ETV Bharat / state

ಆನೆ ಕಾರ್ಯ ಪಡೆ ಹಾಗೂ ಕ್ಷಿಪ್ರ ಸ್ಪಂದನ ತಂಡಗಳ ರಚನೆ: ಸಚಿವ ಈಶ್ವರ ಖಂಡ್ರೆ - MINISTER ESHWAR KHANDRE

ಎರಡು ಸಾವಿರ ಹೆಕ್ಟೇರ್​ನಲ್ಲಿ ಆನೆಗಳ ವಿಹಾರಧಾಮ ಹಾಗೂ ಆನೆ ಕಾರ್ಯ ಪಡೆ ಹಾಗೂ ಕ್ಷಿಪ್ರ ಸ್ಪಂದನ ತಂಡಗಳ ರಚನೆ ಬಗ್ಗೆ ನಿನ್ನೆ ವಿಧಾನಸಭೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

RAPID RESPONSE TEAMS  ELEPHANT TASK FORCE  BELAGAVI  BENGALURU
ಸಚಿವ ಈಶ್ವರ ಖಂಡ್ರೆ (ETV Bharat)
author img

By ETV Bharat Karnataka Team

Published : Dec 13, 2024, 7:46 AM IST

ಬೆಂಗಳೂರು/ಬೆಳಗಾವಿ: ಕಾಡಾನೆಗಳು ಹಿಂಡು ಹಿಂಡಾಗಿ ಜನವಸತಿ ಪ್ರದೇಶಗಳಿಗೆ ಬಂದು ರೈತರ ಬೆಳಗಳನ್ನು ನಾಶ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಇದನ್ನು ತಡೆಯಲು ಆನೆ ಕಾರ್ಯ ಪಡೆ, ಕ್ಷಿಪ್ರ ಸ್ಪಂದನ ತಂಡ ಮತ್ತು ಹಿಮ್ಮೆಟಿಸುವ ಶಿಬಿರ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು.

ಗುರುವಾರ ವಿಧಾನಸಭೆಯಲ್ಲಿ ಶಾಸಕರುಗಳ ಚುಕ್ಕೆ ಗುರುತಿನ ಪ್ರಶ್ನೆಗಳಿಗೆ ಉತ್ತರಿಸುತ್ತಾ "ಹಾಸನ, ಚಿಕ್ಕಮಗಳೂರು, ಮೈಸೂರು, ಕೊಡಗು, ಚಾಮರಾಜನಗರ, ರಾಮನಗರ ಹಾಗೂ ಬೆಂಗಳೂರು ಜಿಲ್ಲೆಗಳಲ್ಲಿ ಕಾಡಾನೆ ಹಾವಳಿ ತಡೆಯಲು ಪ್ರತಿ ಜಿಲ್ಲೆಗೆ ಒಂದರಂತೆ ಅಧಿಕಾರಿ ಹಾಗೂ ಸಿಬ್ಬಂದಿನ್ನೊಳಗೊಂಡ 8 ಆನೆ ಕಾರ್ಯಪಡೆ ರಚಿಸಲಾಗಿದೆ. ಇತರೆ ವನ್ಯಪ್ರಾಣಿಗಳ ಹಾವಳಿಯನ್ನು ನಿಯಂತ್ರಿಸಲು ತಲಾ 4 ಜನರ ತಂಡದಂತೆ 95 ಹಿಮ್ಮೆಟ್ಟಿಸುವ ತಂಡ ಹಾಗೂ 33 ಕ್ಷಿಪ್ರ ಸ್ಪಂದನೆ ತಂಡಗಳು ರಚಿಸಲಾಗಿದೆ. ಈ ತಂಡಗಳು ರಾತ್ರಿ ಗಸ್ತು ಕಾರ್ಯಕೈಗೊಂಡು ನಿತ್ಯ ಕಾಡಾನೆಗಳಿರುವ ಪ್ರದೇಶಗಳಿಗೆ ಭೇಟಿ ನೀಡಿ, ಸ್ಥಳೀಯ ಸಾರ್ವಜನಿಕರನ್ನು ಸಂಪರ್ಕಿಸಿ, ಆನೆಗಳ ಚಲನ - ವಲನಗಳ ಮಾಹಿತಿಯನ್ನು ನೀಡಿ, ಎಚ್ಚರಿಕೆಯಿಂದ ಇರುವಂತೆ ಧ್ವನಿವರ್ಧಕ ಮೂಲಕ ಮಾಹಿತಿ ನೀಡುವ ಕಾರ್ಯ ಮಾಡಲಾಗುತ್ತಿದೆ" ಎಂದು ತಿಳಿಸಿದರು.

