ETV Bharat / state

ಮೆಡಿಕಲ್ ಕಾಲೇಜು ಇಲ್ಲದ ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ: ಶರಣ ಪ್ರಕಾಶ್ ಪಾಟೀಲ್ - Legislative council Session - LEGISLATIVE COUNCIL SESSION

ಸದ್ಯ 22 ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಆಗಿದೆ. ಹಣಕಾಸು ಇಲಾಖೆ ಅನುಮತಿ ಸಿಕ್ಕಿದರೆ ಹಂತ ಹಂತವಾಗಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲಾಗುತ್ತದೆ‌ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.

ಶರಣ ಪ್ರಕಾಶ್ ಪಾಟೀಲ್
ಶರಣ ಪ್ರಕಾಶ್ ಪಾಟೀಲ್ (ETV Bharat)
author img

By ETV Bharat Karnataka Team

Published : Jul 15, 2024, 5:32 PM IST

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಯಲ್ಲಿಯೂ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಬೇಕು ಎನ್ನುವುದು ಸರ್ಕಾರದ ಪಾಲಿಸಿಯ ವಿಷಯವಾಗಿದ್ದರೂ ಆರ್ಥಿಕ‌ ಸ್ಥಿತಿಗತಿಯಾಧರಿತವಾಗಿ ಹಂತ ಹಂತವಾಗಿ ಕ್ರಮ ವಹಿಸಲಾಗುತ್ತದೆ. ಪಿಪಿಪಿ ಮಾದರಿಯಲ್ಲಿಯೂ ಮೆಡಿಕಲ್ ಕಾಲೇಜು ಸ್ಥಾಪನೆಗೆ ಚಿಂತನೆ ನಡೆಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, 2013 ರಲ್ಲಿಯೇ ನಾವು ಪಾಲಿಸಿ ತಂದಿದ್ದೇವೆ, ಪ್ರತಿ ಜಿಲ್ಲೆಯಲ್ಲಿಯೂ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಬೇಕು ಎನ್ನುವುದು ನಮ್ಮ ಪಾಲಿಸಿ ವಿಷಯವಾಗಿದೆ. ಸದ್ಯ 22 ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಆಗಿದೆ. ಹಣಕಾಸು ಇಲಾಖೆ ಅನುಮತಿ ಸಿಕ್ಕಿದರೆ ಹಂತ ಹಂತವಾಗಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲಾಗುತ್ತದೆ‌ ಎಂದರು.

ಯಾವ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಇಲ್ಲವೋ ಅಲ್ಲಿ ಪಿಪಿಪಿ ಮಾದರಿಯಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪಿಸಲು ಕೇಂದ್ರ ಸೂಚಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ವರದಿ ನೀಡಲು ಐಡೆಕ್ ಸಂಸ್ಥೆಗೆ ಸೂಚಿಸಿದ್ದು, ಈಗಾಗಲೇ ಸರ್ವೆ ಮಾಡಿ ವರದಿ ನೀಡಿದೆ. ಆದರೆ ಆ ವರದಿ ತೃಪ್ತಿ ತರದ ಕಾರಣ ಮತ್ತೊಂದು ವರದಿಗೆ ಸೂಚಿಸಿದ್ದು, ವರದಿ ಬಂದ ನಂತರ ಸಿಎಂ ಜೊತೆ ಚರ್ಚಿಸಿ ಶಿಫಾರಸು ಪರಿಶೀಲಿಸಲಾಗುತ್ತದೆ. ಎಲ್ಲಿ ಸಾಧ್ಯವೋ ಅಲ್ಲಿ ಸರ್ಕಾರದಿಂದ ಮತ್ತು ಅವಕಾಶ ಸಿಗುವ ಕಡೆ ಪಿಪಿಪಿ ಮಾದರಿಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲಾಗುತ್ತದೆ. ಪ್ರತಿ ಜಿಲ್ಲೆಯಲ್ಲಿಯೂ ಸರ್ಕಾರದಿಂದ ಕಾಲೇಜು ಸ್ಥಾಪನೆ ಸರ್ಕಾರದ ಪಾಲಿಸಿ ವಿಷಯವಾಗಿದೆ ಎಂದು ಹೇಳಿದರು.

