ETV Bharat / state

ಬಹಳಷ್ಟು ನಾಯಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ: ಈರಣ್ಣ ಕಡಾಡಿ - ಜಗದೀಶ್ ಶೆಟ್ಟರ್

ಜಗದೀಶ್ ಶೆಟ್ಟರ್ ಅಷ್ಟೇ ಅಲ್ಲ, ಬಹಳಷ್ಟು ನಾಯಕರು ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ.

Statement by Rajya Sabha member Eranna Kadadi
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
author img

By ETV Bharat Karnataka Team

Published : Jan 26, 2024, 8:33 AM IST

Updated : Jan 26, 2024, 9:16 PM IST

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿಕೆ

ಬೆಳಗಾವಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ವಿಚಾರಕ್ಕೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಪ್ರತಿಕ್ರಿಯೆ ನೀಡಿದ್ದು ಜಗದೀಶ್ ಶೆಟ್ಟರ್ ಅಷ್ಟೇ ಅಲ್ಲ ಬಹಳಷ್ಟು ನಾಯಕರು ಬಿಜೆಪಿ ಸೇರ್ಪಡೆ ಆಗುತ್ತಾರೆ ಎಂದು ಹೇಳಿದ್ದಾರೆ.

ಬೆಳಗಾವಿಯಲ್ಲಿ ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪರೋಕ್ಷವಾಗಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸೇರ್ಪಡೆ ಸುಳಿವು ಕೊಟ್ಟರು. ಜಗದೀಶ್ ಶೆಟ್ಟರ್ ಅವರು ಮರಳಿ ಗೂಡಿಗೆ ಸೇರಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಡೆದ ಘಟನೆಯ ನೋವಿನಿಂದ ಕಾಂಗ್ರೆಸ್​ಗೆ ಹೋಗಿದ್ದರು. ಶೆಟ್ಟರ್ ಮತ್ತು ಅವರ ತಂದೆಯವರು ಬಿಜೆಪಿಯಲ್ಲಿದ್ದವರು. ಕಾಂಗ್ರೆಸ್​ಗಿಂತ ಬಿಜೆಪಿಯಲ್ಲಿರುವುದು ಉತ್ತಮ‌ ಎಂದು ಪಕ್ಷಕ್ಕೆ ಬಂದಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಬಹಳಷ್ಟು ಮಂದಿ ಬಿಜೆಪಿಗೆ ಬರಲಿದ್ದಾರೆ ಎಂದರು.

ಈಗಾಗಲೇ ಅನೇಕ ಕಾಂಗ್ರೆಸ್​ ನಾಯಕರು ಬಿಜೆಪಿ ಬಾಗಿಲು ತಟ್ಟುತ್ತಿದ್ದಾರೆ. ರಾಜಕೀಯ ಭವಿಷ್ಯ ಭದ್ರವಾಗಿರಬೇಕೆಂದು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರುತ್ತಾರೆ. ಕರ್ನಾಟಕ ಪಕ್ಷದಲ್ಲಿ ಅಜಿತ್ ಪವಾರ್ ಇದ್ದಾರೆ, ಏಕನಾಥ್ ಶಿಂಧೆಯೂ ಇದ್ದಾರೆ. ಲೋಕಸಭೆ ಬಳಿಕ ರಾಜ್ಯದಲ್ಲಿ ರಾಜಕೀಯ ಬದಲಾವಣೆ ಆಗಲಿದೆ. ಬಹಳಷ್ಟು ಶಾಸಕರು ಬಿಜೆಪಿಗೆ ಬಂದರೆ ತಾನಾಗಿಯೇ ರಾಜಕೀಯವಾಗಿ ಬದಲಾವಣೆ ಆಗುತ್ತದೆ. ಬಿಜೆಪಿ ಯಾವುದೇ ಆಫರ್ ಕೊಟ್ಟು ಸೇರ್ಪಡೆ ಮಾಡಿಕೊಳ್ಳುವುದಿಲ್ಲ. ನಾವು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಶಾಸಕರನ್ನು ಮಾತನಾಡಿಸುವುದಿಲ್ಲ ಎಂದು ಹೇಳಿದರು.

ಲಕ್ಷ್ಮಣ ಸವದಿ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರಿಗೆ ಅವರ ತಪ್ಪಿನ ಬಗ್ಗೆ ಅರಿವಾಗಿದ್ದರೆ ನಾವು ಅವರೊಂದಿಗೆ ಮಾತನಾಡುತ್ತೇವೆ‌ ಎನ್ನುವ ಮೂಲಕ ಲಕ್ಷ್ಮಣ ಸವದಿ ಸೇರ್ಪಡೆ ಬಗ್ಗೆ ಅಡ್ಡ ಗೋಡೆ ಮೇಲೆ ದೀಪವಿಟ್ಟಂತೆ ಈರಣ್ಣ ಕಡಾಡಿ ಪ್ರತಿಕ್ರಿಯೆ ನೀಡಿದರು. ಬಳಿಕ, ತಾವೂ ಸಹ ಲೋಕಸಭೆ ಆಕಾಂಕ್ಷಿ. ಆದರೆ ಅಂತಿಮವಾಗಿ ಪಕ್ಷ ತೀರ್ಮಾನ ಮಾಡಲಿದೆ ಎಂದರು.

ಬೆಳಗಾವಿ ಡಿಸಿಸಿ ಬ್ಯಾಂಕ್​ ಅಧ್ಯಕ್ಷ ಸ್ಥಾನ ವಿಚಾರಕ್ಕೆ ನಮ್ಮ ಪಕ್ಷದ ತೀರ್ಮಾನಕ್ಕೆ ಬದ್ಧ. ರಮೇಶ್ ಜಾರಕಿಹೊಳಿ‌, ರಮೇಶ್ ಕತ್ತಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮುಂದುವರೆಯುತ್ತಾರೆ ಎಂಬ ಹೇಳಿಕೆ ವಿಚಾರಕ್ಕೆ, ಕೆಲವರು ಪಕ್ಷವನ್ನು ಮೀರಿ ಬೆಳೆದಿದ್ದಾರೆ. ನಾನು ಪಕ್ಷದಲ್ಲಿ ಚೌಕಟ್ಟಿನಲ್ಲಿ ಮಾತನಾಡುವೆ ಎನ್ನುವ ಮೂಲಕ ಪರೋಕ್ಷವಾಗಿ ರಮೇಶ್​ ಜಾರಕಿಹೊಳಿ‌ಗೆ ಟಾಂಗ್​ ಕೊಟ್ಟರು.

ಇದನ್ನೂ ಓದಿ: ಕಾಂಗ್ರೆಸ್​ ಹಂತಹಂತವಾಗಿ ನೆಲಕ್ಕಚ್ಚಲಿದೆ: ಹೆಚ್‌.ಡಿ.ದೇವೇಗೌಡ

Last Updated : Jan 26, 2024, 9:16 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.