ETV Bharat / state

ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ವಿಧಿವಶ

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮಾಜಿ ಸಚಿವ ಮನೋಹರ್ ತಹಶೀಲ್ದಾರ್
ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (ETV Bharat)
author img

By ETV Bharat Karnataka Team

Published : 5 hours ago

ಹಾವೇರಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್‌ (80) ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಚಾಮರಾಜಪೇಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಇಂದು ಮಧ್ಯಾಹ್ನ ಪಾರ್ಥಿವ ಶರೀರವನ್ನು ಹಾವೇರಿ ಜಿಲ್ಲೆ ಹಾನಗಲ್​ಗೆ ರವಾನಿಸಲಾಗುತ್ತದೆ. ಎನ್​ಸಿಜೆಸಿ ಮಹಾವಿದ್ಯಾಲಯದ ಅವರಣದಲ್ಲಿ ಅಂತಿಮ ದರ್ಶನಕ್ಕೆ‌ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಬಳಿಕ ಹುಟ್ಟೂರು ಅಕ್ಕಿಹೊಳಿ ಗ್ರಾಮದ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಮೃತರು ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಶಿಕ್ಷಣ, ರಾಜಕೀಯ ಹಾದಿ: ಬಿಇ ಮೆಕ್ಯಾನಿಕಲ್ ಪದವೀಧರರಾಗಿದ್ದ ಮನೋಹರ್‌ ತಹಶೀಲ್ದಾರ್‌ ಹಾನಗಲ್ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. 1978ರಲ್ಲಿ ಮೊದಲ ಬಾರಿಗೆ ಹಾನಗಲ್‌ ವಿಧಾನಸಭೆ ಕ್ಷೇತ್ರದಿಂದ ಗೆದ್ದಿದ್ದರು. ಬಳಿಕ 1989, 1999, 2013 ಸೇರಿ ಗೆಲುವು ಸಾಧಿಸಿದ್ದರು. ಎಸ್‌.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ವಿಧಾನಸಭೆಯ ಉಪಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದರು. 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿ ಕೆಲಸ ಮಾಡಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ನಂತರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು.

ಬಲಿಜ ಸಮುದಾಯದವರಾದ ಮನೋಹರ್‌ ತಹಶೀಲ್ದಾರ್‌, ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ದಿ.ಸಿ.ಎಂ.ಉದಾಸಿ ಅವರಿಗೆ ನಾಲ್ಕು ದಶಕಗಳ ಕಾಲ ರಾಜಕೀಯ ಎದುರಾಳಿಯಾಗಿದ್ದರು. ಉದಾಸಿ 2021ರಲ್ಲಿ ಮೃತಪಟ್ಟಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.