ನೀಟ್ ಅಕ್ರಮ ಕುರಿತು ಸದನದಲ್ಲಿ ಗದ್ದಲ, ಅರ್ಧ ಗಂಟೆ ಚರ್ಚೆಗೆ ಅವಕಾಶ: ನೀಟ್ ಪರೀಕ್ಷಾ ಅಕ್ರಮದ ವಿಚಾರ ವಿಧಾನ ಪರಿಷತ್​ನಲ್ಲಿ ಪ್ರತಿಧ್ವನಿಸಿತು. ಕೇಂದ್ರದ ಕಡೆ ಬೆರಳು ಮಾಡಿದ ಸರ್ಕಾರದ ನಡೆಗೆ ಆಕ್ಷೇಪಿಸಿದ ಬಿಜೆಪಿ ಸದಸ್ಯರು ಆಡಳಿತ ಪಕ್ಷದ ವಿರುದ್ಧ ಮುಗಿಬಿದ್ದರು. ಈ ವೇಳೆ ಸದನದಲ್ಲಿ ಗದ್ದಲ ಸೃಷ್ಟಿಯಾಯಿತು, ಅಂತಿಮವಾಗಿ ಅರ್ಧ ಗಂಟೆ ಚರ್ಚೆಗೆ ಅವಕಾಶ ನೀಡುವ ಭರವಸೆ ನೀಡಿ ಉಪ ಸಭಾಪತಿ ಪ್ರಾಣೇಶ್ ಗದ್ದಲಕ್ಕೆ ತೆರೆ ಎಳೆದರು.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಐವಾನ್ ಡಿಸೋಜಾ ನೀಟ್ ಅಕ್ರಮ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಡೀ ದೇಶದಲ್ಲಿ ನೀಟ್ ಪರೀಕ್ಷೆ ಬರೆದು ಕೇಂದ್ರದ ಯಡವಟ್ಟು ಅಕ್ರಮದಿಂದ‌ 24 ಲಕ್ಷ ಮಕ್ಕಳು ಆತಂಕದಲ್ಲಿದ್ದಾರೆ. ನೀಟ್ ಪರೀಕ್ಷೆಯಲ್ಲಿ ಕೇಂದ್ರ ಎಡವಿದೆ, ಈ ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಗುಮಾನಿಯಾಯಿತು. ಸಿಬಿಐ ತನಿಖೆಗೆ ನಾವು ಆಗ್ರಹಿಸಿದೆವು, ಆದರೆ ಅಕ್ರಮ ಆಗಿಲ್ಲ ಎಂದು ಕೇಂದ್ರ‌ ಸಚಿವರು ಸಮರ್ಥಿಸಿಕೊಂಡರು. ನಂತರ ಸಿಬಿಐಗೆ ವಹಿಸಿದೆ, ಅನೇಕ ರಾಜ್ಯದಲ್ಲಿ ಎಫ್ಐಆರ್ ದಾಖಲಾಗಿದೆ. ಸುಪ್ರೀಂಕೋರ್ಟ್​ನಲ್ಲಿ ವಿಷಯ ಇದೆ. ನೀಟ್ ಕೇಂದ್ರದ ಎನ್ಎಂಸಿ ಕಾಯ್ದೆಯ ಪ್ರಕಾರ ಮತ್ತು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ತರಲಾಗಿದೆ. ಸಂಸತ್ ಕಾಯ್ದೆ ತಂದಿದೆ ಹಾಗಾಗಿ ನಾವು ನಮ್ಮ ಹಂತದಲ್ಲಿ ಏನೂ ಮಾಡಲು ಸಾಧ್ಯವಿಲ್ಲ. ಸುಪ್ರೀಂಕೋರ್ಟ್ ಅಥವಾ ಸಂಸತ್ತು ಪರಿಹಾರ ನೀಡಬೇಕು ಎಂದರು.

ಪಿಜಿ ಎಂಟ್ರೆನ್ಸ್ ಸೇರಿ ನಾಲ್ಕೈದು ಪರೀಕ್ಷೆ ಮುಂದೂಡಿಕೆಯಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ ಎಂಬ ನಿರಂತರವಾಗಿ ಕೇಂದ್ರದ ಮೇಲೆ ಆರೋಪಕ್ಕೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರುವುದರಿಂದಾಗಿ ಸದನದಲ್ಲಿ ಆರೋಪ ಪ್ರತ್ಯಾರೋಪ ಶುರುವಾಗಿ ಗದ್ದಲದ ವಾತಾವರಣ ಸೃಷ್ಟಿಯಾಯಿತು. ಅಂತಿಮವಾಗಿ ಪತ್ರ ಕೊಡಿ ಅರ್ಧ ಗಂಟೆ‌ ಚರ್ಚೆಗೆ ಅವಕಾಶ ನೀಡುತ್ತೇನೆ ಎನ್ನುವ ಭರವಸೆ ನೀಡಿದ ಉಪ ಸಭಾಪತಿ ಪ್ರಾಣೇಶ್ ಗದ್ದಲಕ್ಕೆ ತೆರೆ ಎಳೆದರು.

