ETV Bharat / state

ಏತ ನೀರಾವರಿ ಯೋಜನೆ ಮೂಲಕ ನೀರು ತುಂಬಿಸುವ ಕೆರೆಗಳಿಂದ ಆದಾಯ ವೃದ್ಧಿಗೆ ಒತ್ತು - N S Boseraju

ಕಳೆದ ಐದು ವರ್ಷಗಳಲ್ಲಿ ವಿಲೇವಾರಿ ಮಾಡಲಾದ ವಿವರ ಪರಿಶೀಲಿಸಿದಾಗ 2021-22ನೇ ಸಾಲಿನಲ್ಲಿ ಗರಿಷ್ಠ 456 ಏತ ನೀರಾವರಿ ವ್ಯಾಪ್ತಿಗೆ ಒಳಪಡುವ ಕೆರೆಗಳನ್ನು ವಿಲೇವಾರಿ ಮಾಡಲಾಗಿದೆ. ಟೆಂಡರ್‌ ಕಂ ಹರಾಜು ಪ್ರಕ್ರಿಯೆ ಮೂಲಕ 381 ಕೆರೆಗಳನ್ನು ವಿಲೇವಾರಿ ಮಾಡಲಾಗಿದ್ದು, 254.29 ಲಕ್ಷ ರೂ. ಆದಾಯ ಬಂದಿದೆ ಎಂದು ಸಚಿವ ಎನ್‌.ಎಸ್‌.ಭೋಸರಾಜು ವಿವರಿಸಿದರು.

Irrigation Scheme  N S Boseraju  Bengaluru
ವಿಕಾಸಸೌಧದ ಸಚಿವರ ಕಚೇರಿಯಲ್ಲಿ ನಡೆದ ಸಭೆ (ETV Bharat)
author img

By ETV Bharat Karnataka Team

Published : Jul 12, 2024, 7:38 AM IST

ಬೆಂಗಳೂರು: ''ಏತ ನೀರಾವರಿ ಯೋಜನೆಯ ಮೂಲಕ ನೀರು ತುಂಬಿಸಲಾಗುತ್ತಿರುವ ಕೆರೆಗಳಿಂದ ಆದಾಯವನ್ನು ವೃದ್ಧಿಸುವ ಹಾಗೂ ಆ ಆದಾಯವನ್ನು ಇಲಾಖೆಗಳ ಮಧ್ಯೆ ಹಂಚಿಕೆ ಮಾಡುವ ನಿಟ್ಟಿನಲ್ಲಿ ಡಿಸಿಎಂ ನೇತೃತ್ವದಲ್ಲಿ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು'' ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌.ಭೋಸರಾಜು ತಿಳಿಸಿದರು.

ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಗುರುವಾರ ಆಯೋಜಿಸಲಾಗಿದ್ದ ಸಭೆಯಲ್ಲಿ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ, ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿಗಳು, ಮೀನುಗಾರಿಕೆ ಇಲಾಖೆಯ ನಿರ್ದೇಶಕರೊಂದಿಗೆ ವಿಸ್ತೃತವಾಗಿ ಮಾತನಾಡಿದರು.

''ಕಳೆದ ಐದು ವರ್ಷಗಳಲ್ಲಿ ವಿಲೇವಾರಿ ಮಾಡಲಾದ ವಿವರಗಳನ್ನು ಪರಿಶೀಲಿಸಿದಾಗ 2021-22ನೇ ಸಾಲಿನಲ್ಲಿ ಗರಿಷ್ಟ 456 ಏತ ನೀರಾವರಿ ವ್ಯಾಪ್ತಿಗೆ ಒಳಪಡುವ ಕೆರೆಗಳನ್ನು ವಿಲೇವಾರಿ ಮಾಡಲಾಗಿದೆ. ಇದರಲ್ಲಿ 71 ಕೆರೆಗಳನ್ನು ಮೀನುಗಾರರ ಸಹಕಾರ ಸಂಘಗಳಿಗೆ ಗುತ್ತಿಗೆ ನೀಡಲಾಗಿದ್ದು, 33.58 ಲಕ್ಷ ರೂ. ಆದಾಯ ಸಂಗ್ರಹವಾಗಿದೆ. ಟೆಂಡರ್‌ ಕಂ ಹರಾಜು ಪ್ರಕ್ರಿಯೆ ಮೂಲಕ 381 ಕೆರೆಗಳನ್ನು ವಿಲೇವಾರಿ ಮಾಡಲಾಗಿದ್ದು, 254.29 ಲಕ್ಷ ರೂ. ಆದಾಯ ಬಂದಿದೆ'' ಎಂದು ತಿಳಿಸಿದರು.

