ETV Bharat / state

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ - elephant attack - ELEPHANT ATTACK

ಕೂಲಿ ಕಾರ್ಮಿಕರೊಬ್ಬರನ್ನು ಕಾಡಾನೆ ತುಳಿದು ಸಾಯಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ
ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ (ETV Bharat)
author img

By ETV Bharat Karnataka Team

Published : May 5, 2024, 8:20 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಚಿಕ್ಕಮಗಳೂರು ತಾಲೂಕು ಆಲ್ದೂರು ಸಮೀಪದ ಕಂಚಿನಕಲ್ ದುರ್ಗದ ಬಳಿ ಕೂಲಿ ಕಾರ್ಮಿಕರೊಬ್ಬರನ್ನು ಕಾಡಾನೆ ತುಳಿದು ಸಾಯಿಸಿದೆ. ಆನಂದ ಪೂಜಾರಿ(55) ಮೃತಪಟ್ಟ ಕೂಲಿ ಕಾರ್ಮಿಕ. ಭಾನುವಾರ ಮುಂಜಾನೆ ಆನಂದ ಪೂಜಾರಿ ಅವರು ತೋಟದ ಕೆಲಸಕ್ಕೆ ತೆರಳುತ್ತಿದ್ದರು. ಆಗ ಕಾಡಾನೆ ದಾಳಿ ನಡೆಸಿದೆ‌. ಕಾಡಾನೆಯ ದಾಳಿಯಿಂದ ಆನಂದ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನೂರ್ ಅಹಮ್ಮದ್ ಎಂಬುವರಿಗೆ ಸೇರಿದ ಕೆಸುವಿನಕಲ್ ಎಸ್ಟೇಟ್‌ನಲ್ಲಿ ಈ ದುರ್ಘಟನೆ ನಡೆದಿದ್ದು, ಮೃತ ಆನಂದ ಪೂಜಾರಿ ಹಲವು ವರ್ಷಗಳಿಂದ ಈ ಎಸ್ಟೇಟ್‌ ನಲ್ಲಿ ಕೆಲಸ ಮಾಡುತ್ತಿದ್ದರು. ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಸದಸ್ಯ ರಾಜು ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗೆ, ಆಲ್ದೂರು ಭಾಗದಲ್ಲಿ ಇಬ್ಬರನ್ನು ಕಾಡಾನೆ ತುಳಿದು ಸಾಯಿಸಿತ್ತು. ಸದ್ಯ ಈ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ.

ಯುವಕ ಆತ್ಮಹತ್ಯೆ: ಮತ್ತೊಂದೆಡೆ, ಕೌಟುಂಬಿಕ ಕಲಹ ಹಿನ್ನೆಲೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳಸ ತಾಲೂಕಿನ ಕಗ್ಗನಳ್ಳದಲ್ಲಿ ನಡೆದಿದೆ. ಸತೀಶ್(25) ಆತ್ಮಹತ್ಯೆಗೆ ಶರಣಾಗಿರುವ ಯುವಕ. ವಿಷಯ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಕಳಸ ಪೊಲೀಸರು ಸ್ಥಳೀಯರ ಸಹಾಯದೊಂದಿಗೆ ಸತತ ನಾಲ್ಕು ಗಂಟೆ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ಮೃತದೇಹವನ್ನು ಕಳಸ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಳಸ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಆಹಾರ, ನೀರು ಅರಸಿ ನಾಡಿಗೆ ಬಂದ ಕಾಡಾನೆ: ಮನೆ ಅಂಗಳದಲ್ಲಿ ಮಲಗಿದ್ದ ವೃದ್ಧೆ ಮೇಲೆ ದಾಳಿ - ವಿಡಿಯೋ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.