ETV Bharat / state

ಪಂಚೆಯಲ್ಲಿ ಮಾಲ್​ಗೆ ಬಂದಿದ್ದಕ್ಕೆ ಪ್ರವೇಶ ನಿರಾಕರಣೆ: ರೈತನಿಗೆ ಸನ್ಮಾನ, ಕ್ಷಮೆ ಕೇಳಿದ ಸಿಬ್ಬಂದಿ - Mall Entry Denied to farmer

author img

By ETV Bharat Karnataka Team

Published : Jul 17, 2024, 4:10 PM IST

ಮಾಲ್​ನವರು ಕೂಡಲೇ ರೈತನಿಗೆ ಕ್ಷಮಾಪಣೆ ಕೇಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

Felicitation to Farmer
ರೈತನಿಗೆ ಸನ್ಮಾನ (Etv Bharat)

ಮೈಸೂರು/ಬೆಂಗಳೂರು: ಪಂಚೆ ಧರಿಸಿ ಬಂದಿದ್ದಕ್ಕೆ ರೈತನನ್ನು ಜಿಟಿ ಮಾಲ್​ ಒಳಗೆ ಬಿಡದೇ ಸಿಬ್ಬಂದಿ ದರ್ಪ ತೋರಿದ ಘಟನೆ ಮಂಗಳವಾರ ನಡೆದಿತ್ತು. ಘಟನೆ ಬೆಳಕಿಗೆ ಬರುತ್ತಿದ್ದಂತೆ, ಮಾಲ್​ ಸಿಬ್ಬಂದಿ, ಆಡಳಿತದ ವಿರುದ್ಧ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ರೈತ ಸಂಘಟನೆಗಳಿಂದ ಪ್ರತಿಭಟನೆ (ETV Bharat)

ಮಾಲ್​ ಮಾಲೀಕರು ರೈತನಿಗೆ ಕ್ಷಮೆಯಾಚಿಸಬೇಕು ಎಂಬ ಆಗ್ರಹವೂ ಕೇಳಿ ಬಂದಿತ್ತು. ಅದಲ್ಲದೇ ಘಟನೆಯನ್ನು ಖಂಡಿಸಿ, ಇಂದು ಕನ್ನಡಪರ ಹೋರಾಟಗಾರರು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಇದೀಗ ಮಾಲ್​ ಸಿಬ್ಬಂದಿ ಕ್ಷಮೆಯಾಚಿಸಿದ ಬಳಿಕ ಚಂದ್ರಶೇಖರ್​ ಅವರು ಪ್ರತಿಭಟನೆ ಹಿಂಪಡೆದಿದ್ದಾರೆ.

ರೈತನಿಗೆ ಸನ್ಮಾನ: ಪ್ರತಿಭಟನೆ ಬೆನ್ನಲ್ಲೇ ಮಾಲ್ ಸಿಬ್ಬಂದಿ, ತಾವು ಮಾಡಿದ್ದು ತಪ್ಪು ಅಂತಾ ಒಪ್ಪಿಕೊಂಡು, ಪಂಚೆಯಲ್ಲೇ ಬಂದ ರೈತ ಫಕೀರಪ್ಪ ಅವರಿಗೆ ಆಡಳಿತಾಧಿಕಾರಿಗಳು ಒಳಗಡೆ ಕರೆಯಿಸಿ ಸನ್ಮಾನಿಸಿ, ಕ್ಷಮೆಯಾಚಿಸಿದ್ದಾರೆ. ಪ್ರತಿಭಟನೆ ಸಂದರ್ಭದಲ್ಲಿ ಲುಂಗಿಯುಟ್ಟ ವೃದ್ಧರೊಬ್ಬರು ಮಾಲ್​ ಒಳಗೆ ಹೋಗಿದ್ದು, ಸಿಬ್ಬಂದಿಯು ಅವರಿಗೆ ಕೈಮುಗಿದು, ಸೆಕ್ಯೂರಿಟಿ ಚೆಕ್ ಕೂಡ ಮಾಡದೇ ಒಳಬಿಟ್ಟಿದ್ದಾರೆ.