''ಟೆಂಡರ್‌ ಕಂ ಹರಾಜಿನ ಬದಲು ಪ್ರಸ್ತುತ ಜಾರಿಯಲ್ಲಿರುವ ಇ-ಟೆಂಡರ್‌ ವಿಧಾನದಿಂದಾಗಿ ವಿಲೇ ಮಾಡಿದಾಗ ಬರುವ ಆದಾಯವು ಮೂರು ಪಟ್ಟು ಹೆಚ್ಚಾಗಲಿದೆ. ಇದಲ್ಲದೇ ಕೆರೆಗಳಲ್ಲಿ ಇನ್ನಿತರೆ ವಾಣೀಜ್ಯ ಚಟುವಟಿಕೆಗಳನ್ನು ಆಯೋಜಿಸುವುದರಿಂದಲೂ ನಾವು ಹೆಚ್ಚಿನ ಆದಾಯ ನಿರೀಕ್ಷಿಸಬಹುದಾಗಿದೆ. ಇದರಿಂದ ಸಣ್ಣ ನೀರಾವರಿ ಹಾಗೂ ಜಲಸಂಪನ್ಮೂಲ ಇಲಾಖೆಯ ವತಿಯಿಂದ ಕೈಗೊಳ್ಳಲಾಗುತ್ತಿರುವ ಏತ ನೀರಾವರಿ ಯೋಜನೆಗೆ ಭರಿಸಲಾಗುತ್ತಿರುವ ವಿದ್ಯುತ್‌ ವೆಚ್ಚವನ್ನು ಸ್ವಲ್ಪಮಟ್ಟಿಗೆ ಭರಿಸಬಹುದಾಗಿದೆ'' ಎಂದರು.

''ಈ ಬಗ್ಗೆ ಸರಕಾರದ ಮಟ್ಟದಲ್ಲಿ ನಿಯಮ ರೂಪಿಸುವ ಅವಶ್ಯಕತೆಯಿದೆ. ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿರುವಂತೆ ಹಲವಾರು ಕೆರೆಗಳಲ್ಲಿ ಈ ಬಾರಿಯ ಮೀನುಪಾಶುವಾರು ಹಕ್ಕಿನ ವಿಲೇವಾರಿ ನಡೆದಿರುವುದಿಲ್ಲ. ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ನಿಟ್ಟಿನಲ್ಲಿ ಜಲಸಂಪನ್ಮೂಲ ಖಾತೆ ಸಚಿವರಾಗಿರುವ ಉಪಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆಯನ್ನು ನಡೆಸಲಾಗುವುದು. ಇದರಲ್ಲಿ ಮೀನುಪಾಶುವಾರು ವಿಲೇವಾರಿ, ಕೆರೆಗಳಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ಅಳವಡಿಸುವ ಮೂಲಕ ಆದಾಯವನ್ನು ಹೆಚ್ಚಿಸುವ ಹಾಗೂ ಅದನ್ನು ಇಲಾಖೆಗಳ ಮಧ್ಯೆ ಹಂಚಿಕೆ ಮಾಡುವ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾಣ ಕೈಗೊಳ್ಳಲಾಗುವುದು'' ಎಂದು ಸಚಿವ ಭೋಸರಾಜು ತಿಳಿಸಿದರು.

