ಬಂಟ್ವಾಳ: ನಾವು ಇಡಿ ಅಧಿಕಾರಿಗಳು ಎಂದು ನಂಬಿಸಿ ಉದ್ಯಮಿಯ ಮನೆಗೆ ದಾಳಿ ನಡೆಸಿ ಬರೋಬ್ಬರಿ 30 ಲಕ್ಷ ರೂ. ಲೂಟಿ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಸುಲೈಮಾನ್ ಹಾಜಿ ಅವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ತಡರಾತ್ರಿ ಅವರ ಮನೆಗೆ ತಮಿಳುನಾಡು ಮೂಲದ ಕಾರ್ನಲ್ಲಿ ಆಗಮಿಸಿದ ತಂಡ ದಿಡೀರ್ ದಾಳಿ ನಡೆಸಿದೆ. ನಾವು ಇಡಿ ಅಧಿಕಾರಿಗಳು ಎಂದು ನಂಬಿಸಿ ಎರಡು ಗಂಟೆಗಳ ವರೆಗೆ ತನಿಖೆ ನಡೆಸಿದೆ. ಮನೆಯಲ್ಲಿದ್ದ ಸುಮಾರು 30ಲಕ್ಷ ರೂಪಾಯಿಗಳನ್ನು ದೋಚಿ ಪರಾರಿಯಾಗಿದೆ.

ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದು ತನಿಖೆ ನಡೆಯುತ್ತಿದೆ.
ಇದನ್ನೂ ಓದಿ: ಬಳ್ಳಾರಿ: ಯುವತಿಯ ಕುಟುಂಬದವರ ಮೇಲೆ ಹಲ್ಲೆ ಬಳಿಕ ಭಗ್ನ ಪ್ರೇಮಿ ಆತ್ಮಹತ್ಯೆ