ETV Bharat / state

ಅಪಘಾತದಲ್ಲಿ ಗಾಯಗೊಂಡ ರೈತ ಮುಖಂಡ ಕುರುಬೂರು ಶಾಂತಕುಮಾರ್ ಬೆಂಗಳೂರಿಗೆ ಏರ್​ಲಿಫ್ಟ್ - KURUBURU SHANKUMAR AIRLIFTED

ಪಂಜಾಬ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಏರ್ ಲಿಫ್ಟ್ ಮೂಲಕ ಕರೆತಂದು ಆಸ್ಪತ್ರೆಗೆ ದಾಖಲಿಸಲಾಗಿದೆ.

farmer-leader-kuruburu-shankumar-who-injured-in-punjab-accident-airlifted-to-bengaluru
ಕುರುಬೂರು ಶಾಂತಕುಮಾರ್ (File Photo)
author img

By ETV Bharat Karnataka Team

Published : Feb 16, 2025, 6:58 PM IST

ಬೆಂಗಳೂರು: ಪಂಜಾಬ್‌ನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಏರ್ ಆಂಬ್ಯುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರಲಾಗಿದೆ.‌

ಚಿಕಿತ್ಸೆಗಾಗಿ ಶಾಂತಕುಮಾರ್ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದೇ ವೇಳೆ, ಶಾಂತಕುಮಾರ್ ಅವರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾರೈಸಿದ್ದಾರೆ.

ಮೂರು ದಿನಗಳ ಹಿಂದೆ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಶಾಂತಕುಮಾರ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಏರ್ ಆಂಬ್ಯುಲೆನ್ಸ್ ಮೂಲಕ ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದರು.

farmer-leader-kuruburu-shankumar-who-injured-in-punjab-accident-airlifted-to-bengaluru
ಕುರುಬೂರು ಶಾಂತಕುಮಾರ್ ಏರ್ ಲಿಫ್ಟ್ (ETV Bharat)

ಈ ಮಧ್ಯೆ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರಾದ ಇಂಕೊಂಗ್ಲ ಜಮೀರ್ ಅವರು ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪಟಿಯಾಲದ ಆಸ್ಪತ್ರೆ ವೈದ್ಯರ ಜೊತೆ ಸತತ ಸಂಪರ್ಕದಲ್ಲಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಅಧಿಕಾರಿಗಳು ನಿನ್ನೆ ಏರ್ ಆಂಬ್ಯುಲೆನ್ಸ್ ಸಜ್ಜುಗೊಳಿಸಿದ್ದರು. ಇಬ್ಬರು ಸಹಾಯಕರು ಹಾಗೂ ವೈದ್ಯರ ತಂಡದೊಂದಿಗೆ ಇಂದು ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ.

ಇದನ್ನೂ ಓದಿ: ಕುರುಬೂರು ಶಾಂತಕುಮಾರ್​ಗೆ ಗಂಭೀರ ಗಾಯ: ಏರ್ ಆಂಬ್ಯುಲೆನ್ಸ್​ನಲ್ಲಿ ಕರೆತರಲು ವ್ಯವಸ್ಥೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.