Irrigation Scheme  N S Boseraju  Bengaluru
ವಿಕಾಸಸೌಧದ ಸಚಿವರ ಕಚೇರಿಯಲ್ಲಿ ನಡೆದ ಸಭೆ (ETV Bharat)

ಅಧಿವೇಶನದ ಅವಧಿಯಲ್ಲಿ ಸಭೆಯನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಸಣ್ಣನೀರಾವರಿ ಇಲಾಖೆಯ ಕಾರ್ಯದರ್ಶಿಗಳಾದ ರಾಘವನ್‌, ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ ಕುಲಕರ್ಣಿ, ಮೀನುಗಾರಿಕೆ ಇಲಾಖೆಯ ನಿರ್ದೇಶಕರು ಉಪಸ್ಥಿತರಿದ್ದರು.

ಫ್ಲೋಟಿಂಗ್‌ ಸೋಲಾರ್‌ ಪ್ಯಾನೆಲ್‌ ಬಗ್ಗೆ ಚರ್ಚೆ: ಸಣ್ಣ ನೀರಾವರಿ ವ್ಯಾಪ್ತಿಯಲ್ಲಿರುವ ಕೆರೆಗಳಲ್ಲಿ ಫ್ಲೋಟೀಂಗ್‌ ಸೋಲಾರ್‌ ಪ್ಯಾನೆಲ್‌ ಅಳವಡಿಸುವ ಸಾಧ್ಯಾ ಸಾಧ್ಯತೆಗಳ ಬಗ್ಗೆ ಚರ್ಚಿಸುವ ನಿಟ್ಟಿನಲ್ಲಿ ತಜ್ಞರೊಂದಿಗೆ ಸಭೆಯನ್ನು ಆಯೋಜಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ ಎಸ್‌ ಭೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ, ಕರ್ನಾಟಕ ನವೀಕರಿಸಬಹುದಾದ ಇಂಧನಗಳ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿಗಳೊಂದಿಗೆ ವಿಸ್ತ್ರುತ ಸಭೆ ನಡೆಸಿ ಸೂಚನೆ ನೀಡಿದರು.

''ನಮ್ಮ ಇಲಾಖೆ ವ್ಯಾಪ್ತಿಯಲ್ಲಿರುವಂತಹ ಏತ ನೀರಾವರಿ ಯೋಜನೆ ಮೂಲಕ ನೀರು ತುಂಬಿಸುತ್ತಿರುವ 100ಕ್ಕೂ ಹೆಚ್ಚು ಏಕರೆ ವಿಸ್ತೀರ್ಣ ಹೊಂದಿರುವ 40 ಕೆರೆಗಳನ್ನು ಗುರುತಿಸಲಾಗಿದೆ. ಈ ಕೆರೆಗಳು ಸುಮಾರು 10 ಸಾವಿರ ಏಕರೆ ಪ್ರದೇಶ ವ್ಯಾಪ್ತಿಯನ್ನು ಹೊಂದಿದ್ದು, ಸುಮಾರು 2,500 ಮೆಗಾವ್ಯಾಟ್‌ ಉತ್ಪಾದನೆಗೆ ಅವಕಾಶವಿದೆ. ಈ ಕೆರೆಗಳಲ್ಲಿ ವರ್ಷದಾದ್ಯಂತ ಶೇಕಡಾ 50 ರಿಂದ 60 ರಷ್ಟು ನೀರು ತುಂಬಿಸಲಾಗುತ್ತದೆ. ಈ ಕೆರೆಗಳಲ್ಲಿ ತೇಲುವ ಸೌರ ವಿದ್ಯುತ್‌ ಘಟಕಗಳನ್ನು ಅಳವಡಿಸುವ ಮೂಲಕ ವಿದ್ಯುತ್‌ ಉತ್ಪಾದನೆ ಮಾಡುವ ಉದ್ದೇಶವನ್ನು ಹೊಂದಿದ್ದೇವೆ. ಈ ಯೋಜನೆಯನ್ನು ಅಳವಡಿಸುವ ಮೂಲಕ ನೀರಾವರಿ ಇಲಾಖೆಯ ಮೂಲಕ ಏತ ನೀರಾವರಿ ಯೋಜನೆಗಳಿಗೆ ಭರಿಸಲಾಗುತ್ತಿರುವ ವಿದ್ಯುತ್‌ ಖರ್ಚನ್ನು ಕಡಿತಗೊಳಿಸುವುದು ನಮ್ಮ ಗುರಿಯಾಗಿದೆ'' ಎಂದು ವಿವರಿಸಿದರು.

