ETV Bharat / state

ಭೋವಿ ನಿಗಮದಲ್ಲಿ ನಾನು ಒಂದು ರೂಪಾಯಿ ಅವ್ಯವಹಾರ ಮಾಡಿದ್ದರೂ ಸಿಬಿಐ ತನಿಖೆ ಮಾಡಿ: ಕೋಟ ಶ್ರೀನಿವಾಸ ಪೂಜಾರಿ - Kota Srinivasa Poojari

author img

By ETV Bharat Karnataka Team

Published : Jul 20, 2024, 6:18 PM IST

ಆರೋಪದಲ್ಲಿ ನನ್ನ ಹೆಸರು ಉಲ್ಲೇಖಿಸಿರುವುದನ್ನು ವಾರದೊಳಗೆ ವಾಪಸ್​ ಪಡೆಯದೇ ಇದ್ದರೆ, ವಿಧಾನಸೌಧ ಮತ್ತು ವಿಕಾಸಸೌಧದ ನಡುವೆ ಇರುವ ಗಾಂಧಿ ಪ್ರತಿಮೆ ಎದುರು ಧರಣಿ ಕುಳಿತುಕೊಳ್ಳುತ್ತೇನೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.

MP Kota Srinivasa Poojari
ಸಂಸದ ಕೋಟಾ ಶ್ರೀನಿವಾಸ ಪೂಜಾರಿ (ETV Bharat)
ಭೋವಿ ನಿಗಮದಲ್ಲಿ ನಾನು ಒಂದು ರೂಪಾಯಿ ಅವ್ಯವಹಾರ ಮಾಡಿದ್ದರೂ ಸಿಬಿಐ ತನಿಖೆ ಮಾಡಿ: ಕೋಟ ಶ್ರೀನಿವಾಸ ಪೂಜಾರಿ (ETV Bharat)

ಉಡುಪಿ: "ನನ್ನ ವಿರುದ್ಧ ಹಗರಣದ ಆರೋಪ ಮಾಡಿರುವ ಸಿದ್ದರಾಮಯ್ಯನವರೇ, ಭೋವಿ ನಿಗಮದಲ್ಲಿ ನಾನು ಒಂದು ರೂಪಾಯಿ ಅವ್ಯವಹಾರ ಮಾಡಿದ್ದರೂ, ಸಿಬಿಐ ತನಿಖೆ ಮಾಡಿಸಿ" ಎಂದು ಉಡುಪಿ - ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.

ಉಡುಪಿಯಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಸಿದ್ದರಾಮಯ್ಯನವರೇ ನೀವು ಮುಖ್ಯಮಂತ್ರಿ ಆಗಿ ಒಂದು ವರ್ಷ ಕಳೆಯಿತು. ಸಿಐಡಿ ನಿಮ್ಮ ಕೈಯಲ್ಲಿದ್ದು, ನಾನು ತಪ್ಪು ಮಾಡಿದ್ದರೆ ಜೈಲು ಶಿಕ್ಷೆ ಸೇರಿ, ಯಾವ ಶಿಕ್ಷೆಯನ್ನು ಕೊಡುವ ಅಧಿಕಾರ ನಿಮಗೆ ಇತ್ತು. ಆದರೆ ಅದ್ಯಾವುದನ್ನು ನೀವು ಮಾಡಿಲ್ಲ. ನಾನು ಮಂತ್ರಿಯಾಗಿದ್ದಾಗ ವಿಪಕ್ಷ ನಾಯಕರಾಗಿದ್ರಿ. ಆಗಲೂ ಏನೂ ಸೊಲ್ಲೆತ್ತಿಲ್ಲ. ಆದರೆ, ವಾಲ್ಮೀಕಿ ಹಗರಣದ ಆರೋಪ ಬಂದಾಗ ಬೇರೆಯವರ ತಲೆ ಮೇಲೆ ಹಾಕಲು ಹೀಗೆ ಹೇಳುತ್ತಿದ್ದೀರಿ." ಎಂದು ದೂರಿದರು.

