ಗಂಗಾವತಿ/ಬೆಂಗಳೂರು: ಅಳಿವಿನಂಚಿನಲ್ಲಿರುವ ಬೂದು ತೋಳ (ಇಂಡಿಯನ್ ಗ್ರೇ ಉಲ್ಫ್) ದ ಸಂತತಿಯಲ್ಲಿ ಹೆಚ್ಚಳವಾಗುತ್ತಿದೆ. ಕೊಪ್ಪಳ ಜಿಲ್ಲೆ ಬಂಕಾಪುರ ತೋಳ ಧಾಮದಲ್ಲಿ ತೋಳವೊಂದು ಐದು ಮರಿಗಳಿಗೆ ಜನ್ಮ ನೀಡಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ತೋಳದ ಮರಿಗಳ ವಿಡಿಯೋ ಬಿಡುಗಡೆ ಮಾಡಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಾವತಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿರುವ ಸುಮಾರು 332 ಹೆಕ್ಟೇರ್ ಪ್ರದೇಶದಲ್ಲಿರುವ ಬಂಕಾಪೂರ ತೋಳ ಧಾಮದ ಸಂರಕ್ಷಣೆಗೆ ಅರಣ್ಯ ಇಲಾಖೆ ಕಾಳಜಿ ವಹಿಸಿದ್ದು, ಇದು ವನ್ಯಜೀವಿಗಳಿಗೆ ಸುರಕ್ಷಿತ ತಾಣವಾಗಿದೆ. ತೋಳಗಳ ಸಂತತಿ ಹೆಚ್ಚಳಕ್ಕೂ ಇದೆ ಕಾರಣವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಕಳೆದ ತಿಂಗಳು ಇದೇ ಕುರುಚಲು ಕಾಡಿನಲ್ಲಿ ತೋಳವೊಂದು 8 ಮರಿಗಳಿಗೆ ಜನ್ಮ ನೀಡಿತ್ತು, ಈಗ ಮತ್ತೊಂದು ತೋಳ ಐದು ಮರಿಗೆ ಜನ್ಮಕೊಟ್ಟಿದೆ. ನೈಸರ್ಗಿಕ ಗುಹೆಗಳು, ಬೆಟ್ಟ ಗುಡ್ಡಗಳನ್ನೂ ಹೊಂದಿರುವ ಈ ಧಾಮದಲ್ಲಿ, ತೋಳ, ಚಿರತೆ, ನವಿಲು, ಕತ್ತೆಕಿರುಬ, ನರಿ, ಮೊಲ, ಮುಳ್ಳುಹಂದಿ ಸೇರಿದಂತೆ ಮೊದಲಾದ ಹಲವು ವನ್ಯಜೀವಿಗಳಿವೆ. ಕಳ್ಳಬೇಟೆ ತಡೆಗೂ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು ಸಚಿವರು ಹೇಳಿದ್ದಾರೆ.
ಪ್ರಸ್ತುತ ಈ ಕಾಡಿನಲ್ಲಿ ಬೂದು ತೋಳಗಳ ಸಂಖ್ಯೆ 40- 45ಕ್ಕೆ ಹೆಚ್ಚಳವಾಗಿದೆ. ನವಜಾತ ತೋಳದ ಮರಿಗಳಿಗೆ ಜನರಿಂದ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ಗುಹೆಗಳ ಬಳಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
![ಬಂಕಾಪುರ ತೋಳ ಧಾಮ, ಮರಿಗಳಿಗೆ ಜನ್ಮ ನೀಡಿದ ತೋಳ,Indian wolf](https://etvbharatimages.akamaized.net/etvbharat/prod-images/14-02-2025/kn-bng-01-indianwolf-morecubs-script-7201951_14022025125648_1402f_1739518008_450.jpg)
ತೊಂದರೆಯಾಗದಂತೆ ಕ್ರಮ: ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಪ್ರಸ್ತುತ ಈ ಕಾಡಿನಲ್ಲಿ ಬೂದು ತೋಳಗಳ ಸಂಖ್ಯೆ 40-45ಕ್ಕೆ ಹೆಚ್ಚಳವಾಗಿದೆ. ನವಜಾತ ತೋಳದ ಮರಿಗಳಿಗೆ ಜನರಿಂದ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಗುಹೆಗಳ ಬಳಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ತೋಳಗಳ ಚಲನ-ವಲದ ಮೇಲೆ ಕಣ್ಣಿಡಲಾಗಿದೆ. ಮುಂದಿನ ದಿನಗಳಲ್ಲಿ ಧಾಮದಲ್ಲಿ ಸಫಾರಿ ಆಯೋಜಿಸುವ ಮೂಲಕ ಪ್ರವಾಸದೋಮಕ್ಕೆ ಒತ್ತು ನೀಡುವ ಉದ್ದೇಶ ಇಲಾಖೆಗೆ ಇದೆ ಎಂದು ಸಚಿವರು ತಿಳಿಸಿದ್ದಾರೆ.
ಇದನ್ನೂ ಓದಿ: ಬಂಕಾಪುರ ಧಾಮ: 8 ಮರಿಗಳಿಗೆ ಜನ್ಮ ನೀಡಿದ ತೋಳ
ಇದನ್ನೂ ಓದಿ: ಕೇರಳದ ದೇವಸ್ಥಾನದಲ್ಲಿ ಆನೆ ದಾಳಿಯಿಂದ ಮೂವರ ಸಾವು; ಮೂವತ್ತಕ್ಕೂ ಅಧಿಕ ಭಕ್ತರಿಗೆ ಗಾಯ
ತೋಳಗಳ ಸಂಖ್ಯೆ ಏರಿಕೆ: ತೋಳ ಐದು ಮರಿಗಳಿಗೆ ಜನ್ಮ ನೀಡಿದ್ದರಿಂದ ಇಲ್ಲಿ ತೋಳಗಳ ಸಂಖ್ಯೆ 40 - 45ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.