ETV Bharat / state

ಚಾಮರಾಜನಗರ: ಸಿದ್ದರಾಮಯ್ಯ ಪೂರ್ಣಾವಧಿಗೆ ಸಿಎಂ ಆಗಿರಲೆಂದು ವಿಶೇಷ ಪೂಜೆ - Siddaramaiah Fans Offer Pooja

author img

By ETV Bharat Karnataka Team

Published : Aug 12, 2024, 4:35 PM IST

ಇಂದು ಶ್ರಾವಣ ಸೋಮವಾರ. ಸಿದ್ದರಾಮಯ್ಯ ಪೂರ್ಣಾವಧಿಗೆ ಸಿಎಂ ಆಗಿರಲೆಂದು ಚಾಮರಾಜನಗರದಲ್ಲಿ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.

SPECIAL WORSHIP  CM SIDDARAMAIAH FANS  CHAMARAJANAGARA
ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಿರಲೆಂದು ಅಭಿಮಾನಿಗಳಿಂದ ವಿಶೇಷ ಪೂಜೆ (ETV Bharat)

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯನವರ 77ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿ ಬಳಗದ ವತಿಯಿಂದ ಚಾಮರಾಜನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ಸಿದ್ದರಾಮಯ್ಯ ಅಭಿಮಾನಿ ಬಳಗದ ಅಧ್ಯಕ್ಷ ಬೆಳ್ಳೇಗೌಡ ನೇತೃತ್ವದಲ್ಲಿ ವಿವಿಧ ಬಗೆಯ ಅಭಿಷೇಕ, ಅರ್ಚನೆ ನೆರವೇರಿತು.

ಈ ವೇಳೆ ಅಭಿಮಾನಿಗಳು ಮಾತನಾಡಿ, ನಾಡಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟುಹಬ್ಬದ ಅಂಗವಾಗಿ ಶ್ರೀ ಚಾಮರಾಜೇಶ್ವರಸ್ವಾಮಿಗೆ ವಿಶೇಷಪೂಜೆ ಸಲ್ಲಿಸಿದ್ದೇವೆ. ಸಿದ್ದರಾಮಯ್ಯನವರಿಗೆ ಸ್ವಾಮಿ ಹೆಚ್ವಿನ ಆರೋಗ್ಯ, ಆಯಸ್ಸು ಕರುಣಿಸಲಿ. 5 ವರ್ಷಗಳ ಕಾಲ ಪೂರ್ಣಾವಧಿ ಮುಖ್ಯಮಂತ್ರಿಯಾಗಿರಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು.

ಯಾವುದೇ ಷಡ್ಯಂತ್ರಗಳು ಫಲಸದೇ, ಶತ್ರುಗಳ ಆಸೆ ಈಡೇರದೇ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲೆಂದು ಆಶೀಸಿದರು.

ತಾಲೂಕು ಕುರುಬರ ಸಂಘದ ಅಧ್ಯಕ್ಷ ಉಮೇಶ್ ಎಸ್​ಪಿಕೆ, ಅಭಿಮಾನಿ ಬಳಗದ ಪ್ರಧಾನ ಕಾರ್ಯದರ್ಶಿ ಕುದೇರು ಲಿಂಗಣ್ಣ ಇದ್ದರು.

ಇದನ್ನೂ ಓದಿ: ತುಂಗಭದ್ರಾ ಡ್ಯಾಂನ ಗೇಟ್​ನ ತುಂಡಾದ ಚೈನ್​ನ್ನು ನಾಲ್ಕೈದು ದಿನದಲ್ಲಿ ರಿಪೇರಿ ಮಾಡ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್ - Tungabhadra Dam

ETV Bharat Logo

Copyright © 2024 Ushodaya Enterprises Pvt. Ltd., All Rights Reserved.