ವಿಧಾನಸಭೆಯಲ್ಲಿ ಶಾಸಕರುಗಳ ಚುಕ್ಕೆ ಗುರುತಿನ ಪ್ರಶ್ನೆಗಳಿಗೆ ಸಚಿವ ಈಶ್ವರ ಖಂಡ್ರೆ ಅವರ ಉತ್ತರ ಹೀಗಿದೆ. (ETV Bharat)

ಹೆಜ್ಜೆ ಎಂಬ ಡ್ಯಾಶ್ ಬೋರ್ಡ್ : "ರೇಡಿಯೋ ಕಾಲರ್ ಅಳವಡಿಸಿರುವ ಕಾಡಾನೆಗಳ ಚಲನವಲನಗಳನ್ನು ಗಮನಿಸಲು 'ಹೆಜ್ಜೆ' ಎಂಬ ಡ್ಯಾಶ್ ಬೋರ್ಡ್​ನ್ನು ಅರಣ್ಯ ಇಲಾಖೆ ರೂಪಿಸಿದೆ. ಕಾಡಂಚಿನ ಗ್ರಾಮಗಳಲ್ಲಿ ವನ್ಯಪ್ರಾಣಿಗಳು ಎಚ್ಚರಿಕೆ ಹಾಗೂ ಮಾಹಿತಿ ನೀಡಲು ಅಡ್ವಾನ್ಸ್ ಅಲರ್ಟ್ ಸಿಸ್ಟಂ ರಚಿಸಲಾಗಿದೆ. ಕಾಡಾನೆಗಳು ಸಂಚರಿಸುವ ಪ್ರದೇಶಗಳಲ್ಲಿ ಡಿಜಿಟಲ್​ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ಅರಣ್ಯ ಅಂಚಿನ ಪ್ರದೇಶಗಳಲ್ಲಿ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಕ್ಯಾಮೆರಾಗಳನ್ನು ಹಾಗೂ ಡ್ರೋಣ್ ಕ್ಯಾಮೆರಾಗಳನ್ನು ಬಳಸಲಾಗುತ್ತಿದೆ. ಆಕಾಶವಾಣಿ ಮುಖಾಂತರ ಹಾಗೂ ವಾಟ್ಸ್​​ಆ್ಯಪ್​ ​ಗ್ರೂಪ್‌ಗಳಲ್ಲಿ ಸಂದೇಶಗಳನ್ನು ರವಾನಿಸಲಾಗುತ್ತಿದೆ" ಎಂದು ಸಚಿವ ಈಶ್ವರ .ಬಿ. ಖಂಡ್ರೆ ಮಾಹಿತಿ ನೀಡಿದರು.

"ಕಾಡಾನೆ ದಾಳಿ ಸೇರಿದಂತೆ ಯಾವುದೇ ವನ್ಯಪ್ರಾಣಿ ದಾಳಿಯಿಂದ ಮೃತಪಟ್ಟವರ ಕುಟುಂಬಗಳಿಗೆ ಈ ಹಿಂದೆ ಸರ್ಕಾರ ನೀಡುತ್ತಿದ್ದ ಪರಿಹಾರ ಧನವನ್ನು ರೂ.7.5 ಲಕ್ಷದಿಂದ 15 ಲಕ್ಷಕ್ಕೆ ಏರಿಸಲಾಗಿದೆ. ಇದರೊಂದಿಗೆ ಮೃತಪಟ್ಟ ಹಾಗೂ ಶಾಶ್ವತ ಅಂಗವಿಕಲತೆ ಹೊಂದಿದ ಕುಟುಂಬದವರಿಗೆ 5 ವರ್ಷಗಳವರೆಗೆ ಪ್ರತಿಗಳು ರೂ. 4 ಸಾವಿರ ಮಾಸಾಶನ ನೀಡಲಾಗುವುದು. ಶಾಶ್ವತ ಅಂಗವಿಕಲತೆ ಉಂಟಾದರೆ ರೂ.10 ಲಕ್ಷ, ಭಾಗಶಃ ಅಂಗವಿಕಲತೆಗೆ ರೂ.5 ಲಕ್ಷ, ಗಾಯಗೊಂಡರೆ ರೂ.60 ಸಾವಿರ, ಆಸ್ತಿ ನಷ್ಟಕ್ಕೆ ರೂ.20 ಸಾವಿರ ಪರಿಹಾರ ಧನ ವಿತರಣೆ ಮಾಡಲಾಗುತ್ತಿದೆ. ಇದರೊಂದಿಗೆ ಬೆಳೆಹಾನಿಯಾದರೆ ನಿಯಾಮನುಸಾರ ಪರಿಹಾರ ವಿತರಿಸಲಾಗುವುದು" ಎಂದು ಹೇಳಿದರು.

