ETV Bharat / state

ವಿದ್ಯಾರ್ಥಿನಿಗೆ ಆ್ಯಸಿಡ್ ಎರಚಿದ ಆರೋಪಿ ಬಗ್ಗೆ ಸಿಸಿಟಿವಿಯಲ್ಲಿ ಸಿಕ್ಕಿದೆ ಮಹತ್ವದ ಸಾಕ್ಷಿ - Malappuram

ಕಡಬದ ಸರ್ಕಾರಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬರಿಗೆ ಆ್ಯಸಿಡ್ ಎರಚಿದ ಆರೋಪಿಯ ಚಲನವಲನ ಬೇಕರಿಯೊಂದರ ಸಿಸಿಟಿವಿಯಲ್ಲಿ ಪತ್ತೆಯಾಗಿದೆ.

ಕಡಬ
ಕಡಬ
author img

By ETV Bharat Karnataka Team

Published : Mar 5, 2024, 8:33 PM IST

Updated : Mar 6, 2024, 5:51 PM IST

ಕಡಬ (ದಕ್ಷಿಣ ಕನ್ನಡ) : ಕಡಬದ ಸರ್ಕಾರಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬರನ್ನು ಗುರಿಯಾಗಿಸಿ ಸೋಮವಾರ ಬೆಳಗ್ಗೆ ನಡೆದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿ ಎಂಬಿಎ ವಿದ್ಯಾರ್ಥಿ ಆಬೀನ್​ ಕೃತ್ಯ ಎಸಗಲೆಂದು ಭಾನುವಾರ ತನ್ನ ಹುಟ್ಟೂರಾದ ಕೇರಳದಿಂದ ಮಂಗಳೂರಿಗೆ ರೈಲಿನಲ್ಲಿ ಬಂದಿದ್ದು, ನಂತರ ಕಡಬಕ್ಕೆ ಬಂದಿದ್ದಾರೆ. ಅಲ್ಲಿನ ಬೇಕರಿಯೊಂದರ ಸಿಸಿಟಿವಿಯಲ್ಲಿ ಈತನ ಚಲನವಲನಗಳು ಪತ್ತೆಯಾಗಿದೆ.

ಆಬೀನ್ ಕೇರಳದ ಮಲಪ್ಪುರಂ ಜಿಲ್ಲೆಯ ನಿಲಂಬೂರು ತಾಲೂಕು ನಿವಾಸಿ. ಭಾನುವಾರ ಮಧ್ಯಾಹ್ನ ರೈಲಿನ ಮೂಲಕ ನಿಲಂಬೂರಿನಿಂದ ಹೊರಟ ಅವರು ರಾತ್ರಿ ವೇಳೆ ಮಂಗಳೂರು ರೈಲು ನಿಲ್ದಾಣ ತಲುಪಿದ್ದರು. ಅಲ್ಲಿಯೇ ಬೆಳಿಗ್ಗೆಯವರೆಗೆ ಕಾಲ ಕಳೆದ ಅವರು, ಬಳಿಕ ಮಂಗಳೂರಿನಿಂದ ಬಸ್​ನಲ್ಲಿ ಕಡಬಕ್ಕೆ ಆಗಮಿಸಿದ್ದಾರೆ ಎಂಬುದು ತಿಳಿದುಬಂದಿದೆ.