ಏಮ್ಸ್ ಗದ್ದಲ: ಏಮ್ಸ್ ಸ್ಥಾಪನೆ ವಿಚಾರದಲ್ಲಿ ಆಡಳಿತ ಪಕ್ಷ ಮತ್ತು ಪ್ರತಿಪಕ್ಷದ ನಡುವೆ ಜಟಾಪಟಿಗೆ ಕಾರಣವಾಯಿತು. ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು, ಸದನದಲ್ಲಿ ಕೆಲಕಾಲ ಗದ್ದಲದ ವಾತಾವರಣ ಸೃಷ್ಟಿಯಾಯಿತು. ನಂತರ ಸಭಾಪತಿಗಳು ಮಧ್ಯಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಿದರು.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಸದಸ್ಯರು ಆರೋಪಿಸಿದಂತೆ ನಮ್ಮ ಉತ್ತರದಲ್ಲಿ ಯಾವುದೇ ತಪ್ಪು ಇಲ್ಲ. ನಮ್ಮ ರಾಜ್ಯದಲ್ಲಿ ಏಮ್ಸ್ ಸ್ಥಾಪನೆ ಕುರಿತು ಪ್ರಶ್ನಿಸಿದ್ದಾರೆ. ನಾನು ಸಚಿವನಾದ ನಂತರ ಎರಡು ಬಾರಿ ದೆಹಲಿಗೆ ಹೋಗಿ ಆರೋಗ್ಯ ಸಚಿವರ ಭೇಟಿಯಾಗಿ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಬೇಡಿಕೆ ಇಟ್ಟಿದ್ದೇವೆ. ಕೇಂದ್ರ ಸ್ಥಾಪನೆ ಮಾಡಬೇಕಿದೆ. ಸಿಎಂ ಪತ್ರ ಬರೆದಿದ್ದಾರೆ, ಪ್ರಧಾನಿಗಳ ಭೇಟಿ ಮಾಡಿ ಮನವಿಯನ್ನೂ ಮಾಡಿದ್ದೇವೆ, ರಾಯಚೂರಿನಲ್ಲಿ ಭೂಮಿ ಗುರುತಿಸಿದ್ದೇವೆ, ಭೂಮಿ ಕೊಡಲಿದ್ದೇವೆ. ಎಲ್ಲಾ ವ್ಯವಸ್ಥೆ ಕಲ್ಪಿಸುವ ಆಶ್ವಾಸನೆ ನೀಡಿದ್ದೇವೆ. ಲಿಖಿತವಾಗಿ ಎಲ್ಲ ಸಹಕಾರದ ಭರವಸೆ ನೀಡಿದ್ದೇವೆ, ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದಾರೆ ಹೇಳಿ ಮಾಡಿಸಿ ಎಂದು ತಿವಿದರು.

ಇದಕ್ಕೆ ತಿರುಗೇಟು ನೀಡಿದ ತಿಪ್ಪೇಸ್ಚಾಮಿ, ಬನ್ನಿ ಹೋಗೋಣ ಎಂದರು. ನಂತರ ಮಾತನಾಡಿದ ಶರಣ ಪ್ರಕಾಶ್ ಪಾಟೀಲ್, ಕೇಂದ್ರ ತಾರತಮ್ಯ ಮಾಡುತ್ತಿದೆ. ಕರ್ನಾಟಕ, ಕೇರಳಕ್ಕೆ ಮಾತ್ರ ಏಮ್ಸ್ ನೀಡಿಲ್ಲ ಎಂದರು. ಇದಕ್ಕೆ ಬಿಜೆಪಿ ಸದಸ್ಯರು ಆಕ್ಷೆಪ ವ್ಯಕ್ತಪಡಿಸಿದರು. ಐಐಟಿ ಕೊಟ್ಟಿದ್ದು ನಾವು, ಕೇಂದ್ರ ತಾರತಮ್ಯ ಮಾಡಿಲ್ಲ ಎಂದರು. ಇದಕ್ಕೆ ಆಡಳಿತ ಪಕ್ಷ ಸದಸ್ಯರು ವಿರೋಧ ವ್ಯಕ್ತಪಡಿಸಿ, ಎದ್ದು ನಿಂತು ತಿರುಗೇಟು ನೀಡಿದರು. ಈ ವೇಳೆ ವಾಗ್ವಾದ ನಡೆಯಿತು. ಏರಿದ ದನಿಯಲ್ಲಿ ವಾಗ್ದಾಳಿ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ, ಕೇಂದ್ರದ ನೀವು ಏನು ಮಾಡಿದ್ದೀರಿ ಲೆಕ್ಕ ಕೊಡಿ ಎಂದರು. ಇದಕ್ಕೆ ಸಿಟಿ ರವಿ ಜನಕ್ಕೆ ಲೆಕ್ಕ ಕೊಟ್ಟಿದ್ದೇವೆ ಎಂದು ತಿರುಗೇಟು ನೀಡಿದರು. ನಂತರ ಮಧ್ಯಪ್ರವೇಶ ಮಾಡಿದ ಸಭಾಪತಿ ಬಸವರಾಜ ಹೊರಟ್ಟಿ ಪರಿಸ್ಥಿತಿ ನಿಯಂತ್ರಿಸಿದರು.

ಇದನ್ನೂ ಓದಿ: ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಚಿಕಿತ್ಸೆಗೆ ಸರ್ಕಾರದಿಂದಲೇ ದರ ನಿಗದಿ: ಸಚಿವ ದಿನೇಶ್ ಗುಂಡೂರಾವ್ - Legislative Session

ETV Bharat Logo

Copyright © 2024 Ushodaya Enterprises Pvt. Ltd., All Rights Reserved.