಯಾಹ್ನ ಜಲ ಸಂಪನ್ಮೂಲ ಇಲಾಖೆಯ ತುರ್ತು ಸಭೆ (ETV Bharat)
author img

By ETV Bharat Karnataka Team

Published : Jul 12, 2024, 8:14 AM IST

Updated : Jul 12, 2024, 8:56 AM IST

ಬೆಂಗಳೂರು: ತಮಿಳುನಾಡಿಗೆ ಇಂದಿನಿಂದ ಜುಲೈ ಅಂತ್ಯದವರೆಗೆ ಪ್ರತಿದಿನ 1 ಟಿಎಂಸಿ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ಸಿಡಬ್ಲ್ಯುಆರ್​ಸಿ ಶಿಫಾರಸು ಮಾಡಿದೆ. ಇದರಿಂದ ಈ ತಿಂಗಳ ಕೊನೆಯೊಳಗೆ ಕಾವೇರಿ ಜಲಾಶಯಗಳಿಂದ 20 ಟಿಎಂಸಿ ನೀರು ಬಿಡುವ ಒತ್ತಡದಲ್ಲಿ ರಾಜ್ಯ ಸರಕಾರ ಸಿಲುಕಿದೆ.

ಕಾವೇರಿ ನೀರು ನಿಯಂತ್ರಣ ಸಮಿತಿಯ ಈ ನಿರ್ಧಾರದಿಂದ ಆಘಾತಕ್ಕೆ ಒಳಗಾಗಿರುವ ಸರಕಾರ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಸಮಾಲೋಚಿಸಲು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಇಂದು ಮಧ್ಯಾಹ್ನ ಜಲ ಸಂಪನ್ಮೂಲ ಇಲಾಖೆಯ ತುರ್ತು ಸಭೆ ಕರೆಯಲಾಗಿದೆ. ಜಲಸಂಪನ್ಮೂಲ ಇಲಾಖೆ ಹೊಂದಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​​ ಸೂಚನೆಯ ಮೇರೆಗೆ ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದೆ. ಕಾವೇರಿ ಅಚ್ಚುಕಟ್ಟು ಪ್ರದೇಶದ ಸಚಿವರುಗಳು, ಜಲಸಂಪನ್ಮೂಲ ಇಲಾಖೆ ಉನ್ನತ ಅಧಿಕಾರಿಗಳು, ಕಾನೂನು ತಜ್ಞರು ಪಾಲ್ಗೊಳ್ಳಲಿದ್ದಾರೆ.

ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಗೆ ಒಳಪಡುವ ಪ್ರದೇಶದ ಸಚಿವರಾದ ಚೆಲುವರಾಯಸ್ವಾಮಿ, ಡಾ.ಹೆಚ್.ಸಿ.ಮಹದೇವಪ್ಪ ಸೇರಿದಂತೆ ಹಲವು ಸಚಿವರು ಈ ಸಭೆಯಲ್ಲಿ ಭಾಗವಹಿಸಿ ತಮಿಳುನಾಡಿಗೆ ನೀರು ಬಿಡುವ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ತಮಿಳುನಾಡಿಗೆ ಇಂದಿನಿಂದ ಜುಲೈ 31ರ ವರೆಗೆ ಪ್ರತಿದಿನ 1 ಟಿಎಂಸಿ ಕಾವೇರಿ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್ ಸಿ)ಯು ನಿನ್ನೆ (ಗುರುವಾರ) ನಡೆಸಿದ ಸಭೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಶಿಫಾರಸು ಮಾಡಿದೆ.

ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಸಂಬಂಧ ಜುಲೈ 25ರ ವರೆಗೆ ಕಾದು ನೋಡಿ ಕಾವೇರಿ ನೀರು ನಿಯಂತ್ರಣ ಸಮಿತಿಯು ತನ್ನ ನಿರ್ಧಾರ ಪ್ರಕಟಿಸುವುದು ಸೂಕ್ತವೆನ್ನುವ ವಾದವನ್ನು ಕರ್ನಾಟಕ ರಾಜ್ಯದ ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ವಕೀಲರ ತಂಡ ಮಂಡಿಸಿತ್ತು.

ಕಾವೇರಿ ಜಲಾನಯನ ಪ್ರದೇಶದ 4 ಜಲಾಶಯಗಳಲ್ಲಿ ಒಳಹರಿವಿನ ಕೊರತೆ ಇರುತ್ತದೆ. ಜೂನ್ ಒಂದರಿಂದ ಜುಲೈ 9 ರವರೆಗೆ ಕರ್ನಾಟಕದ ನಾಲ್ಕು ಜಲಾಶಯಗಳಿಗೆ ಸಂಚಿತ ಒಳಹರಿವು 41.651 ಟಿಎಂಸಿ ಇರುತ್ತದೆ. ಕರ್ನಾಟಕದ ಕೆ ಆರ್​ಎಸ್, ಕಬಿನಿ ಸೇರಿದಂತೆ ನಾಲ್ಕು ಜಲಾಶಯಗಳಲ್ಲಿ ಸಂಚಿತ ಒಳಹರಿವಿನ ಕೊರತೆಯು 28.71% ಇರುತ್ತದೆ.