ಆಬೀನ್​ ಕಾಲೇಜ್‌ ಪ್ರವೇಶಿಸುವುದಕ್ಕೆ ಮುಂಚೆ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಮವಸ್ತ್ರ ಹೋಲುವ ಬಿಳಿ ಅಂಗಿ, ನೀಲಿ ಪ್ಯಾಂಟ್ ಧರಿಸಿಕೊಂಡು ಶಾಲಾ ಆವರಣ ಪ್ರವೇಶಿಸಿದ್ದಾರೆ. ಇದಕ್ಕೆ ಮುಂಚೆ ಈತ ಕಡಬದ ಕೆಳಗಿನ ಬಸ್‌ ನಿಲ್ದಾಣದ ಬಳಿ ಬೇಕರಿಯಲ್ಲಿ ತನ್ನಲ್ಲಿದ್ದ ಎರಡು ಮೊಬೈಲ್‌ ಫೋನ್​ಗಳನ್ನು ಚಾರ್ಜ್‌ಗಿಟ್ಟಿದ್ದರು. ಈ ವೇಳೆಯೂ ಆತ ಕಪ್ಪು ಫ್ಯಾಂಟ್‌ ಹಾಗೂ ಕಪ್ಪು ಅಂಗಿ ಧರಿಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೇಕರಿಗೆ ಅವರು ಬೆಳಗಿನ ಜಾವ 8 ಗಂಟೆ ಸುಮಾರಿಗೆ ಬಂದಿದ್ದಾರೆ. ಫೋನ್‌ ಚಾರ್ಜ್‌ಗಿಟ್ಟು, ಅಲ್ಲಿಯೇ ಒಂದು ಬ್ಯಾಗನ್ನು ಬಿಟ್ಟಿದ್ದಾರೆ. ಆ ಬಳಿಕ ಬ್ಯಾಗಿನಿಂದ ಯಾವುದೋ ವಸ್ತುವನ್ನು ಪ್ಯಾಂಟ್ ಪಾಕೇಟಿಗೆ ಹಾಕಿ, ಅಲ್ಲಿಂದ ಹೊರನಡೆದಿದ್ದಾರೆ. ಇದು ಆ್ಯಸಿಡ್​ ಬಾಟಲಿ ಎಂಬುದು ತಿಳಿದು ಬಂದಿದೆ.

ನಂತರದಲ್ಲಿ ಅವರು ಈ ಕಪ್ಪು ಬಣ್ಣದ ಬಟ್ಟೆಯನ್ನು ತಹಶೀಲ್ದಾರ್ ಕಚೇರಿ ಸಮೀಪದಲ್ಲಿರುವ ಮನೆಯೊಂದರ ಬಳಿ ಬಿಚ್ಚಿ ಅಲ್ಲಿಂದ ಯೂನಿಫಾರ್ಮ್ ಬಟ್ಟೆ ಧರಿಸಿರಬೇಕು ಎಂದು ಅನುಮಾನಿಸಲಾಗಿದೆ. ಈ ಬಗ್ಗೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹಾಲ್​ಗೆ ತೆರಳುವ ಕೊನೆ ಕ್ಷಣವನ್ನೇ ಕೃತ್ಯಕ್ಕೆ ಆಯ್ಕೆ : ವಿದ್ಯಾರ್ಥಿಗಳೆಲ್ಲರೂ ಪರೀಕ್ಷಾ ಹಾಲ್‌‌ಗೆ ತೆರಳುವ ತರಾತುರಿಯಲ್ಲಿದ್ದರಿಂದ ಹಾಗೂ ಶಿಕ್ಷಕರು ಪರೀಕ್ಷೆಗೆ ಕೊನೆ ಕ್ಷಣದ ತಯಾರಿಯಲ್ಲಿ ಮಗ್ನವಾಗಿದ್ದರಿಂದ ಕೃತ್ಯ ಎಸಗಿ ಪರಾರಿಯಾಗಬಹುದು ಎಂಬ ಹವಣಿಕೆಯಲ್ಲಿ ಈತ ಇದಕ್ಕಾಗಿಯೇ ಹಾಲ್‌‌ಗೆ ತೆರಳುವ ಕೊನೆ ಕ್ಷಣವನ್ನೇ ಆಯ್ಕೆ ಮಾಡಿದ್ದ. ಆದರೆ, ಇಲ್ಲಿ ಮಾತ್ರ ಲೆಕ್ಕಾಚಾರ ವಿಫಲವಾಗಿದೆ. ವಿದ್ಯಾರ್ಥಿಗಳು ಈತನನ್ನು ಹಿಡಿದಿದ್ದರು.