''ದೇಶದ ವಿವಿಧ ಭಾಗಗಳಲ್ಲಿ ಫ್ಲೋಟಿಂಗ್‌ ಸೋಲಾರ್‌ ಪ್ಯಾನೆಲ್‌ ಅಳವಡಿಕೆಯ ಮೂಲಕ ಕೇವಲ 1 ಗಿಗಾ ವ್ಯಾಟ್‌ ನಷ್ಟು ವಿದ್ಯುತ್‌ ಉತ್ಪಾದಿಸಲಾಗುತ್ತಿದೆ. ದೇಶದಲ್ಲಿ ಹಾಗೂ ರಾಜ್ಯದಲ್ಲಿ ತೇಲುವ ವಿದ್ಯುತ್‌ ಫಲಕಗಳ ಅಳವಡಿಕೆಗೆ ವಿಫುಲ ಅವಕಾಶಗಳೀವೆ. ಫ್ಲೋಟಿಂಗ್‌ ಸೋಲಾರ್‌ ಪ್ಯಾನೆಲ್‌ ಅಳವಡಿಕೆಗೆ ಜಮೀನಿನ ಅವಶ್ಯಕತೆ ಇಲ್ಲ ಹಾಗೂ ಸೌರ ವಿದ್ಯುತ್‌ ಉತ್ಪಾದನೆಗೆ ಇದು ಉತ್ತಮ ವಿಧಾನವಾಗಿದೆ. ಆದರೆ, ಇದರ ಅಳವಡಿಕೆ ವೆಚ್ಚ ಸ್ವಲ್ಪ ಹೆಚ್ಚಾಗಿದೆ'' ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ನಮ್ಮ ಕೆರೆಗಳಲ್ಲಿ ಫ್ಲೋಟಿಂಗ್‌ ಸೋಲಾರ್‌ ಪ್ಯಾನೆಲ್‌ ಅಳವಡಿಕೆಯ ಸಾಧ್ಯಾಸಾಧ್ಯತೆಗಳ ಬಗ್ಗೆ ವಿಸ್ತ್ರುತವಾಗಿ ಪರಿಶೀಲನೆ ನಡೆಸುವ ನಿಟ್ಟಿನಲ್ಲಿ ವಿಷಯ ತಜ್ಞರೊಂದಿಗೆ ಚರ್ಚಿಸುವ ಮೂಲಕ ಅಂತಿಮ ನಿರ್ಧಾರ ಕೈಗೊಳ್ಳಬಹುದು. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ತಜ್ಞರೊಂದಿಗೆ ಸಭೆ ಆಯೋಜಿಸುವಂತೆ ಕೆಆರ್‌ಇಡಿಎಲ್‌ ವ್ಯವಸ್ಥಾಪಕ ನಿರ್ದೇಶಕರಿಗೆ ಸಚಿವ ಭೋಸರಾಜು ನಿರ್ದೇಶಿಸಿದರು.

ಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿ ರಾಘವನ್‌, ಕರ್ನಾಟಕ ನವೀಕರಿಸಬಹುದಾದ ಇಂಧನಗಳ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರುದ್ರಪ್ಪಯ್ಯ, ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿ ಕೃಷ್ಣಮೂರ್ತಿ ಕುಲಕರ್ಣಿ ಉಪಸ್ಥಿತರಿದ್ದರು.

ಇದನ್ನೂ ಓದಿ: ವಿಧಾನ ಪರಿಷತ್ ಸದಸ್ಯರಾಗಿ ಬಸನಗೌಡ ಬಾದರ್ಲಿ ಪ್ರಮಾಣ ವಚನ ಸ್ವೀಕಾರ, ಫ್ಲೆಕ್ಸ್ ಹಾಕಿಸಿದ್ದಕ್ಕೆ ಗರಂ ಆದ ಡಿಸಿಎಂ - Parishad By Election

ETV Bharat Logo

Copyright © 2024 Ushodaya Enterprises Pvt. Ltd., All Rights Reserved.