ಕ್ಷಮೆ ಕೇಳಿದ ಸೆಕ್ಯೂರಿಟಿ: ರೈತನನ್ನು ತಡೆದ ಸೆಕ್ಯೂರಿಟಿ ಸಿಬ್ಬಂದಿ ಕೂಡ ಕ್ಷಮೆಯಾಚಿಸಿದ್ದಾರೆ. ''ನಿನ್ನೆ ಮಧ್ಯಾಹ್ನ ವ್ಯಕ್ತಿಯೊಬ್ಬರು ಪಂಚೆಯಲ್ಲಿ ಮಾಲ್‌ಗೆ ಬಂದಿದ್ದರು. ಪಂಚೆಯನ್ನು ಮೊಣಕಾಲಿನ ತನಕ ಧರಿಸಿ ನಿಂತಿದ್ದರು. ಕೆಳಗಿನ ಮಹಡಿಯಲ್ಲಿ ಹುಟ್ಟುಹಬ್ಬದ ಕಾರ್ಯಕ್ರಮ ನಡೆಯುತ್ತಿತ್ತು. ವಿಚಾರವನ್ನು ಮ್ಯಾನೇಜ್​ಮೆಂಟ್ ಗಮನಕ್ಕೆ ತರಲಾಗಿತ್ತು. ಸಂಜೆ ಮತ್ತೆ ರೈತರೊಬ್ಬರು ಪಂಚೆ ಧರಿಸಿ ಬಂದಿದ್ದರು. ಈ ಸಮಯದಲ್ಲಿ ನಾವು ತಡೆದು, ಮ್ಯಾನೇಜ್​ಮೆಂಟ್ ಗಮನಕ್ಕೆ ತಂದಿದ್ದೆವು. ಆದರೆ, ಉದ್ದೇಶಪೂರ್ವಕವಾಗಿ ತಡೆದಿಲ್ಲ. ಮ್ಯಾನೇಜ್​ಮೆಂಟ್​ನಿಂದ ಉತ್ತರ ಬರುವ ತನಕ ಕಾಯಿಸಿದ್ದೆವಷ್ಟೇ'' ಎಂದು ಸೆಕ್ಯೂರಿಟಿ ಅರುಣ್ ಸ್ಪಷ್ಟನೆ ನೀಡಿದ್ದಾರೆ.

ರೈತ ಫಕೀರಪ್ಪ (ETV Bharat)

ಘಟನೆಯ ವಿವರ: ಹಾವೇರಿ ಮೂಲದ ನಾಗರಾಜ್ ಎನ್ನುವರು ಜುಲೈ 16ರಂದು ತಮ್ಮ ತಂದೆ - ತಾಯಿಗೆ ಸಿನಿಮಾ ತೋರಿಸಲು ಬೆಂಗಳೂರಿನ ಮಾಗಡಿ ರಸ್ತೆ ಜಿಟಿ ಮಾಲ್ ಕರೆದೊಯ್ದಿದ್ದಾರೆ. ಆದರೆ, ನಾಗರಾಜ್ ತಂದೆ ಪಂಚೆ ಹಾಕಿಕೊಂಡು ತಲೆಗೆ ಪಟಗ ಸುತ್ತಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಅವರನ್ನು ಮಾಲ್ ಒಳಗೆ ಪ್ರವೇಶಿಸಲು ನಿರಾಕರಿಸಿದ್ದರು. ಒಳಗೆ ಬಿಡಿ ಎಂದು ಪುತ್ರ ನಾಗರಾಜ್ ಎಷ್ಟು ಬಾರಿ ಕೇಳಿದರೂ, 'ಪಂಚೆ ಹಾಕೊಂಡಿದ್ದಾರೆ, ಮಾಲ್​ನಲ್ಲಿ ಪಂಚೆ ಹಾಕಿದವರನ್ನು ಬಿಡುವುದಿಲ್ಲ' ಎಂದು ಸಿಬ್ಬಂದಿ ನಿರಾಕರಿಸಿದ್ದರು. ಇದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಅಸಮಾಧಾನಕ್ಕೆ ಕಾರಣವಾಗಿತ್ತು.

ಕುರುಬುರ್ ಶಾಂತಕುಮಾರ್ ಟೀಕೆ: "ಪಂಚೆ ಧರಿಸಿ ಮಾಲ್​ಗೆ ಸಿನಿಮಾ ನೋಡಲು ಬಂದ ರೈತನಿಗೆ ಪ್ರವೇಶ ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲ್​ನ ಮಾಲೀಕರು ಕ್ಷಮಾಪಣೆ ಕೇಳಬೇಕು ಹಾಗೂ ಪೊಲೀಸರು ದೂರು ದಾಖಲಿಸಬೇಕು" ಎಂದು ಕಬ್ಬು ಬೆಳೆಗಾರ ಸಂಘದ ರಾಜಾಧ್ಯಕ್ಷ ಕುರುಬೂರು ಶಾಂತಕುಮಾರ್‌ ಆಗ್ರಹಿಸಿದ್ದರು. ಕುರುಬೂರು ಶಾಂತಕುಮಾರ್‌ ಅವರು ವಿಡಿಯೋ ಮೂಲಕ ಮಾಲ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಪಂಚೆಯಲ್ಲಿ ಮಾಲ್​ಗೆ ಬಂದ ರೈತನಿಗೆ ಪ್ರವೇಶ ನಿರಾಕರಣೆ: ಮಾಲೀಕ ಕ್ಷಮಾಪಣೆ ಕೇಳುವಂತೆ ಕುರುಬೂರು ಆಗ್ರಹ (ETV Bharat)