ಸಂತ್ರಸ್ತ ವಿದ್ಯಾರ್ಥಿನಿಯರು ಕಲಿಯುತ್ತಿದ್ದ ಕಡಬದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈ ವರ್ಷದ ಅಂತಿಮ ಪರೀಕ್ಷೆ ನಡೆಯುತ್ತಿದೆ. ಈ ಕಾಲೇಜು ಸೇರಿದಂತೆ ವಲಯದ ಮೂರು ಕಾಲೇಜಿನ ವಿದ್ಯಾರ್ಥಿಗಳಿಗೆ ಈ ಕಾಲೇಜು ಪ್ರಮುಖ ಪರೀಕ್ಷಾ ಕೇಂದ್ರವಾಗಿತ್ತು. ಹೀಗಾಗಿ ಪರೀಕ್ಷಾ ಸಮಯ ಈ ಕಾಲೇಜಿಗೆ ಉಳಿದ ಕಾಲೇಜ್‌ನ ಇತರ ವಿದ್ಯಾರ್ಥಿಗಳು ಬರುವ ಕಾರಣ ಈತನ ಬಗ್ಗೆ ಯಾರಿಗೂ ಅನುಮಾನ ಉಂಟಾಗಲು ಸಾಧ್ಯವಿಲ್ಲ. ಹೀಗಾಗಿ ಯಾರಿಗೂ ಅನುಮಾನ ಬಾರದಂತೆ ಕೃತ್ಯ ಎಸಗಲು ಈತ ಎಕ್ಸಾಂ ದಿನವನ್ನೇ ಆಯ್ಕೆ ಮಾಡಿಕೊಂಡಿದ್ದರು ಎಂಬುದು ತಿಳಿದುಬಂದಿದೆ.

ಕಡಬದಿಂದಲೇ ಖರೀದಿಸಿದ್ದ ಆ್ಯಸಿಡ್ : ಬೆಳಗ್ಗೆ 7.30ರ ಸುಮಾರಿಗೆ ಬಂದಿಳಿದ ಆರೋಪಿಯು ಬಳಿಕ ಕಡಬ ಪೇಟೆಯ ಅಂಗಡಿಯೊಂದರಿಂದಲೇ ಆ್ಯಸಿಡ್ ಖರೀದಿಸಿದ್ದರು. ಈ ಬಗ್ಗೆ ಆರೋಪಿಯು ಪೊಲೀಸರ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ವೇಳೆ ಕಡಬದಲ್ಲಿ ಆ್ಯಸಿಡ್​ ಅಂಗಡಿಗಳು ಓಪನ್ ಆಗುವುದು ವಿರಳ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪರಿಚಯ ಪ್ರೇಮಕ್ಕೆ ತಿರುಗಿತ್ತು : ಕಡಬ ತಾಲೂಕಿನ ರೆಂಜಿಲಾಡಿ ನಿವಾಸಿಯಾಗಿರುವ ಪ್ರಧಾನ ಸಂತ್ರಸ್ತೆಯನ್ನು ಕಳೆದ ಎರಡು ವರ್ಷಗಳಿಂದ ಆರೋಪಿ ಪೀತಿಸುತ್ತಿದ್ದ ಎನ್ನಲಾಗಿದೆ. ವಿದ್ಯಾರ್ಥಿನಿಯ ತಾಯಿ ಮೂಲತಃ ಕೇರಳದವರು. ಆರೋಪಿ ಆಬೀನ್ ಕೂಡಾ ಆಕೆಯ ಮನೆಯ ಹತ್ತಿರದ ನಿವಾಸಿ ಎಂಬುದು ತಿಳಿದು ಬಂದಿದೆ.

ವಿದ್ಯಾರ್ಥಿನಿಯ ಸಂಬಂಧಿಕರು ಆರೋಪಿಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಅವರ ಮುಖಾಂತರ ಸಂತ್ರಸ್ತ ವಿದ್ಯಾರ್ಥಿನಿಯ ಪರಿಚಯವಾಗಿ ಪ್ರೇಮಕ್ಕೆ ತಿರುಗಿತ್ತು. ಈ ವಿಚಾರ ಯುವತಿಯ ತಾಯಿಗೆ ಗೊತ್ತಾಗಿ ಇದನ್ನು ಆಕ್ಷೇಪಿಸಿದ್ದರು. ಇದೇ ಕಾರಣಕ್ಕೆ ಯುವತಿ ಈತನನ್ನು ಉಪೇಕ್ಷೆ ಮಾಡುತ್ತಿದ್ದರು ಎಂದು ಹೇಳಲಾಗಿದ್ದು, ಇದರಿಂದ ಕುಪಿತಗೊಂಡು ಆರೋಪಿ ಆ್ಯಸಿಡ್ ದಾಳಿಯ ಕೃತ್ಯ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ : ಕಡಬದಲ್ಲಿ ಆ್ಯಸಿಡ್ ದಾಳಿ ಪ್ರಕರಣ: ಎಂಬಿಎ ವಿದ್ಯಾರ್ಥಿಯಿಂದ ಕೃತ್ಯ

Last Updated : Mar 6, 2024, 5:51 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.