ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಮತ್ತೆ ಐದು ದಿನಗಳ ಕಾಲ ಜಾರಿ ನಿರ್ದೇಶನಾಲಯ (ಇ.ಡಿ) ದ ವಶಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಇಡಿ ಕಸ್ಟಡಿ ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ನಾಗೇಂದ್ರ ಅವರನ್ನ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.
ಜುಲೈ 12 ರಂದು ಮುಂಜಾನೆ ಡಾಲರ್ಸ್ ಕಾಲೋನಿಯಲ್ಲಿರುವ ನಾಗೇಂದ್ರ ಅವರ ನಿವಾಸದಲ್ಲಿ ವಶಕ್ಕೆ ಪಡೆದಿದ್ದ ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಬಳಿಕ ಜುಲೈ 13 ರಂದು ಸಂಪಿಗೆಹಳ್ಳಿಯಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಜುಲೈ 18 ರವರೆಗೆ ವಶಕ್ಕೆ ಪಡೆದುಕೊಂಡಿದ್ದರು.
ನಿಗಮದ ಖಾತೆಯಿಂದ ಅಕ್ರಮವಾಗಿ ವರ್ಗಾವಣೆಯಾಗಿದ್ದ ಕೋಟ್ಯಂತರ ರೂಪಾಯಿ ಹಣವನ್ನ ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮದ್ಯ ಖರೀದಿಗೆ ಬಳಸಲಾಗಿತ್ತು ಎಂಬ ಮಾಹಿತಿಯನ್ನ ಜಾರಿ ನಿರ್ದೇಶನಾಲಯದ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿತ್ತು.
ಇದನ್ನೂ ಓದಿ : ಮಾಜಿ ಸಚಿವ ನಾಗೇಂದ್ರ ಕುಟುಂಬಸ್ಥರ ಬ್ಯಾಂಕ್ ವಹಿವಾಟಿನ ಬಗ್ಗೆ ED ತನಿಖೆ - Valmiki Corporation Scam