ಸದ್ಯ ಕರ್ನಾಟಕದಲ್ಲಿನ ಕಾವೇರಿ ಜಲಾಶಯಗಳಲ್ಲಿನ ನೀರಿನ ಸಂಗ್ರಹಣೆಯು 58.66 ಟಿಎಂಸಿ ಇದ್ದು, ಮೆಟ್ಟೂರಿನಿಂದ 4.905 ಟಿಎಂಸಿ ಮತ್ತು ಭವಾನಿಯಿಂದ 0.618 ಟಿಎಂಸಿ (ಒಟ್ಟು 5.542 ಟಿಎಂಸಿ) ನದಿಗೆ ಬಿಡುಗಡೆ ಮಾಡಿರುವುದಲ್ಲದೆ, ತಮಿಳುನಾಡಿನ ಮೂರು ಜಲಾಶಯಗಳಲ್ಲಿ 24.705 ಟಿಎಂಸಿ ಇರುತ್ತದೆ. ನೀರು ಬಿಡುಗಡೆಗೆ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ಸಮಿತಿಯು ಜುಲೈ 25ರ ತನಕ ಕಾಯುವುದು ಸೂಕ್ತವಾಗಿದೆ. ನಂತರ ವಸ್ತುಸ್ಥಿತಿಯನ್ನು ಸಮಂಜಸವಾಗಿ ಪರಿಗಣಿಸಿ ತಮಿಳುನಾಡಿಗೆ ಕರ್ನಾಟಕದ ಜಲಾಶಯಗಳಿಂದ ನೀರು ಬಿಡುವ ಬಗ್ಗೆ ಸೂಕ್ತ ನಿರ್ಧಾರವನ್ನು ಕಾವೇರಿ ನೀರು ನಿಯಂತ್ರಣ ಸಮಿತಿ ತೆಗೆದುಕೊಳ್ಳಬಹುದಾಗಿದೆ ಎಂದು ಕರ್ನಾಟಕ ತಂಡ ತನ್ನ ಮನವಿ ಸಲ್ಲಿಸಿತ್ತು.

ಕಾವೇರಿ ನೀರು ನಿಯಂತ್ರಣ ಸಮಿತಿ ಮುಂದೆ ತಮಿಳುನಾಡು ಸರಕಾರ ತನ್ನ ಮನವಿ ಸಲ್ಲಿಸಿ ಹಿಂದಿನ ಜಲ ವರ್ಷದಲ್ಲಿ, ಫೆಬ್ರವರಿ 2024ರಿಂದ ಮೇ 2024ರ ಅವಧಿಗೆ ಕರ್ನಾಟಕ ಪರಿಸರದ ಹರಿವನ್ನು ಬಿಡುಗಡೆ ಮಾಡಿರುವುದಿಲ್ಲ. ಪ್ರಸಕ್ತ ಜಲ ವರ್ಷದಲ್ಲಿ ಮಳೆ ಪರಿಸ್ಥಿತಿ ಸಾಮಾನ್ಯವಾಗಿದ್ದು ಕರ್ನಾಟಕ ಸಾಮಾನ್ಯ ಒಳಹರಿವನ್ನು ಪಡೆದಿದೆ. ಆದ್ದರಿಂದ ಸುಪ್ರೀಂ ಕೋರ್ಟ್ ಮಾರ್ಪಡಿಸಿದಂತೆ, CWDT ಆದೇಶದಂತೆ ಕರ್ನಾಟಕ ಬಿಳಿಗುಂಡ್ಲುವಿನಲ್ಲಿ ನಿಗದಿತ ಹರಿವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕೋರಿತು. ಎರಡೂ ರಾಜ್ಯಗಳ ವಾದವನ್ನು ಆಲಿಸಿದ ನಂತರ ಕಾವೇರಿ ನೀರು ನಿಯಂತ್ರಣ ಸಮಿತಿಯು ಜುಲೈ ಅಂತ್ಯದವರೆಗೆ ಪ್ರತಿ ದಿನ ಒಂದು ಟಿಎಂಸಿ ನೀರು ಬಿಡಲು ಕರ್ನಾಟಕಕ್ಕೆ ಶಿಫಾರಸು ಮಾಡಿದೆ.

ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯ ನಿರ್ಧಾರದ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್​, "ರಾಜ್ಯದಲ್ಲಿ ಇನ್ನೂ ಉತ್ತಮ ಮಳೆ ಬಂದಿಲ್ಲ, ನೀರಿಲ್ಲ, ಜಲಾಶಯಗಳಿಗೆ ನೀರು ಬಂದಿಲ್ಲ. ರಾಜ್ಯದ ಕೆರೆಗಳು, ಜಲಾಶಯಗಳು ತುಂಬಿಲ್ಲ. ಉತ್ತಮ ಮಳೆಗಾಗಿ ಎಲ್ಲರೂ ಪ್ರಾರ್ಥಿಸೋಣ" ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡಿಗೆ ಪ್ರತಿದಿನ 1 ಟಿಎಂಸಿ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ಸಿಡಬ್ಲ್ಯುಆರ್​ಸಿ ಶಿಫಾರಸು - Cauvery water

Last Updated : Jul 12, 2024, 8:56 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.