"ಬೆಂಗಳೂರಿನ ಜಿಟಿ ಮಾಲ್‌ನಲ್ಲಿ ಪಂಚೆಯಲ್ಲಿ ಬಂದ ರೈತನಿಗೆ ಪ್ರವೇಶ ಕೊಡದೇ ರೈತನಿಗೆ ಅಪಮಾನ ಮಾಡಿರುವುದು ಖಂಡನೀಯ. ರೈತರ ಅನ್ನ ತಿನ್ನುವ ಯಾರೇ ಆದರೂ ಇನ್ನು ಮುಂದೆ ಇಂಥ ನಡವಳಿಕೆ ತೋರಿಸಿದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ, ಎಚ್ಚೆತ್ತುಕೊಳ್ಳಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಂಚೆಯಲ್ಲಿ ಬರುತ್ತಾರೆ. ಅವರಿಗೂ ಪ್ರವೇಶ ನೀಡದೇ ನಿಲ್ಲಿಸುತ್ತಾರೆಯೇ?" ಎಂದು ಪ್ರಶ್ನಿಸಿದ್ದರು.

ರಾಜ್ಯದ ರೈತರಿಗೆ ಮಾಡಿದ ಅಪಮಾನ: "ರೈತನ ಅನ್ನ ತಿನ್ನುವ, ರೈತ ಬೆಳೆದ ಹಣ್ಣು, ತರಕಾರಿ, ಧಾನ್ಯಗಳು ಸೇರಿದಂತೆ ಇತರ ಬೆಳೆಗಳನ್ನು ತಂದು ಮಾರಾಟ ಮಾಡುವ ಈ ಮಾಲ್ ಮಾಲೀಕ ಕೂಡಲೇ ರೈತನಿಗೆ ಕ್ಷಮಾಪಣೆ ಕೇಳಬೇಕು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಸಾವಿರಾರು ರೈತರು ಬಾರ್‌ಕೋಲ್‌ಗಳೊಂದಿಗೆ ಚಡ್ಡಿಯಲ್ಲಿ ಮೆರವಣಿಗೆ ಮೂಲಕ ಮಾಲ್‌ಗೆ ಪ್ರವೇಶಿಸಬೇಕಾಗುತ್ತದೆ" ಎಂದು ಶಾಂತಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿದ್ದರು.

ಮಾನವ ಹಕ್ಕುಗಳ ಆಯೋಗದಿಂದ ನೋಟಿಸ್ ಸಾಧ್ಯತೆ: ರೈತನಿಗೆ ಅವಮಾನ ಮಾಡಿದ ಜಿಟಿ ವರ್ಲ್ಡ್ ಮಾಲ್ ಮುಂದೆ ಇಂದು ರೈತ ಸಂಘಟನೆಗಳ ಹಾಗೂ ಕನ್ನಡ ಸಂಘಟನೆಗಳ ಸದಸ್ಯರು ಪಂಚೆ ಉಟ್ಟು ಪ್ರತಿಭಟನೆ ನಡೆಸಿದರು. ಇದೀಗ ರೈತರಿಗೆ ನ್ಯಾಯ ಸಲ್ಲಿಸಲು ಹೋರಾಟ ನಡೆಸಿದ ಹಾಗೂ ಸಾರ್ವಜನಿಕರ ಮುಂದೆ ರೈತನಿಗೆ ಮಾಡಿದ ಅಪಮಾನಕ್ಕೆ ಮಾಲ್ ಮಾಲೀಕರು ಕ್ಷಮೆ ಯಾಚಿಸಿದ್ದರಿಂದ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ.ಈ ನಡುವೆ ಮಾಲ್ ಆಡಳಿತದ ವರ್ತನೆಯ ಬಗ್ಗೆ ಸ್ಪಷ್ಟನೆ ಕೇಳಿ ನೋಟಿಸ್ ನೀಡಲು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಮುಂದಾಗಿದೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯಗೆ ನೀಡಿದ ಮನವಿ ಪತ್ರಗಳು ಕಸದರಾಶಿಯಲ್ಲಿ ಪತ್ತೆ; ರೈತರ ಪ್ರತಿಭಟನೆ - Petition letters found in garbage

ETV Bharat Logo

Copyright © 2024 Ushodaya Enterprises Pvt. Ltd., All Rights Reserved.