"ನನ್ನ ಹೆಸರು ಉಲ್ಲೇಖಿಸಿರುವುದನ್ನು ವಾಪಸ್​​ ಪಡೆಯಿರಿ. ಇಲ್ಲವಾದರೆ ತಕ್ಷಣ ಈ ಪ್ರಕರಣವನ್ನು ಸಿಬಿಐಗೆ ವಹಿಸಿ. ಒಂದು ರೂಪಾಯಿ ನಾನು ಅವ್ಯವಹಾರ ಮಾಡಿದ್ದರೆ ಸಿಬಿಐ ತನಿಖೆ ಮಾಡಿಸಿ. ವಾರದೊಳಗೆ ನಿಮ್ಮ ಹೇಳಿಕೆ ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ವಿಧಾನಸೌಧ ಮತ್ತು ವಿಕಾಸ ಸೌಧ ನಡುವೆ ಇರುವ ಗಾಂಧಿ ಪ್ರತಿಮೆ ಎದುರು ಧರಣಿ ಕುಳಿತುಕೊಳ್ಳುತ್ತೇನೆ. ಮತ್ತು ಈ ಮೂಲಕ ಸಿಬಿಐ ತನಿಖೆಗೆ ಒತ್ತಾಯಿಸುತ್ತೇನೆ. ಪ್ರಜಾಪ್ರಭುತ್ವದಲ್ಲಿ ಸತ್ಯಕ್ಕೆ ಎಂದಿಗೂ ಅಪಚಾರವಾಗಬಾರದು. ಮಾನನಷ್ಟ ಮೊಕದ್ದಮೆ ಹಾಕಲು ಅನುಮತಿ ಬೇಕಾಗಬಹುದು. ಈ ಬಗ್ಗೆ ಕೂಡ ಯೋಚನೆ ಮಾಡುತ್ತೇನೆ" ಎಂದು ಎಚ್ಚರಿಕೆ ನೀಡಿದರು.

"ಪರಿಶಿಷ್ಟ ಪಂಗಡದ ಹಣವನ್ನು ಇತರ ರಾಜ್ಯದ ಚುನಾವಣೆಗೆ ಕೊಟ್ಟಿದ್ದೀರಿ. ದೊಡ್ಡ ಅಪರಾಧ ಮಾಡಿರುವ ಕಾಂಗ್ರೆಸ್ ಸರ್ಕಾರ ತನ್ನ ಹುಳುಕು ಮುಚ್ಚಿಸಲು ಇಲ್ಲ ಸಲ್ಲದ ಆರೋಪ ಮಾಡುತ್ತದೆ. ಹಿಂದಿನ ಸರಕಾರದಲ್ಲಿ ಅಪರಾಧವೇ ಮಾಡದ ಪ್ರಕರಣಗಳನ್ನು ಹೇಳುತ್ತಿದ್ದೀರಿ. ಅಲ್ಲದೇ ನನ್ನ ಹೆಸರನ್ನು ಕೂಡ ಹಗರಣದಲ್ಲಿ ಎಳೆದು ತಂದಿದ್ದೀರಿ. ಕೋಟ ಶ್ರೀನಿವಾಸ ಪೂಜಾರಿ ಕೊಳವೆಬಾವಿ ಹಗರಣ ಮಾಡಿದ್ದಾರೆ ಎಂದಿದ್ದೀರಿ. ನಿಮಗೆ ನಾನು ಅಧಿಕೃತ ಪತ್ರ ಬರೆಯುತ್ತೇನೆ." ಎಂದರು.