"ಬೇಲೂರು ಕ್ಷೇತ್ರ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಗೆ 4 ಜನರು ಬಲಿಯಾಗಿದ್ದು, ಸರ್ಕಾರದ ಆದೇಶದಂತೆ 2021-22ನೇ ಸಾಲಿನ ಪ್ರಕರಣಗಳಿಗೆ ರೂ.7.5 ಲಕ್ಷ ಹಾಗೂ 2023-24ನೇ ಸಾಲಿನ ಪ್ರಕರಣಗಳಿಗೆ ರೂ.15 ಲಕ್ಷದಂತೆ ಒಟ್ಟು ರೂ.45 ಲಕ್ಷ ಪರಿಹಾರ ವಿತರಿಸಲಾಗಿದೆ. ಇದೇ ಅವಧಿಯಲ್ಲಿ ಘಟಿಸಿದ 1,468 ಬೆಳೆ ಹಾನಿ ಪ್ರಕರಣದಲ್ಲಿ ಒಟ್ಟು ರೂ.2.10 ಕೋಟಿ ಪರಿಹಾರ ನೀಡಲಾಗಿದೆ" ಎಂದು ಶಾಸಕ ಸುರೇಶ್ ಹೆಚ್.ಕೆ. ಅವರ ಚುಕ್ಕೆ ಗುರುತಿನ ಪ್ರಶ್ನೆ 1,098ಕ್ಕೆ ಸಚಿವರು ಸದನದಲ್ಲಿ ಸಚಿವ ಈಶ್ವರ ಖಂಡ್ರೆ ಉತ್ತರಿಸಿದರು.

ರೈಲ್ವೆ ಬ್ಯಾರಿಕೇಡ್​ ನಿರ್ಮಾಣಕ್ಕೆ 500 ಕೋಟಿ ರೂ. ಪ್ರಸ್ತಾವ: ಕಾಡಾನೆಗಳು ರೈತರ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿಯಾಗದಂತೆ ತಡೆಯಲು ರೈಲ್ವೇ ಹಳಿ ಬ್ಯಾರಿಕೇಡ್ ಅಳವಡಿಸಲಾಗುತ್ತಿದೆ. 08-ಆನೆ ಕಾರ್ಯಪಡೆ ರಚಿಸಿ, ಆನೆ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ. ಆನೆಗಳನ್ನು ಹಿಮ್ಮೆಟ್ಟಿಸಲು ಎಸ್‌ಒಪಿ ರೂಪಿಸಿ, ಅದರನ್ವಯವೇ ಕಾರ್ಯಾಚರಣೆ ಮಾಡಲಾಗುತ್ತಿದೆ. ಈಗಾಗಲೆ ರಾಜ್ಯದಲ್ಲಿ 369 ಕಿ.ಮೀ. ರೈಲ್ವೆ ಹಳಿ ಬ್ಯಾರಿಕೇಡ್ ನಿರ್ಮಿಸಿದ್ದು, 60 ಕಿ.ಮೀ. ನಿರ್ಮಾಣ ಪ್ರಗತಿಯಲ್ಲಿದೆ. ಇನ್ನೂ 350 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡಬೇಕಿದ್ದು, ಇದಕ್ಕಾಗಿ 500 ಕೋಟಿ ರೂ.ಗಳ ಬಿಡುಗಡೆಗೆ ಸರ್ಕಾರ ಪ್ರಸ್ತಾವನೆ ಸಲ್ಲಿಸಲಾಗಿದೆ. ಆನೆಗಳ ಚಲನ-ವಲನದ ಬಗ್ಗೆ ಅಧ್ಯಯನ ಕೈಗೊಂಡು ವರದಿ ಸಲ್ಲಿಸಲು ತಜ್ಞರ ಸಮಿತಿ ರಚಿಸಲಾಗಿದ್ದು, ವರದಿಯ ಆಧಾರದಲ್ಲಿ ಸರ್ಕಾರ ಮುಂಬರುವ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಈಶ್ವರ ಖಂಡ್ರೆ ಸದನಕ್ಕೆ ಈ ಸಂದರ್ಭದಲ್ಲಿ ಮಾಹಿತಿ ನೀಡಿದರು.

