ಹಾಸನ : ಮಾಜಿ ಪ್ರಿಯಕರನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ಮನುಕುಮಾರ್ ಪ್ರಿಯತಮೆ ಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ತಿಳಿಸಿದರು.
ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮನುಕುಮಾರ್ ಮತ್ತು ಭವಾನಿ ಇಬ್ಬರೂ ಎ. ಗುಡುಗನಹಳ್ಳಿ ಗ್ರಾಮದ ಒಂದೇ ಊರಿನ ಅಕ್ಕಪಕ್ಕದ ಮನೆಯವರು. ಕಳೆದ 8 ವರ್ಷಗಳಿಂದಲೂ ಇಬ್ಬರಲ್ಲೂ ಪ್ರೀತಿ ಬೆಳೆದಿತ್ತು. ಇವರಿಬ್ಬರು 8 ವರ್ಷದಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದು, ಕೆಲ ದಿನಗಳ ಹಿಂದೆ ಪ್ರೀತಿ ನಿರಾಕರಿಸಿರುವುದು ಈ ಘಟನೆಗೆ ಕಾರಣವಾಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮನುಕುಮಾರ್ ಶಸ್ತ್ರ ಚಿಕಿತ್ಸೆ ಪಡೆದಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದರು.
ಇತ್ತೀಚಿಗೆ ಮನುಕುಮಾರ್ ತನ್ನ ಪ್ರೀತಿಯನ್ನು ನಿರಾಕರಿಸಿದ್ದೆ ಭವಾನಿ ಚಾಕು ಇರಿತಕ್ಕೆ ಕಾರಣ ಎಂದು ಮನುಕುಮಾರ್ ಸ್ನೇಹಿತ ರವಿ ದೂರಿನಲ್ಲಿ ಹೇಳಿಕೆ ನೀಡಿದ್ದು, ಅದರ ಆಧಾರದ ಮೇಲೆ ಪ್ರಕರಣ ದಾಖಲು ಮಾಡಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ : ಹುಬ್ಬಳ್ಳಿ : ಅಯೋಧ್ಯೆ ನಗರದಲ್ಲಿ ಚಾಕು ಇರಿತ ಪ್ರಕರಣ; ಏಳು ಜನ ಆರೋಪಿಗಳ ಬಂಧನ - SEVEN ACCUSED ARRESTED