"ನಾನು ಸಚಿವನಾಗಿದ್ದಾಗ ಟೆಂಡರ್​ನಲ್ಲಿ ಅಕ್ರಮವಾಗಿದೆ ಎಂಬ ದೂರು ಕೇಳಿ ಬಂತು. ಕಡತ ತರಿಸಿಕೊಂಡು ನಾನು ತಕ್ಷಣ ಸಿಐಡಿ ತನಿಖೆಗೆ ಆದೇಶಿಸಿದೆ. ರಾಜ್ಯದ ಇತಿಹಾಸದಲ್ಲಿ ಟೆಂಡರ್ ಬಿಟ್ಟರೆ ಬೇರೆ ವ್ಯವಸ್ಥೆ ಇರಲಿಲ್ಲ. ಪ್ರಥಮ ಬಾರಿಗೆ ಆದೇಶ ದೊರೆತ ರೈತರಿಗೆ ನೇರ ಕೊಳವೆಬಾವಿ ಖರೀದಿಗೆ ಅವಕಾಶ ಕಲ್ಪಿಸಿದೆ. ಖಾತೆಗೆ ನೇರ ಜಮಾ ಮಾಡುವ ವ್ಯವಸ್ಥೆ ಜಾರಿಗೆ ತಂದಿದ್ದೆ. ರೈತನಿಗೆ ಕೊಳವೆಬಾವಿ ಮಂಜೂರಾದರೆ, ಯಾವ ಏಜೆನ್ಸಿ ಮೂಲಕ ಕೂಡ ಕೊಳವೆವಾಗಿ ತೋಡಿಸಿಕೊಳ್ಳಬಹುದು ಎನ್ನುವ ವ್ಯವಸ್ಥೆ ಮಾಡಿದ್ದೇ ನಾನು. ಮಾಡಿದ ವ್ಯವಸ್ಥೆ ಇವತ್ತಿಗೂ ನಡೆಯುತ್ತಿದೆ." ಎಂದು ತಿಳಿಸಿದರು.

"ಸಿದ್ದರಾಮಯ್ಯನವರೇ ಭೋವಿ ನಿಗಮದ ವ್ಯವಹಾರ ಆರೋಪ ಮಾಡಿದ್ದೀರಿ. ಆದರೆ ಕೋಟ ಶ್ರೀನಿವಾಸ ಪೂಜಾರಿ ಸಮಾಜ ಕಲ್ಯಾಣ ಮಂತ್ರಿಯಾಗಿದ್ದಾಗ ಹಗರಣ ಆಗಿಲ್ಲ ಎಂದು ಅಧಿಕಾರಿಗಳು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳೇ ಹೇಳಿದ್ದಾರೆ. ಒಂದೇ ಒಂದು ರೂಪಾಯಿ ದುರುಪಯೋಗ ಆಗಿಲ್ಲ ಎಂದು ಅಧಿಕಾರಿಗಳೇ ಹೇಳಿದ್ದಾರೆ. ಆದರೂ ನನ್ನ ಮೇಲೆ ಉದ್ದೇಶಪೂರ್ವಕವಾಗಿ ಆರೋಪ ಮಾಡುತ್ತಿದ್ದೀರಿ. ನಾನು ಸ್ಪಷ್ಟೀಕರಣ ಕೇಳಿ ನಿಮಗೆ ಪತ್ರ ಬರೆದಿದ್ದೇನೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಕೆಲ ಅಧಿಕಾರಿಗಳನ್ನು ನೇಮಕ ಮಾಡಿದ್ದರು. ಅಧಿಕಾರಿಗಳು ದುರ್ನಡತೆಯವರಾಗಿದ್ದರು. ಹಗರಣ ಮಾಡಿದ್ದರು. ಆದ್ದರಿಂದ ಅಧಿಕಾರಿಗಳನ್ನು ತಕ್ಷಣ ಅಮಾನತು ಮಾಡಿದ್ದೆ. ಅಲ್ಲದೆ ಈ ಪ್ರಕರಣದ ಸಿಐಡಿ ತನಿಖೆಗೆ ಆದೇಶ ಮಾಡಿದ್ದೆ" ಎಂದು ಹೇಳಿದರು.

ಇದನ್ನೂ ಓದಿ: ಮುಡಾ ಹಗರಣ: ಸಿದ್ದರಾಮಯ್ಯ ದಂಪತಿ ಸೇರಿ 6 ಮಂದಿ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ಮುಖಂಡ ದೂರು - Complaint to Lokayukta against CM

ETV Bharat Logo

Copyright © 2024 Ushodaya Enterprises Pvt. Ltd., All Rights Reserved.