2 ಸಾವಿರ ಹೆ. ನಲ್ಲಿ ಆನೆಗಳ ವಿಹಾರಧಾಮ: ಕೊಡಗು ಮತ್ತು ಹಾಸನದಲ್ಲಿ ಕಾಡಾನೆಗಳ ಕಾಟ ನಿಯಂತ್ರಿಸಲು ಕೊಡಗು ಮತ್ತು ಹಾಸನ ಬಳಿ 2 ಸಾವಿರ ಹೆಕ್ಟೇರ್​ ಪ್ರದೇಶದಲ್ಲಿ ಆನೆಗಳ ವಿಹಾರಧಾಮ (ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್​​) ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದರು.

ಬೇಲೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಡಾನೆಗಳ ದಾಳಿಯಿಂದ ಹಾನಿಗೊಳಗಾದ ಮಾನವ ಪ್ರಾಣಹಾನಿ ಮತ್ತು ಮಾನವ ಗಾಯ ಪ್ರಕರಣಗಳಿಗೆ ಪರಿಹಾರ ಧನ ನೀಡಲಾಗುತ್ತಿದೆ ಎಂದರು. ಹಾಸನ ಜಿಲ್ಲಾ ವ್ಯಾಪ್ತಿಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಹೋಬಳಿ ಗ್ರಾಮಗಳಲ್ಲಿ ಕಳೆದ 03 ತಿಂಗಳಿನಿಂದ ಕಾಡಾನೆಗಳು ಹಿಂಡು ಹಿಂಡಾಗಿ ಬಂದು ರೈತರ ಬೆಳೆಗಳನ್ನು ನಾಶ ಮಾಡುತ್ತಿವೆ, ಈ ಕಾಡಾನೆಗಳನ್ನು ಅರಣ್ಯ ಪ್ರದೇಶಗಳ ಕಡೆಗೆ ಹಿಮ್ಮೆಟಿಸಲು ಇಲಾಖಾ ವತಿಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಶಾಸಕರ ಹೇಳಿಕೆ ದುರದೃಷ್ಟಕರ: ಆನೆಗಳಿಂದ ಕಾಡಿನಂಚಿನ ಜನರಿಗೆ ತೊಂದರೆ ಆಗುತ್ತಿದ್ದು, ರೈತರಿಗೆ ಕೋವಿ ಪಡೆಯಲು ಪರವಾನಗಿ ನೀಡಿ, ಆನೆಗಳನ್ನು ಕೊಲ್ಲಲು ಅನುಮತಿ ನೀಡಿ ಎಂದು ಬೆಳ್ತಂಗಡಿ ಶಾಸಕ ಹರೀಶ್​ ಪೂಂಜಾ ಅವರು ನೀಡಿದ ಹೇಳಿಕೆ ದುರದೃಷ್ಟಕರ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ತಿಳಿಸಿದರು.

ಮನುಷ್ಯರಿಗೆ ಬದುಕುವ ಹಕ್ಕಿರುವಂತೆಯೇ ವನ್ಯಜೀವಿಗಳಿಗೂ ಬದುಕುವ ಹಕ್ಕಿದೆ ಎಂದು ಸಭಾಧ್ಯಕ್ಷ ಯು.ಟಿ. ಖಾದರ್​ ಹೇಳಿದರು. ರಾಜ್ಯ ಸರ್ಕಾರ ಆನೆಗಳ ಹಾವಳಿ ತಡೆಗೆ ಕಳೆದ 2 ವರ್ಷಗಳಲ್ಲಿ 489.46 ಮೀ. ಸೌರಬೇಲಿ, 284.82 ಆನೆ ತಡೆ ಕಂದಕ ನಿರ್ಮಾಣ ಮತ್ತು ನಿರ್ವಹಣೆ ಮಾಡಲಾಗುತ್ತಿದೆ. ಜೊತೆಗೆ ಹಾಸನ, ಚಿಕ್ಕಮಗಳೂರು, ಮೈಸೂರು, ಕೊಡಗು, ರಾಮನಗರ, ಚಾಮರಾಜನಗರ, ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 8 ಆನೆ ಕಾರ್ಯಪಡೆಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ತಿಳಿಸಿದರು.

ಇದನ್ನೂ ಓದಿ: ಹೈಕೋರ್ಟ್​ ನಿರ್ದೇಶನ ಉಲ್ಲಂಘಿಸಿ ಅನುದಾನರಹಿತ ಶಾಲೆಗಳಿಂದ 345.80 ಕೋಟಿ ಹೆಚ್ಚುವರಿ ಶುಲ್ಕ ವಸೂಲಿ: ಸಿಎಜಿ ವರದಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.